NEWSನಮ್ಮರಾಜ್ಯರಾಜಕೀಯ

ನನ್ನ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ ಅಂತ ಮಾಹಿತಿ ನೀಡಿದ್ದರು: ಕೆಪಿಸಿಸಿ ಅಧ್ಯಕ್ಷ ಡಿಕೆಶಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕನಕಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನನ್ನ ವಿರುದ್ಧ ಷಡ್ಯಂತ್ರ ಮಾಡ್ತಿದ್ದಾರೆ ಅಂತ ನನಗೆ ಅಧಿಕಾರಿಗಳೇ ಮಾಹಿತಿ ನೀಡಿದ್ದಾರೆ. ರಾಜಕೀಯದಿಂದ ನನ್ನನ್ನು ತೆಗೆದು ಹಾಕಲು ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು.

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಿವಕುಮಾರ್, ಏನು ಷಡ್ಯಂತ್ರ ಮಾಡುತ್ತಿದ್ದಾರೆ ಗೊತ್ತಿದೆ. ಕಳೆದ ಬಾರಿಯೇ ನನ್ನ ಆಸ್ತಿ ಮೌಲ್ಯದ ಬಗ್ಗೆ ವಿವರಣೆ ನೀಡಬೇಕಾಯ್ತು. ನಾನು ಹೊಸ ಆಸ್ತಿ ಯಾವುದನ್ನೂ ಕೂಡ ಖರೀದಿ ಮಾಡಿಲ್ಲ. ನನ್ನ ವಿರುದ್ಧ ಷಡ್ಯಂತ್ರ ಮಾಡ್ತಿದ್ದಾರೆ ಅಂತ ನನಗೆ ಅಧಿಕಾರಿಗಳೇ ಮಾಹಿತಿ ನೀಡಿದ್ದಾರೆ ಎಂದರು.

ಇವನು ಇರುವುದಕ್ಕೆ ತಾನೇ ಕಾಂಗ್ರೆಸ್ ಗಟ್ಟಿಯಾಗುತ್ತಿದೆ ಎಂದು ವಿರೋಧಿಗಳು ಏನೇನೋ ಪ್ರಯತ್ನ ಮಾಡುತ್ತಿದ್ದಾರೆ. ನಿನ್ನೆ ಬಂದ ತೀರ್ಪಿನ ಬಗ್ಗೆ ಕೇಳ್ತಾ ಇದ್ದೀರಿ. ರಾಜಕೀಯದಿಂದಲೇ ನಮ್ಮನ್ನು ತೆಗೆದು ಹಾಕಬೇಕು ಅಂತ ಪ್ರಯತ್ನ ಮಾಡುತ್ತಿದ್ದಾರೆ.

ಸೋನಿಯಾ ಗಾಂಧಿ ರಾಹುಲ್ ಗಾಂಧಿಗೂ ಕಿರುಕುಳ ನೀಡುತ್ತಿದ್ದಾರೆ. ಸೋನಿಯಾ ಗಾಂಧಿ ಅವರಿಗೆ ಕೊಡಬಾರದ ಕಾಟ ಕೊಡುತ್ತಿದ್ದಾರೆ. ಸೋನಿಯಾ ರಾಹುಲ್ ರನ್ನೇ ಬಿಡಲಿಲ್ಲ ನನ್ನನ್ನ ಬಿಡ್ತಾರಾ ಎಂದು ಪ್ರಶ್ನಿಸಿದರು.

ಕನಕಪುರದಲ್ಲಿ ಯಾರು ಸ್ಪರ್ಧಿಸುತ್ತಾರೆಂದು ಕಾಲವೇ ಉತ್ತರ ನೀಡುತ್ತೆ. ಷಡ್ಯಂತ್ರ, ಕುತಂತ್ರ ಎಲ್ಲವೂ ನಡೆಯುತ್ತಿದೆ. ಬಿಜೆಪಿ ನಾಯಕರು ಏನು ಬೇಕಾದರೂ ಮಾಡಿಕೊಳ್ಳಲಿ ಎಂದರು.

ಇನ್ನು ಯಾರ ಅನುಕಂಪ ಕೂಡ ನಮಗೆ ಬೇಕಾಗಿಲ್ಲ. ಮನೆಯಿಂದ ಹೊರಹಾಕಿ ಬಿಟ್ಟರೆ ನಾವು ಒದ್ದಾಡಬೇಕಾಗುತ್ತಲ್ಲ, ಅದಕ್ಕಾಗಿ ನಮ್ಮ ಎಚ್ಚರಿಕೆಯಲ್ಲಿ ನಾವಿದ್ದೇವೆ ಎಂದು ಡಿಕೆಶಿ ತಿಳಿಸಿದರು.

Leave a Reply

error: Content is protected !!
LATEST
ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ ಪೋಸ್ಟ್ ಆಫೀಸ್ ಸೇವೆಗಳು ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಲಭ್ಯ 5ವರ್ಷದೊಳಗಿನ ಮಕ್ಕಳಿಗೆ PCV ಲಸಿಕೆ ಹಾಕಿಸಿ: ಸುರಳ್ಕರ್ ವಿಕಾಸ್ ಕಿಶೋರ್ KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು?