ವಿಜ್ಞಾನ

ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರಾ ಮಹೊತ್ಸವ ರದ್ದು 

ವಿಜಯಪಥ ಸಮಗ್ರ ಸುದ್ದಿ

ಚಾಮರಾಜನಗರ: ಕೊರೊನಾ ವೈರಸ್ ಹರಡದಂತೆ ಮುನ್ನೆಚ್ಚರಿಕೆ ವಹಿಸುವ ಸಲುವಾಗಿ ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಾಗೂ ಇನ್ನಿತರೆ ಕಾರ್ಯಕ್ರಮಗಳನ್ನು ರದ್ದುಪಡಿಸಿ ಜಿಲ್ಲಾಧಿಕಾರಿ ಡಾ. ಎಂ.ಆರ್.ರವಿ ಆದೇಶ ಹೊರಡಿಸಿದ್ದಾರೆ.

ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ಮಾರ್ಚ್ 16ರಂದು ನಡೆದ ವಿಡಿಯೋ ಸಂವಾದ ಸಂದರ್ಭದಲ್ಲಿ ಮಾಡಿದ ಪ್ರಸ್ತಾಪ ಹಾಗೂ ಹನೂರು ತಾಲೂಕು ತಹಶೀಲ್ದಾರ್ ಅವರು ಯುಗಾದಿ ಸಂದರ್ಭದಲ್ಲಿ ತಮಿಳುನಾಡು ಹಾಗೂ ರಾಜ್ಯದ ಇತರೆ ಜಿಲ್ಲೆಗಳಿಂದ ಎರಡು ಲಕ್ಷಕ್ಕೂ ಅಧಿಕ ಭಕ್ತರು ಸೇರಿವ ಹಿನ್ನಲೆಯಲ್ಲಿ ಸಾರ್ವಜನಿಕರ, ಭಕ್ತಾಧಿಗಳ ಆರೋಗ್ಯ ಹಿತದೃಷ್ಠಿಯಿಂದ ಜಾತ್ರಾ ಮಹೋತ್ಸವ ಹಾಗೂ ಇನ್ನಿತರ ಕಾರ್ಯಕ್ರಮಗಳನ್ನು ರದ್ದುಪಡಿಸುವಂತೆ ಕೋರಿರುವ ಮೇರೆಗೆ ಮಾರ್ಚ್ 21ರಿಂದ 26ರ ವರೆಗೆ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುವ ಯುಗಾದಿ ಜಾತ್ರಾ ಮಹೋತ್ಸವ ಹಾಗೂ ಇನ್ನಿತರ ಸಾರ್ವಜನಿಕ ಕಾರ್ಯಕ್ರಮಗಳನ್ನು ರದ್ದುಪಡಿಸಿ ಆದೇಶ ಹೊರಡಿಸಲಾಗಿದೆ ಎಂದು  ತಿಳಿಸಿದ್ದಾರೆ.

Leave a Reply

error: Content is protected !!