NEWSಕೃಷಿನಮ್ಮಜಿಲ್ಲೆ

3.10 ಕೋಟಿ ರೂ. ವೆಚ್ಚದಲ್ಲಿ ನವೀಕೃತ ಸಂತೆ ಮೈದಾನಕ್ಕೆ ಚಾಲನೆ: ಚರಂತಿಮಠ

ವಿಜಯಪಥ ಸಮಗ್ರ ಸುದ್ದಿ

ಬಾಗಲಕೋಟೆ : ನವನಗರದ ವಾಣಿಜ್ಯ ಸೆಕ್ಟರ ನಂ.4ರಲ್ಲಿ ಸಂತೆ ಮೈದಾನವನ್ನು 3.10 ಕೋಟಿ ರೂ.ಗಳ ವೆಚ್ಚದಲ್ಲಿ ವಾಹನಗಳ ಪಾರ್ಕಿಂಗ್, ಸಾರ್ವಜನಿಕ ಶೌಚಾಲಯ ಮತ್ತು ಬೆಳಕಿನ ವ್ಯವಸ್ಥೆಯೊಂದಿಗೆ ಸುಸಜ್ಜಿತವಾಗಿ ನವೀಕರಿಸಲಾಗಿದೆ ಎಂದು ಶಾಸಕ ವೀರಣ್ಣ ಚರಂತಿಮಠ ತಿಳಿಸಿದರು.

ನವನಗರದ ಸೆಕ್ಟರ ನಂ.4ರಲ್ಲಿ ರವಿವಾರ ಹಮ್ಮಿಕೊಂಡ ಸಂತೆ ಮೈದಾನ ಪುನರಾರಂಭಕ್ಕೆ ಚಾಲನೆ ಅವರು ಮಾತನಾಡಿದರು. ನವೀಕೃತಗೊಂಡ ಸಂತೆ ಮೈದಾನದಲ್ಲಿ ವ್ಯಾಪಾರಸ್ಥರು ನಿಗಧಿತ ಸ್ಥಳಗಳಲ್ಲಿ ಅಂಗಡಿ ಹಾಕಿಕೊಂಡು ಗ್ರಾಹಕರಿಗೆ ನಿಗದಿಪಡಿಸಿದ ಕೆಂಪು ಬಣ್ಣದ ಹಾದಿಯಲ್ಲಿ ನಡೆಯಲು ಅನುಕೂಲ ಮಾಡಿಕೊಡಬೇಕು. ವ್ಯಾಪಾರ ಪೂರ್ಣಗೊಂಡ ನಂತರ ತಮ್ಮ ಸ್ಥಳದಲ್ಲಿದ್ದ ಎಲ್ಲ ತ್ಯಾಜ್ಯವನ್ನು ನಿಗದಿಪಡಿಸಿದ ಸ್ಥಳದಲ್ಲಿ ಹಾಕಲು ತಿಳಿಸಿದರು.

ಈ ಮೊದಲು ವಾರಕೊಂದು ಬಾರಿ ಸಂತೆ ಜರುಗುತ್ತಿದ್ದು ಇನ್ನು ಮುಂದೆ ಪ್ರತಿದಿನವು ಮಾರುಕಟ್ಟೆ ಕಾರ್ಯನಿರ್ವಹಿಸುತ್ತಿದ್ದು ಗ್ರಾಹಕರು ಇದರ ಉಪಯೋಗ ಪಡೆದುಕೊಳ್ಳಬೇಕು. ವ್ಯಾಪಾರಿಗಳಿಗೆ ಮಳೆಗಾಲದಲ್ಲಿ ತೊಂದರೆಯಾಗದಂತೆ ಮೇಲ್ಚಾವಣಿ ವ್ಯವಸ್ತೆ ಇದ್ದು ಮುಂಬರುವ ದಿನಗಳಲ್ಲಿ ಎಲ್ಲ ವ್ಯಾಪಾರಿಗಳಿಗೂ ಅನುಕೂಲವಾಗುವ ವ್ಯಾಪಾರಿ ಕಟ್ಟೆ ನಿರ್ಮಿಸುವುದರ ಜೊತೆಗೆ ರಸ್ತೆಯನ್ನು ನಿರ್ಮಿಸಲಾಗುವುದು ಎಂದರು.

