NEWS

2030ರ ವೇಳೆಗೆ ಶೇ.30 ರಷ್ಟು ಎಲೆಕ್ಟ್ರಿಕ್ ವಾಹನಗಳ ಬಳಕೆ: ಕೇಂದ್ರ ಸಚಿವ ಎಚ್‌ಡಿಕೆ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕನಸಿನಂತೆ 2030ರ ವೇಳೆಗೆ ಶೇ.30 ರಷ್ಟು ಎಲೆಕ್ಟ್ರಿಕ್ ವಾಹನಗಳನ್ನು ದೇಶದಲ್ಲಿ ಬಳಕೆ ಮಾಡಲು ಗುರಿ ನಿಗದಿಪಡಿಸಲಾಗಿದ್ದು, ಆ ಗುರಿ ಮುಟ್ಟಲು ಸರ್ವ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ವಿಶ್ವ EV (ಎಲೆಕ್ಟ್ರಿಕ್ ವಾಹನ) ದಿನದ ಅಂಗವಾಗಿ ಭಾರತೀಯ ಅಟೋಮೊಬೈಲ್ ಸೊಸೈಟಿ (Society of Indian Automobile Manufacturers-SIAM) ಹಮ್ಮಿಕೊಂಡಿದ್ದ ಎರಡನೇ ಆವೃತ್ತಿಯ ಎಲೆಕ್ಟ್ರಿಕ್ ವಾಹನಗಳ ರ‍್ಯಾಲಿಗೆ ದೆಹಲಿಯ ಭಾರತ್ ಮಂಟಪದಲ್ಲಿ ಚಾಲನೆ ನೀಡುವ ಮುನ್ನ ಮಾತನಾಡಿದರು.

ಪ್ರಧಾನಿಗಳು ನಿಗದಿಪಡಿಸಿರುವ ಗುರಿ ಮುಟ್ಟಲು ಈಗಾಗಲೇ ಅನೇಕ ನೀತಿಗಳನ್ನು ರೂಪಿಸಲಾಗಿದ್ದು, ಹಲವಾರು ಉಪಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಎಲೆಕ್ಟ್ರಿಕ್‌ ವಾಹನ (EV) ಉದ್ಯಮವೂ ಭಾರತದಲ್ಲಿ ವೇಗದಲ್ಲಿ ಬೆಳೆಯುತ್ತಿದೆ. ಜತೆಗೆ ಪರಿಸರಕ್ಕೆ ಪೂರಕವಾದ ರೀತಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ತಯಾರಿಕೆಗೆ ಸರ್ಕಾರ ಪ್ರೋತ್ಸಾಹ ನೀಡುತ್ತಿದ್ದು, ಗ್ರಾಹಕರಿಗೆ ಸುಲಭವಾಗಿ ಕೈಗೆಟುಕುವಂತೆ ಕ್ರಮ ವಹಿಸಲಾಗಿದೆ ಎಂದರು.

ಮುಂದಿನ ಪೀಳಿಗೆಯ ಇಂಧನ ಕ್ಷಮತೆ ತಂತ್ರಜ್ಞಾನ ಅಭಿವೃದ್ಧಿಗೆ ಒತ್ತು ನೀಡುವ ಹಿನ್ನೆಲೆಯಲ್ಲಿ ಸುಧಾರಿತ ಬ್ಯಾಟರಿ ಸೆಲ್‌ಗಳಿಗೆ (ACC) ಪ್ರೊಡಕ್ಷನ್ ಲಿಂಕ್ಡ್ ಇನ್ಸೆಂಟಿವ್ ((PLI) ಯೋಜನೆಯನ್ನು ಜಾರಿ ಮಾಡಲಾಗಿದೆ. ₹18,100 ಕೋಟಿ ಗುರಿಯ ಅನುದಾನ ಹೊಂದಿರುವ ಈ ಯೋಜನೆಯು 50 ಗಿಗಾ ವ್ಯಾಟ್-ಗೋಚಾರ್ (GWh) ಉತ್ಪಾದನಾ ಸಾಮರ್ಥ್ಯವನ್ನು ಹೊಂದಲು ಉದ್ದೇಶಿಸಲಾಗಿದೆ. ಮೂರು ಕಂಪನಿಗಳು ಈಗಾಗಲೇ 30 GWh ನೀಡಲು ಸಾಮರ್ಥ್ಯ ಹೊಂದಿವೆ ಎಂದು ತಿಳಿಸಿದರು.

