NEWSನಮ್ಮರಾಜ್ಯ

3 ನ್ಯಾಯ ಬೆಲೆ ಅಂಗಡಿಗಳ ಪರವಾನಗಿ ರದ್ದು

ಪಡಿತರ ವಿತರಣೆಯಲ್ಲಿ ಅಕ್ರಮ ಹಿನ್ನೆಲೆ ಕ್ರಮ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರು ನಗರದಲ್ಲಿ ಪಡಿತರ ಆಹಾರ ವಿತರಣೆಯಲ್ಲಿ ಲೋಪ ಕಂಡುಬಂದಿದ್ದು, ಕರ್ನಾಟಕ  ರಾಜ್ಯ ಆಹಾರ ಆಯೋಗದಿಂದ ಅನಿರೀಕ್ಷಿತ ಭೇಟಿ ನೀಡಿ  ತಪಾಸಣೆ ನಡೆಸಿ ನಗರದ ಮೂರು ನ್ಯಾಯ ಬೆಲೆ ಅಂಗಡಿಗಳ ಪರವಾನಗಿಗಳನ್ನು ರದ್ದು ಪಡಿಸಲು ಸೂಚನೆ ನೀಡಲಾಗಿದೆ ಎಂದು ಕರ್ನಾಟಕ  ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ. ಕೃಷ್ಣಮೂರ್ತಿ ತಿಳಿಸಿದ್ದಾರೆ.

ಕೊರೊನಾ ವೈರಾಣು ಸೋಂಕು ಹರಡುವುದನ್ನು ತಡೆಯಲು ಕೇಂದ್ರ ಸರ್ಕಾರ ಘೋಷಿಸಿರುವ ಲಾಕ್‍ಡೌನ್ ಹಿನ್ನೆಲೆಯಲ್ಲಿ ಏಪ್ರಿಲ್ ಮತ್ತು ಮೇ ಮಾಹೆಯ ಪಡಿತರವನ್ನು ಒಮ್ಮೆಲೆ ನೀಡಲು ಆದೇಶಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪಡಿತರ ವಿತರಣೆ ಹಾಗೂ ದಾಸ್ತಾನು ಮಳಿಗೆಯಲ್ಲಿ ವ್ಯವಸ್ಥೆ ಬಗ್ಗೆ ತಪಾಸಣೆ ಕೈಗೊಳ್ಳಲಾಯಿತು ಎಂದು ಮಾಹಿತಿ ನೀಡಿದರು.

ನಿಗದಿತ ಪ್ರಮಾಣಕ್ಕಿಂತ ಕಡಿಮೆ ಪಡಿತರ ವಿತರಣೆ ಮಾಡಿರುವ ಹಿನ್ನೆಲೆಯಲ್ಲಿ ಶಿವಾಜಿನಗರದ ಸತ್ಯ ಬಳಕೆದಾರರ ಸಹಕಾರ ಸಂಘ ನಡೆಸುತ್ತಿರುವ ಎಸ್.ಆರ್. 33 ಮತ್ತು  32 ಪಡಿತರ ವಿತರಣಾ ಕೇಂದ್ರಗಳು ಹಾಗೂ ಸ್ಯಾಪಿಂಗ್ ರಸ್ತೆಯಲ್ಲಿರುವ ಎಸ್.ಆರ್. 21 ಪಡಿತರ ವಿತರಣಾ ಕೇಂದ್ರಗಳನ್ನು ಮುಚ್ಚಿ ಅಮಾನತಿನಲ್ಲಿಡಲು ಆಹಾರ ಇಲಾಖೆಯ ಉಪನಿರ್ದೇಶಕ ನಾಗಭೂಷಣ್ ಅವರಿಗೆ ಸೂಚಿಸಿದರು. ತಪಾಸಣೆಯಲ್ಲಿ ಆಹಾರ ಆಯೋಗದ ಸದಸ್ಯ ಎಚ್.ವಿ. ಶಿವಶಂಕರ್ ಉಪಸ್ಥಿತರಿದ್ದರು.

ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದ್ದವರಿಗೂ ಪಡಿತರ ವಿತರಣೆ: ರಾಜ್ಯದ್ಯಂತ ಲಾಕ್‍ಡೌನ್ ಜಾರಿಯಲ್ಲಿ ಇರುವ ಹಿನ್ನೆಲೆಯಲ್ಲಿ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದ್ದವರಿಗೂ ಪಡಿತರ ವಿತರಣೆ  ಮಾಡುವ ಮಹತ್ವದ ನಿರ್ಣಯವನ್ನು ರಾಜ್ಯ ಸಚಿವ ಸಂಪುಟ ಇಲ್ಲಿ ಇಂದು ಕೈಗೊಂಡಿದೆ.

ರಾಜ್ಯ ಸಚಿವ ಸಂಪುಟ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯವನ್ನು ಸಚಿವ ಜೆ ಸಿ ಮಾಧುಸ್ವಾಮಿ ಪ್ರಕಟಿಸಿದರು.

ಬಡವರ ಕಷ್ಟ-ಸಂಕಷ್ಟಗಳತ್ತ ಸ್ಪಂದಿಸುವತ್ತ ಕೈಗೊಂಡಿರುವ ಈ ದಿಟ್ಟ ನಿರ್ಧಾರದಂತೆ ಪಡಿತರ ಚೀಟಿ ಹೊಂದಿರುವವರಿಗೆ ಮಾತ್ರವಲ್ಲದೆ, ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದ್ದವರಿಗೂ, ಮುಂದಿನ ಎರಡು ತಿಂಗಳ ಅವಧಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಪಡಿತರ ವಿತರಿಸಲು ಸಂಪುಟ ತೀರ್ಮಾನಿಸಿದೆ. ಆದರೆ, ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿ, ಅರ್ಜಿಯು ತಿರಸ್ಕøತಗೊಂಡಿದ್ದರೆ ಈ ಸೌಲಭ್ಯ ದೊರೆಯುವುದಿಲ್ಲ ಎಂದು ಸ್ಪಷ್ಟಪಡಿಸಿದರು.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...