ವ್ಯಾಪರಸ್ಥರು ತಮಗೆ ನೆರಳು ಬೇಕಾದಲ್ಲಿ ಕೊಟೆಗಳನ್ನು ಹಾಕಿಕೊಳ್ಳಲು ಸ್ಥಳದಲ್ಲಿ ವ್ಯವಸ್ಥೆ ಮಾಡಲಾಗಿದೆ. ಅದನ್ನು ಬಿಟ್ಟು ಮೈದಾನ ಹಾಳುಮಾಡುವ ಕಾರ್ಯಕ್ಕೆ ಕೈ ಹಾಕಬಾರದು ಎಂದು ಎಚ್ಚರಿಕೆ ನೀಡಿದರು. ವ್ಯಾಪಾರಿಗಳು ನಿಗದಿತ ಸ್ಥಳ ಹೊರತು ಪಡಿಸಿ ಅಕ್ರಮಿಸಿದರೆ ನಿದ್ರಾಕ್ಷಿಣ್ಯವಾಗಿ ತೆಗೆದು ಹಾಕಲಾಗುವುದು. ಪ್ರಾಧಿಕಾರದಿಂದ ನಿಗದಿ ಪಡಿಸಿದ ಸ್ಥಳದಲ್ಲಿಯೇ ಸಾರ್ವಜನಿಕರು ವಾಹನಗಳನ್ನು ನಿಲ್ಲಿಸಬೇಕು ಎಂದು ತಿಳಿಸಿದರು.

ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಮೋಹನ ನಾಡಗೌಡ, ಕುಮಾರ ಯಳ್ಳಿಗುತ್ತಿ, ಶಿವಾನಂದ ಟವಳಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಬಸವಲಿಂಗಪ್ಪ ನಾವಲಗಿ, ನಗರಸಭೆ ಉಪಾಧ್ಯಕ್ಷ ಬಸವರಾಜ ಅವರಾಧಿ, ಮುಖ್ಯ ಅಭಿಯಂತರ ಮನ್ಮತಯ್ಯ ಸ್ವಾಮಿ ಹಾಗೂ ಉಪವಿಭಾಗ ಒಂದರ ವಿ.ಜಿ.ಮಿಕ್ಕಲ, ಕಿರಿಯ ಅಭಿಯಂತರರಾದ ರಾಜು ಅವರಾಧಿ, ವಿಜಯಶಂಕರ ಹೆಬ್ಬಳ್ಳಿ, ಎಸ್.ಎಸ್.ಚಿನ್ನಣ್ಣವರ, ಸುರೇಶ ತೆಗ್ಗಿ, ಅಧೀಕ್ಷಕ ಇಂಜಿನಿಯರ್ ಎಂ.ಎಚ್.ಕಟ್ಟಿಮನಿ ಮತ್ತಿತರು ಉಪಸ್ಥಿತರಿದ್ದರು.

ಸ್ಲ್ಯಾಬ್ ಕಾಮಗಾರಿಗೆ ಚಾಲನೆ: ನವನಗರದ ರಸ್ತೆ ಸಂಖ್ಯೆ 13 ಹಾಗೂ ಎಫ್.ಎಕ್ಸ್ ಮಧ್ಯ ಯುನಿಟ್-2ರಲ್ಲಿ ತುಂಬಾ ಆಳವಾದ ಮುಖ್ಯ ರಸ್ತೆಗಳಲ್ಲಿ ಇರುವ ಚರಂಡಿ ಮೇಲೆ ಸುರಕ್ಷತಾ ದೃಷ್ಟಿಯಿಂದ ಆರ್.ಸಿ.ಸಿ. ಸ್ಲ್ಯಾಬ್ ಕಾಮಗಾರಿಗೆ ಶಾಸಕ ವೀರಣ್ಣ ಚರಂತಿಮಠ ಭೂಮಿ ಪೂಜೆ ನೆರವೇರಿಸುವ ಮೂಲ ಚಾಲನೆ ನೀಡಿದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು