NEWSಆರೋಗ್ಯನಮ್ಮರಾಜ್ಯ

ಡೆಂಗ್ಯೂನಿಂದ ಮೃತಪಟ್ಟವರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ, ರೋಗಿಗಳಿಗೆ ಖಾಸಗಿ ಆಸ್ಪತ್ರೆಯಲ್ಲಿ ಸರ್ಕಾರವೇ  ಚಿಕಿತ್ಸೆ ಕೊಡಿಸಬೇಕು: ಮೋಹನ್ ದಾಸರಿ ಆಗ್ರಹ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರಿನಲ್ಲಿ ಡೆಂಗ್ಯೂ ರೋಗ ಹಾವಳಿ ಮಿತಿ ಮೀರಿ ಹೆಚ್ಚಾಗುತ್ತಿದ್ದು ಬಿಬಿಎಂಪಿ ರೋಗವನ್ನು ನಿಯಂತ್ರಿಸುವಲ್ಲಿ ವಿಫಲವಾಗಿದೆ, ತನ್ನ ಕೆಲಸ ಮಾಡಲು ಕೈಲಾಗದೆ ಜನರೆಲ್ಲಾ ಸೇರಿ ರೋಗ ಕಡಿಮೆ ಮಾಡಬೇಕು ಎಂದು ಕಾರಣ ಕೊಡುತ್ತಿದೆ ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿ ಆಮ್ ಆದ್ಮಿ ಪಾರ್ಟಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು, ಈ ಸಂದರ್ಭದಲ್ಲಿ ಮಾತನಾಡಿದ ಮೋಹನ್ ದಾಸರಿ, ಬೆಂಗಳೂರಿನಲ್ಲಿ 2-3 ಸಾವಿರ ಡೆಂಗ್ಯೂ ಕೇಸ್‌ಗಳಿವೆ ಎಂದು ಬಿಬಿಎಂಪಿ ಹೇಳುತ್ತಿದೆ, ಆದರೆ ನಮಗಿರುವ ಮಾಹಿತಿ ಪ್ರಕಾರ 40,000 ರಿಂದ 50,000 ಪ್ರಕರಣಗಳಿವೆ ಎಂದರು.

ಆಸ್ಪತ್ರೆಗಳ ಮುಂದೆ ಜನ ಸಾಲುಗಟ್ಟಿ ನಿಂತಿದ್ದಾರೆ, ಡೆಂಗ್ಯೂ ನಿಯಂತ್ರಣಕ್ಕೆ ಜನ ನಮ್ಮ ಜೊತೆ ಕೈ ಜೋಡಿಸಬೇಕು ಎಂದು ಬಿಬಿಎಂಪಿ ಮನವಿ ಮಾಡುತ್ತಿದೆ, ಜನ ಮನೆಯಲ್ಲಿ ನಿಯಂತ್ರಣ ಮಾಡಬಹುದು ಆದರೆ ಸಾರ್ವಜನಿಕ ಸ್ಥಳಗಳಲ್ಲಿ ಯಾರು ನಿಯಂತ್ರಿಸಬೇಕು, ಬಿಬಿಎಂಪಿ ತನ್ನ ಕೆಲಸ ಸರಿಯಾಗಿ ಮಾಡದೆ, ಜನರ ಮೇಲೆ ಹೇಳುತ್ತಿದೆ. ಬಿಬಿಎಂಪಿ ಮೊದಲು ತನ್ನ ಕೆಲಸ ಮಾಡಲಿ, ಜನ ಸಹಕಾರ ಕೊಡುತ್ತಾರೆ ಎಂದರು.

25 ವರ್ಷದ ಯುವಕ ಡೆಂಗ್ಯೂಗೆ ಬಲಿಯಾಗಿದ್ದಾನೆ. ಖಾಸಗಿ ಆಸ್ಪತ್ರೆಗಳಲ್ಲಿ ಲಕ್ಷಗಟ್ಟಲೆ ಹಣ ವಸೂಲಿ ಮಾಡಲಾಗುತ್ತಿದೆ. ಕೊವಿಡ್ ಸಂದರ್ಭದಲ್ಲಿ ಮಾಡಿದಂತೆ ಖಾಸಗಿ ಆಸ್ಪತ್ರೆಗಳಲ್ಲೂ ಡೆಂಗ್ಯೂ ರೋಗಿಗಳಿಗೆ ಉಚಿತ ಕೊಡಿಸಲು ಸರ್ಕಾರ ಮುಂದಾಗಬೇಕು, ಡೆಂಗ್ಯೂ ಕಾಯಿಲೆಯಿಂದ ಯಾರೂ ಸಾಯಬಾರದು ಎಂದರು.

ಬಿಬಿಎಂಪಿ ವೈಫಲ್ಯದಿಂದ ಇಂದು ಡೆಂಗ್ಯೂ ಬಂದು ಜನ ಸಾಯುತ್ತಿದ್ದಾರೆ. ಸಾವನ್ನಪ್ಪಿದ ರೋಗಿಯ ಕುಟುಂಬಕ್ಕೆ ಸರ್ಕಾರ ಅವರಿಗೆ 20-25 ಲಕ್ಷ ಪರಿಹಾರ ಕೊಡಬೇಕು, ಆಗ ಮಾತ್ರ ಬಿಬಿಎಂಪಿ ಮತ್ತು ಸರ್ಕಾರಕ್ಕೆ ಜವಾಬ್ದಾರಿ ಬರುತ್ತದೆ ಎಂದು ಹೇಳಿದರು.

