NEWSನಮ್ಮಜಿಲ್ಲೆನಮ್ಮರಾಜ್ಯ

2024-25 STATE BUDGET: 3.71ಕೋಟಿ ರೂ. ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು 15ನೇ ಬಾರಿಗೆ ಬಜೆಟ್​ ಮಂಡಿಸುತ್ತಿದ್ದಾರೆ. ಆ ಮೂಲಕ ಇತಿಹಾಸ ನಿರ್ಮಿಸುತ್ತಿದ್ದಾರೆ. ಬಸವಾದಿ ಶರಣ ಕಾಯಕ, ದಾಸೋಹ ತತ್ವ ನಮಗೆ ಪ್ರೇರಣೆ ಎಂದು ಹೇಳುವ ಮೂಲಕ ಸದನದಲ್ಲಿ ಬಜೆಟ್​ ಮಂಡಿಸುತ್ತಿದ್ದಾರೆ.

ಬಜೆಟ್​​ ಗಾತ್ರವೆಷ್ಟು?: ವರನಟ ರಾಜ್​ಕುಮಾರ್​ರವರ ‘ಆಗದು ಎಂದು ಕೈ ಕಟ್ಟಿ ಕುಳಿತರೆ’ ಹಾಡನ್ನು ಪ್ರಸ್ತಾಪಿಸಿ ಬಜೆಟ್​ ಮಂಡಿಸುತ್ತಿದ್ದಾರೆ. ಕಳೆದ ಬಾರಿ ಜುಲೈನಲ್ಲಿ 3.27 ಲಕ್ಷ ಕೋಟಿಯ ಬಜೆಟ್​ ಮಂಡಿಸಿದ್ದರು. ಆದರೆ ಈ ಬಾರಿ ಬಜೆಟ್ ಗಾತ್ರ 3, 71, 383 ಕೋಟಿಯದ್ದಾಗಿದೆ. 2024-25ರಲ್ಲಿ 57 ಸಾವಿರ ಕೋಟಿ 5 ಗ್ಯಾರಂಟಿಗಳಿಗೆ ಹಂಚಿಕೆ ಮಾಡಲಾಗ್ತಿದೆ. ಜನರ ಆಹಾರ, ಆರೋಗ್ಯ, ಶಿಕ್ಷಣ, ಉದ್ಯೋಗ, ವಾಸದ ಭದ್ರತೆ ಯೋಜನೆ ಬಗ್ಗೆ ಒತ್ತು ನೀಡಿದೆ.

ಅತ್ಯಂತ ಕೀಳಾದವನೂ ಮೇಲಾಗಬೇಕು: ಬಜೆಟ್​ ಮಂಡನೆ ವೇಳೆ ಸಿಎಂ ಸಿದ್ದರಾಮಯ್ಯನವರು, ರಾಜಕೀಯ, ಆರ್ಥಿಕ ಕ್ಷೇತ್ರಗಳಲ್ಲಿ ಸರ್ವತ್ರ ವ್ಯಾಪಿಸಬೇಕು. ಅತ್ಯಂತ ಕೀಳಾದವನೂ ಮೇಲಾಗುವಂತೆ ಆಗಬೇಕು. ಕೋಟ್ಯಂತರ ಜನರ ಕೈಗೆ ಗ್ಯಾರಂಟಿ ಯೋಜನೆಗಳ ಹಂಚಿಕೆಯಾಗಬೇಕು. ವಾರ್ಷಿಕ 50-55 ಸಾವಿರ ರೂ. ಪ್ರತಿ ಕುಟುಂಬಕ್ಕೆ ಒದಗಿಸಲಾಗುತ್ತೆ ಎಂದು. ಹೇಳಿದ್ದಾರೆ.

ಚುನಾವಣಾ ಗಿಮಿಕ್ ಅಲ್ಲ: ಭಾರತ ಗಣರಾಜ್ಯವಾಗಿ 75ನೇ ವರ್ಷಕ್ಕೆ ಕಾಲಿಟ್ಟಿದೆ. ದುಡಿಮೆಯ ಪಾಲು ಹಂಚಬೇಕೆಂಬುದು ನಮಗೆ ಮಾರ್ಗದರ್ಶನ. ಗ್ಯಾರಂಟಿ ಯೋಜನೆಗಳನ್ನ ಅತ್ಯಂತ ಕಡಿಮೆ ಅವಧಿಯಲ್ಲಿ ಅನುಷ್ಠಾನಗೊಳಿಸಲಾಗಿದೆ. ನಮ್ಮ ಗ್ಯಾರಂಟಿ ಯೋಜನೆಗಳು ಕೇವಲ ಚುನಾವಣಾ ಗಿಮಿಕ್ ಅಲ್ಲ. ನಮ್ಮ ಕಾರ್ಯಕರ್ತರು ಸಂಗ್ರಹಿಸಿದ ಅಭಿಪ್ರಾಯವನ್ನು ಜಾರಿ ಮಾಡಲಾಗುತ್ತಿದೆ. ಸರ್ವೋದಯ, ಸಮನ್ವಯ ದೃಷ್ಟಿ ಎಲ್ಲೆಲ್ಲೂ ತಾಂಡವವಾಡಬೇಕು. ಎಲ್ಲರನ್ನೂ ಒಳಗೊಂಡ ಅಭಿವೃದ್ಧಿ, ತ್ವರಿತ ಆರ್ಥಿಕ ಅಭಿವೃದ್ಧಿ ಗುರಿಯನ್ನು ಈ ಬಜೆಟ್​ ಹೊಂದಿದೆ ಎಂದು ಹೇಳಿದ್ದಾರೆ.

ಇನ್ನು ಬಜೆಟ್‌ನ ಸಂಪೂರ್ಣ ಮಾಹಿತಿಗಾಗಿ  ಇಲ್ಲಿ ಕ್ಲಿಕ್‌ ಮಾಡಿ … Karnataka State Budget 2024-25 Kannada

Leave a Reply

error: Content is protected !!
LATEST
ಸೆ.12ರಂದು 5 ಭಾಷೆಗಳಲ್ಲಿ ಬೆಳ್ಳಿತೆರೆ ಮೇಲೆ ARM- ಚಿತ್ರದ ಟ್ರೈಲರ್‌ಗೆ ಭಾರೀ ಮೆಚ್ಚುಗೆ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಬೇಕೇಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ ಮೈಸೂರು: ಕಲುಷಿತ ನೀರು ಸೇವಿಸಿ 12ಮಂದಿಗೆ ವಾಂತಿ, ‌ಭೇದಿ, ಓರ್ವ ಮೃತ ಬಾಲಿವುಡ್‌ ನಟಿ ಮಲೈಕಾ ಅರೋರಾ ತಂದೆ ಆತ್ಯಹತ್ಯೆ KSRTC ನೌಕರರ ಕಿತ್ತು ತಿನ್ನುವ ಭ್ರಷ್ಟರು: ಹೋಟೆಲ್‌ಗೆ ತಿನ್ನಲು ಹೋಗಿ ನೌಕರನಿಗೆ ಫೋನ್‌ ಪೇ ಮಾಡಲು ಹೇಳಿದ ಎಟಿಐ ಗಂಗಾಧ... KSRTC ಮಂಡ್ಯ: ಓವರ್‌ಟೇಕ್‌ ನೆಪದಲ್ಲಿ ತಾನೇ ಬಸ್‌ಗೆ ಬೈಕ್‌ ಡಿಕ್ಕಿ ಹೊಡೆಸಿ ಅಪಘಾತದ ಹೈಡ್ರಾಮ ಮಾಡಿದ ಬೈಕ್‌ ಸವಾರ ಯೋಗ... KSRTC: ಆ‌ರ್‌ಟಿಒ ಚಾಲನಾ ಪರವಾನಗಿ ಅಮಾನತುಗೊಳಿಸಿದ ಚಾಲಕರಿಗೆ ಡ್ಯೂಟಿ ಕೊಟ್ಟರೆ ಕ್ರಮ- ಡಿಸಿ ಸೂಚನೆ ಆರೋಗ್ಯ ಶಿಬಿರ ಸಾಮಾಜಿಕ ಜವಾಬ್ದಾರಿ: ನ್ಯಾಯ ಸಮಿತಿ ಅಧ್ಯಕ್ಷ ಸಚಿನ್ ಶಿರವಾಳ ಚಾರ್ಜ್‌ಶೀಟ್ ಗೌಪ್ಯ ದಾಖಲಾತಿ ಏನಲ್ಲ: ಗೃಹ ಸಚಿವ ಪರಮೇಶ್ವರ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡುವುದರಲ್ಲಿ ಎಳ್ಳಷ್ಟೂ ಅನುಮಾನವಿಲ್ಲ : ಬಿವೈವಿ