ಬೆಂಗಳೂರು: ಇಂದಿನಿಂದ (ಮಾ.9) ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದೆ. ರಾಜ್ಯದ 1,109 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ.
ದ್ವಿತೀಯ ಪಿಯುಸಿ ಪರೀಕ್ಷೆಗೆ ಒಟ್ಟು 7.27 ಲಕ್ಷ ವಿದ್ಯಾರ್ಥಿಗಳು ಸಜ್ಜಾಗಿದ್ದಾರೆ. ವಿದ್ಯಾರ್ಥಿಗಳಿಗಾಗಿ ಶಿಕ್ಷಣ ಸಚಿವರು ಹಲವು ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ.
ಪರೀಕ್ಷೆಗೆ ಒಟ್ಟು 7.27 ಲಕ್ಷ ಮಂದಿ ವಿದ್ಯಾರ್ಥಿಗಳು ಸಜ್ಜಾಗಿದ್ದು, ಕಲಾ ವಿಭಾಗದಲ್ಲಿ 2,34,815 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 2,47,260 ವಿದ್ಯಾರ್ಥಿಗಳು, ವಿಜ್ಞಾನ ವಿಭಾಗದಲ್ಲಿ 2,44,120 ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆಯಲಿದ್ದಾರೆ.
ಒಟ್ಟು 5,716 ಕಾಲೇಜುಗಳ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ. ಮೇ ಮೊದಲ ವಾರದಲ್ಲಿ ಈ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.