FAME-II ಯೋಜನೆಯು ಎಲೆಕ್ಟ್ರಿಕ್ ಮತ್ತು ಹೈಬ್ರಿಡ್ ವಾಹನಗಳ ತಯಾರಿಕೆಗೆ ಕೊಡಲಾಗುತ್ತಿರುವ ಪ್ರೋತ್ಸಾಹವನ್ನು ಮುಂದುವರಿಸಲಾಗುವುದು. ಇದಕ್ಕೆ ₹15,500 ಕೋಟಿ ಹಣವನ್ನು ಒದಗಿಸಲು ಬಜೆಟ್ ನಿರ್ಧರಿಸಲಾಗಿದ್ದು , ಮಾಲಿನ್ಯ ಕಡಿಮೆ ಮಾಡುವುದು ಮತ್ತು ದೇಶಾದ್ಯಂತ ಸಾರ್ವಜನಿಕ ಸಾರಿಗೆಯನ್ನು ವಿದ್ಯುದೀಕರಿಸಲು ಈ ಮೊತ್ತವನ್ನು ಮೀಸಲಿಡಲಾಗಿದೆ ಎಂದು ಮಾಹಿತಿ ನೀಡಿದರು.

ಇದರೊಂದಿಗೆ ಮಾರ್ಚ್ 2024ರಲ್ಲಿ ಆರಂಭವಾದ ಎಲೆಕ್ಟ್ರಿಕ್ ಮೊಬಿಲಿಟಿ ಪ್ರೋತ್ಸಾಹ ಯೋಜನೆಗೆ (EMPS) ಸರ್ಕಾರ ಹೆಚ್ಚು ಒತ್ತು ನೀಡಿದೆ. ವರ್ಷದಿಂದ ವರ್ಷಕ್ಕೆ ಇದು ವೃದ್ಧಿಯಾಗುತ್ತಲೇ ಇದೆ. ದೇಶದಲ್ಲಿ ಎಲೆಕ್ಟ್ರಿಕ್ ವಾಹನಗಳ ವ್ಯಾಪಕ ಬಳಕೆಗಾಗಿ ಸರ್ಕಾರದ ಅಚಲ ಬದ್ಧತೆ ಹೊಂದಿದೆ ಎಂದು ಹೇಳಿದರು.

ಈ ಕಾರ್ಯಕ್ರಮದಲ್ಲಿ ಫಾರ್ಮುಲಾ ಒನ್ ರೇಸರ್ ಕಾರ್ತಿಕ್ ನಾರಾಯಣ್, SIAM ಅಧ್ಯಕ್ಷ ವಿನೋದ ಅಗರ್ವಾಲ್, ಉಪಾಧ್ಯಕ್ಷ ಶೈಲೇಶ್ ಚಂದ್ರ, ನಿರ್ದೇಶಕರಾದ ರಾಜೇಶ್ ಮೆನನ್ ಮತ್ತು ಡೈರೆಕ್ಟರ್ ಜನರಲ್ ಪ್ರಶಾಂತ್ ಬ್ಯಾನರ್ಜಿ ಸೇರಿದಂತೆ ಉದ್ಯಮದ ಪ್ರಮುಖ ನಾಯಕರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ರ‍್ಯಾಲಿಗೆ ಹಸಿರು ನಿಶಾನೆ ತೋರಿಸುವ ಮುನ್ನ ಅವರು ಎಲೆಕ್ಟ್ರಿಕ್ ಆಟೋವನ್ನು ಚಾಲನೆ ಮಾಡಿದರು. ನಂತರ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಓಡಿಸುವ ಮೂಲಕ ಚಾಲನೆ ನೀಡಿದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು