NEWSನಮ್ಮಜಿಲ್ಲೆನಮ್ಮರಾಜ್ಯ

ಕಾವೇರಿ ನದಿಗೆ 31,550 ಕ್ಯೂಸೆಕ್ ನೀರು ಬಿಡುಗಡೆ- ನದಿ ತಟದ ಜನರಿಗೆ ಸೂಚನೆ

ವಿಜಯಪಥ ಸಮಗ್ರ ಸುದ್ದಿ

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮತ್ತೆ ವರುಣನ ಆರ್ಭಟ ಹೆಚ್ಚಾಗಿದ್ದು ಈ ಹಿನ್ನೆಲೆ ಹಳೇ ಮೈಸೂರು ಭಾಗದ ಜೀವನಾಡಿ ಕೆಆರ್‌ಎಸ್ ಡ್ಯಾಂಗೆ ಒಳಹರಿವು ಹೆಚ್ಚಾಗುತ್ತಿದೆ. ಹೀಗಾಗಿ ನದಿ ದಡದ ನಿವಾಸಿಗಳು ಎಚ್ಚರಿಕೆ ವಹಿಸಬೇಕು.

ಹಲವು ದಿನಗಳಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಪ್ರಮಾಣಯಾಗಿದ್ದರಿಂದ ಹೆಚ್ಚು ನೀರು ಬರುತ್ತಿರಲಿಲ್ಲ. ನಿನ್ನೆಯಿಂದ ಮಳೆಯ ಪ್ರಮಾಣ ಹೆಚ್ಚಿರುವ ಹಿನ್ನೆಲೆ 33,052 ಕ್ಯೂಸೆಕ್ ಒಳಹರಿವು ಬರುತ್ತಿದೆ. ಜೂನ್ ಅಂತ್ಯದಲ್ಲಿಯೇ ಕೆಆರ್‌ಎಸ್ ಜಲಾಶಯ ಭರ್ತಿಯಾಗಿರುವ ಹಿನ್ನೆಲೆ ಡ್ಯಾಂನಿಂದ‌ 31,550 ಕ್ಯೂಸೆಕ್ ನೀರನ್ನು ನದಿಗೆ ಹರಿಯ ಬಿಡಲಾಗಿದೆ.

ಕೆಆರ್‌ಎಸ್ ಡ್ಯಾಂ‌ನಿಂದ ನೀರು ಬಿಡುಗಡೆ ಮಾಡಿರುವ ಹಿನ್ನೆಲೆ ಡ್ಯಾಂ ಮುಂಭಾಗ ಹಾಲ್ನೊರೆಯಂತೆ ಕಾವೇರಿ ನದಿಯ ಸೌಂದರ್ಯ ಕಂಗೊಳಿಸುತ್ತಿದೆ. ಸದ್ಯ 124.80 ಅಡಿಗಳ ಗರಿಷ್ಠ ಮಟ್ಟದ ಕೆಆರ್‌ಎಸ್ ಡ್ಯಾಂ 124.54 ಅಡಿಗಳಷ್ಟು ಭರ್ತಿಯಾಗಿದ್ದು, 49.452 ಟಿಎಂಸಿ ಗರಿಷ್ಠ ಸಾಮರ್ಥ್ಯವಿರುವ ಡ್ಯಾಂನಲ್ಲಿ 49.089 ಟಿಎಂಸಿ ನೀರು ಭರ್ತಿಯಾಗಿದೆ.

ಹೀಗಾಗಿ ಮತ್ತೆ ಯಾವ ಸಮಯದಲ್ಲಿ ಬೇಕಾದರು ನದಿಗೆ ಹೆಚ್ಚಿನ ನೀರು ಬಿಡುವ ಸಾಧ್ಯತೆ ಇರುವುದರಿಂದ ನದಿ ದಡದ ನಿವಾಸಿಗಳು ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಡಳಿತ ಸೂಚನೆ ನೀಡಿದೆ.

Megha
the authorMegha

Leave a Reply

error: Content is protected !!