NEWSನಮ್ಮಜಿಲ್ಲೆನಮ್ಮರಾಜ್ಯ

ನ.25ರಂದು ಕೋಲಾರದಲ್ಲಿ ಸಾರಿಗೆ ನೌಕರರ 2ನೇ ಬೃಹತ್‌ ಸಮಾವೇಶ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವಿವಿಧ ಬೇಡಿಕೆಗಳ ಈಡೆರಿಕೆಗೆ ಆಗ್ರಹಿಸಿ ಸಾರಿಗೆ ನೌಕರರ ಕೂಟದಿಂದ ಬೃಹತ್ ಸೈಕಲ್‌ ಅ.10ರಂದು ಬಳ್ಳಾರಿಯಲ್ಲಿ ಚಾಲನೆಗೊಂಡಿದ್ದು, ಶನಿವಾರ 34ನೇ ದಿನಗಳನ್ನು ಪೂರ್ಣಗೊಳಿಸಿದ್ದು, ಇಂದು 35ನೇ ದಿನಕ್ಕೆ ಕಾಲಿಟ್ಟಿದೆ.

ಜಾಥಾ ಆರಂಭವಾದ 1-2 3-4 -5 ಹೀಗೆ ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಸಂಚರಿಸುತ್ತಿದ್ದು, ಜಾಥಾ ತಲುಪಿದ ಜಿಲ್ಲಾ ಕೇಂದ್ರಗಳಲ್ಲಿ ಸಾರಿಗೆ ನೌಕರರು ಅದ್ದೂರಿಯಾಗಿ ಸ್ವಾಗತಿಸಿದ್ದಾರೆ ಈಗಲೂ ಸ್ವಾಗತಿಸುತ್ತಿದ್ದಾರೆ. ಅಲ್ಲದೆ ಜಾಥಾದ ಬೇಡಿಕೆಗಳ ನಮ್ಮ ಬೇಡಿಕೆಗಳೇ ಎಂದು ನೌಕರರು, ಸರ್ಕಾರಕ್ಕೆ ಮತ್ತು ನಿಗಮಗಳ ಆಡಳಿತ ಮಂಡಳಿಗಳಿಗೆ ಎಚ್ಚರಿಕೆ ಸಂದೇಶ ರವಾನಿಸಲು ಪ್ರತಿಭಟನಾ ರ‍್ಯಾಲಿ ಕೂಡ ಮಾಡಿದ್ದಾರೆ ಈಗಲೂ ಮಾಡುತ್ತಿದ್ದಾರೆ.

ಇನ್ನು ಈ ಜಾಥಾ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಕೂಟದ ರಾಜ್ಯಾಧ್ಯಕ್ಷ ಚಂದ್ರಶೇಖರ್‌ ನೇತೃತ್ವದಲ್ಲಿ ನೌಕರರು ಕಳೆದ 35 ದಿನಗಳಿಂದ ಸೈಕಲ್ ಜಾಥಾ ನಡೆಸುತ್ತಿದ್ದು ಈ ಮೂಲಕ ರಾಜ್ಯಾದ್ಯಂತ ಸೈಕಲ್ ಮೇಲೇರಿ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸುತ್ತ ಸರಕಾರದ ಗಮನ ಸೆಳೆಯುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ನೌಕರರ ಕೂಟದಿಂದ ಸಾರಿಗೆ ನೌಕರರ ಅಗತ್ಯ ಬೇಡಿಕೆಗಳ ಈಡೆರಿಕೆಗೆ ಆಗ್ರಹಿಸಿ ಕಳೆದ ಅ.27 ಕಲಬುರಗಿ ನಗರದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಬೃಹತ್ ಪ್ರತಿಭಟನಾ ರ‍್ಯಾಲಿ ಹಾಗೂ ಸೈಕಲ್ ಜಾಥಾ ಜರುಗಲಿದ್ದು, ಸಾವಿರಾರು ನೌಕರರು ಭಾಗವಹಿಸಿದ್ದರು.