ಆಮ್ ಆದ್ಮಿ ಪಾರ್ಟಿ ಬೆಂಗಳೂರು ನಗರ ಸಂಘಟನಾ ಕಾರ್ಯದರ್ಶಿ ಅಶೋಕ್ ಮೃತ್ಯುಂಜಯ ಮಾತನಾಡಿ, ನಗರದಲ್ಲಿ ಡೆಂಗ್ಯೂ ಪ್ರಕರಣ ಮಿತಿ ಮೀರಿ ಹೆಚ್ಚಾಗಿದ್ದು, ಸರ್ಕಾರ ಖಾಸಗಿ ಆಸ್ಪತ್ರೆಗಳಲ್ಲೂ ಉಚಿತ ಚಿಕಿತ್ಸೆ ನೀಡುವಂತೆ ಮಾಡಬೇಕು. ಇದು ಗಂಭೀರ ಕಾಯಿಲೆಯಾಗಿದ್ದು, ಜನ ಕೂಡ ಎಚ್ಚರಿಕೆಯಿಂದ ಇರಬೇಕು ಎಂದು ಮನವಿ ಮಾಡಿದರು.

ಪ್ರತಿಭಟನೆಯಲ್ಲಿ ರಾಜ್ಯ ಕಾರ್ಯದರ್ಶಿ ಉಷಾ ಮೋಹನ್, ಶಶಿ ಕುಮಾರ್ ಆರಾಧ್ಯ, ಶಿವಾನಂದ್ ರೆಡ್ಡಿ, ಅನಿಲ್, ಖಾಲಿದ್, ಪುಟ್ಟಣ್ಣ ಗೌಡ, ಪ್ರಸನ್ನ ಸೇರಿದಂತೆ ಇತರ ನಾಯಕರು ಇದ್ದರು.

Leave a Reply

error: Content is protected !!
LATEST
KRS ಅಣೆಕಟ್ಟೆಗೆ 24ಗಂಟೆಯಲ್ಲೇ ಹರಿದು ಬಂತು 2 ಟಿಎಂಸಿ ನೀರು- ಅನ್ನದಾತರ ಮೊಗದಲ್ಲಿ ಮಂದಹಾಸ ಆಗಸ್ಟ್​ 1ರಿಂದಲೇ ಸರ್ಕಾರಿ ನೌಕರರ ವೇತನ ಹೆಚ್ಚಳ: ಸಿಎಂ ಸಿದ್ದರಾಮಯ್ಯ ಆದೇಶ KKRTC ಬಸ್‌ ಡಿಕ್ಕಿ ಬೈಕ್‌ ಸವಾರ ಸಾವು ಮತ್ತೊಂದು ಘಟನೆಯಲ್ಲಿ ಡಿವೈಡರ್​​ಗೆ ಕಾರು ಡಿಕ್ಕಿ ಇಬ್ಬರು ಮೃತ, ಮೂವರಿಗೆ ಗಾಯ ಕಬಿನಿ ಜಲಾಶಯ ತುಂಬಲು ಒಂದು ಅಡಿ ಬಾಕಿ, KRSಗೆ ಹೆಚ್ಚಾಯಿತು ಒಳಹರಿವು ಮಹಿಳೆ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆಗೈದು ಬಳಿಕ ಸುಟ್ಟುಹಾಕಿದ ಪಾಪಿಗಳು KSRTC: 2024ರ ಜ.1ರಿಂದ 1.25 ಲಕ್ಷ ನೌಕರರಿಗೆ ಆಗಬೇಕಿರುವ ವೇತನ ಪರಿಷ್ಕರಣೆ ಬಗ್ಗೆ ನಾಳೆಯ ಸಚಿವ ಸಂಪುಟ ಸಭೆಯಲ್ಲಿ ಆಗಲ... ನಾಳೆ ರಾಜ್ಯ ಸಚಿವ ಸಂಪುಟ ಸಭೆ: ಸರ್ಕಾರಿ ನೌಕರರಿಗೆ ಸಿಎಂ ಕಬ್ಬು ಕೊಡುವರೋ ಇಲ್ಲ ಬೇವು ಕೊಡುವರೋ..!? KSRTC EFWA: ಉತ್ತಮ ವಿದ್ಯೆ ಪಡೆದು ಉನ್ನತ ಹುದ್ದೆಗೇರಿ - ಸಾರಿಗೆ ನೌಕರರ ಮಕ್ಕಳ ಸನ್ಮಾನಿಸಿದ ಸಚಿವ ರಾಮಲಿಂಗಾರೆಡ್ಡಿ ... ಆರೋಗ್ಯ ಭಾಗ್ಯಕ್ಕಿಂತ ಮಿಗಿಲಾದ ಭಾಗ್ಯ ಯಾವುದೂ ಇಲ್ಲ: ಪುರಸಭೆ ಮಾಜಿ ಸದಸ್ಯ ನೀಲಕಂಠ ಕೆ.ಆರ್.ಪೇಟೆ: ಲೋಕಾ ಅದಾಲತ್‌ನಲ್ಲಿ ನೂರಾರು ಪ್ರಕರಣಗಳು ಇತ್ಯರ್ಥ