ಅದೇ ರೀತಿ ಇದೇ ನವೆಂಬರ್‌ 25ರಂದು ಕೋಲಾರದಲ್ಲಿ ಮತ್ತೆ ಎರಡನೆಯ ಬೃಹತ್‌ ಸಮವೇಶ ಹಮ್ಮಿಕೊಳ್ಳಲು ಕೂಟ ಸಿದ್ಧತೆಯಲ್ಲಿ ತೋಡಗಿದೆ. ಕಲಬುರಗಿಯಲ್ಲಿ ಸೇರಿದ್ದ ನೌಕರರು ಮತ್ತು ಅವರ ಕುಟುಂಬ ಆ ಸಮಾವೇಶವನ್ನು ಯಶಸ್ವಿಗೊಳಿಸಿತ್ತು. ಅದೇ ರೀತಿ ಇನ್ನು ಹೆಚ್ಚಿನ ನೌಕರರು ಮತ್ತು ಕುಟುಂಬವರು ಸೇರಿ ಈ ಕೋಲಾದರಲ್ಲಿ ನಡೆಯುವ ಜಾಥಾದ ಬೃಹತ್‌ ಸಮಾವೇಶವನ್ನು ಯಶಸ್ವಿಗೊಳಿಸಬೇಕು ಎಂದು ಅಧ್ಯಕ್ಷ ಚಂದ್ರಶೇಖರ್‌ ಮನವಿ ಮಾಡಿದ್ದಾರೆ.

ಇನ್ನು ಈ ಸಮಾವೇಶಕ್ಕೂ ಸ್ವಾಮೀಜಿಗಳು, ಹಲವಾರು ಗಣ್ಯರಿಗೆ ಆಹ್ವಾನ ನೀಡಲಾಗುವುದು, ಬಹುತೇಕ ಎಲ್ಲರೂ ಭಾಗವಹಿಸುವ ನಿರೀಕ್ಷೆಯಲ್ಲಿ ನೌಕರರ ಕೂಟ ಇದೆ ಎಂದು ಚಂದ್ರಶೇಖರ್‌ ತಿಳಿಸಿದ್ದಾರೆ.

ಇನ್ನು ಕಳೆದ 7 ವರ್ಷಗಳಿಂದ ಸಾರಿಗೆ ನೌಕರರ ವೇತನ ಹೆಚ್ಚಳವಾಗಿಲ್ಲ. ಅಲ್ಲದೇ ಮಾಡಿದ ಹೆಚ್ಚುವರಿ ಕೆಲಸಕ್ಕೂ ಸರಿಯಾದ ಭತ್ಯೆ, ಸವಲತ್ತು ಇಲ್ಲ. ಇವುಗಳ ಈಡೇರಿಕೆಗೆ ಆಗ್ರಹಿಸಿ ಕಳೆದ ಏಪ್ರಿಲ್ 2021ರಲ್ಲಿ ಮುಷ್ಕರ ಮಾಡಲಾಯಿತು. ಆ ವೇಳೆ ಸಮಸ್ಯೆಗೆ ಸ್ಪಂದಿಸಬೇಕಾಗಿದ್ದ ಸರಕಾರ ಗುಬ್ಬಿ ಮೇಲೆ ಭ್ರಹ್ಮಾಸ್ತ್ರ ಎಂಬಂತೆ ಅಮಾಯಕ ಕಾರ್ಮಿಕರನ್ನು ವಜಾ, ವರ್ಗಾವಣೆ, ಅಮಾನತು, ಪೊಲೀಸ್‌ ಕೇಸು ದಾಖಲಿಸಿ ಅಮಾನವಿಯವಾಗಿ ನಡೆದುಕೊಂಡಿತ್ತು.

ಸದ್ಯ ಈಗ ಹಾಕಿರುವ ಕೇಸ್‌ಗಳನ್ನು ಹಿಂಪಡೆಯಬೇಕು. ಅಲ್ಲದೆ ಅಗತ್ಯ ವಸ್ತುಗಳ ಬೆಲೆ ಗಗನಕ್ಕೆರಿದ್ದು, ಕೂಡಲೆ ಸರಕಾರಿ ನೌಕರರ ಮಾದರಿಯಲ್ಲಿ ವೇತನ ಹೆಚ್ಚಿಸಬೇಕು. ಭ್ರಷ್ಟಾಚಾರ ಹಾಗೂ ಕಿರುಕುಳ ಮುಕ್ತ ನಿಯಮ ಜಾರಿಗೆ ತರಬೇಕು ಎಂಬ ಹಲವು ಬೇಡಿಕೆಗಳ ಈಡೇರಿಕೆಗೆ ಈ ಮಹಾ ಸಮಾವೇಶ ಮತ್ತು ಸೈಕಲ್‌ ಜಾಥಾ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