NEWSನಮ್ಮರಾಜ್ಯ

4 ಸಾವಿರ ಕೋಟಿ ರೂ. ವಿಶೇಷ ಆರ್ಥಿಕ ನೆರವಿಗೆ ರಾಜ್ಯದ ಮನವಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಭಾರಿ ಪ್ರವಾಹದಿಂದ ಸಂಕಷ್ಟಕ್ಕೆ ಒಳಗಾದವರಿಗೆ ಪರಿಹಾರ ಮತ್ತು ತುರ್ತು ಕಾಮಗಾರಿಗಳಿಗೆ ನಾಲ್ಕು ಸಾವಿರ ಕೋಟಿ ರೂಪಾಯಿಗಳ ವಿಶೇಷ ಆರ್ಥಿಕ ನೆರವು ನೀಡುವಂತೆ ಪ್ರಧಾನಿ ಮೋದಿಯವರಿಗೆ ರಾಜ್ಯ ಸರಕಾರ ಮನವಿ ಮಾಡಿದ್ದು, ಇದಕ್ಕೆ ಪ್ರಧಾನಿ ಮೋದಿ ಅವರಿಂದ ಸೂಕ್ತ ಆಶ್ವಾಸನೆ ಬಂದಿದೆ ಎಂದು  ಕಂದಾಯ ಸಚಿವ ಆರ್‌. ಅಶೋಕ್‌ ತಿಳಿಸಿದ್ದಾರೆ.

ರಾಜ್ಯದ 12 ಜಿಲ್ಲೆಗಳಲ್ಲಿ ತಲೆದೋರಿರುವ ಪ್ರವಾಹ ಪರಿಸ್ಥಿತಿ ನಿಭಾಯಿಸಲು 4 ಸಾವಿರ ಕೋಟಿ ರೂ. ವಿಶೇಷ ಆರ್ಥಿಕ ನೆರವು ಮತ್ತು ಎಸ್‌ಡಿಆರ್‌ಎಫ್‌ನ (ರಾಜ್ಯ ವಿಕೋಪ ಪರಿಹಾರ ನಿಧಿ) ಎರಡನೇ ಕಂತು  395 ಕೋಟಿ ರೂ.ಗಳನ್ನು ತುರ್ತಾಗಿ ಬಿಡುಗಡೆ ಮಾಡುವಂತೆ  ನರೇಂದ್ರ ಮೋದಿಯವರಿಗೆ ರಾಜ್ಯ ಸರ್ಕಾರ ಮನವಿ ಮಾಡಿಕೊಂಡಿದೆ ಅದಕ್ಕೆ ಉತ್ತಮವಾಗಿ ಸ್ಪಂದಿಸಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಪರಿಹಾರ ಕ್ರಮಗಳನ್ನು ಕೈಗೊಳ್ಳಿ ಎಂದು ಮೋದಿಯವರು ಇದೇ ಸಂದರ್ಭದಲ್ಲಿ ಸೂಚಿಸಿ, ನೆರವಿನ ಭರವಸೆ ನೀಡಿದರು. ಜತೆಗೆ ಪ್ರವಾಹದಲ್ಲಿ ಮೃತಪಟ್ಟವರ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ ಪ್ರಧಾನಿ, ಜನ ಮತ್ತು ಜಾನುವಾರುಗಳ ರಕ್ಷಣೆಗೆ ಆದ್ಯತೆ ನೀಡಿ ಎಂದು ಸಲಹೆಯಿತ್ತರು ಎಂದು ತಿಳಿಸಿದರು.

4 ಸಾವಿರ ಕೋಟಿ ರೂ. ನೀಡಿ
ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿಯನ್ನು ನಿರ್ವಹಿಸಲು ಈಗಾಗಲೇ ತರಬೇತಿ ಪಡೆದ 200 ಎಸ್‌ಡಿಆರ್‌ಎಫ್‌ ಸಿಬಂದಿ, ನಾಲ್ಕು ಎನ್‌ಡಿಆರ್‌ಎಫ್‌ ತಂಡಗಳು ಮತ್ತು ನಾಲ್ಕು ರಕ್ಷಣ ಹೆಲಿಕಾಪ್ಟರ್‌ಗಳನ್ನು ಒದಗಿಸಲಾಗಿದ್ದು, ಹೆಚ್ಚುವರಿಯಾಗಿ 4 ಎನ್‌ಡಿಆರ್‌ಎಫ್‌ ತಂಡಗಳನ್ನು ಕಳುಹಿಸಲು ಕೋರಿದ್ದೇವೆ ಎಂದರು.

ದೀರ್ಘಾವಧಿ ಪರಿಹಾರವಾಗಿ ಕಾವೇರಿ ಮತ್ತು ಕೃಷ್ಣಾ ನದಿ ಪಾತ್ರಗಳಲ್ಲಿ ಹಾಗೂ ಪಶ್ಚಿಮ ಘಟ್ಟಗಳು ವ್ಯಾಪಿಸಿರುವ ನೆರೆ ರಾಜ್ಯಗಳಲ್ಲಿ ಭೂಕುಸಿತಕ್ಕೆ ಸಂಬಂಧಿಸಿ ಮ್ಯಾಪಿಂಗ್‌ ಮತ್ತು ಮುನ್ಸೂಚನೆ ವ್ಯವಸ್ಥೆಯನ್ನು ಸ್ಥಾಪಿಸುವ ಕುರಿತು ಕೇಂದ್ರ ಭೂ ವಿಜ್ಞಾನ ಸರ್ವೇಕ್ಷಣ ಇಲಾಖೆ ವತಿಯಿಂದ ಅಧ್ಯಯನ ಕೈಗೊಳ್ಳುವಂತೆಯೂ ಮನವಿ ಮಾಡಲಾಗಿದೆ. ಕೇಂದ್ರ ಜಲ ಆಯೋಗದ ವತಿಯಿಂದ ಕೃಷ್ಣಾ ನದಿ ಪಾತ್ರ ದಲ್ಲಿ ಪ್ರವಾಹ ಪರಿಸ್ಥಿತಿ ಮುನ್ಸೂಚನೆ ವ್ಯವಸ್ಥೆ ಸ್ಥಾಪಿಸಬೇಕು. ಕಡಲ್ಕೊರೆತ ನಿಯಂ ತ್ರಣಕ್ಕಾಗಿ ನ್ಯಾಷನಲ್‌ ಸೈಕ್ಲೋನ್‌ ಮಿಟಿಗೇಶನ್‌ ರಿಲೀಫ್‌ ಪ್ರಾಜೆಕ್ಟ್‌ ಯೋಜನೆ ಯಡಿ ಕಡಲು ಕೊರೆತ ಸೇರ್ಪಡೆಗೊಳಿಸಲು ಪ್ರಸ್ತಾವನೆ ಸಲ್ಲಿಸಿದ್ದೇವೆ ಎಂದರು.

ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್‌, ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್‌, ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ರವಿಕುಮಾರ್‌ ಪಾಲ್ಗೊಂಡಿದ್ದರು.

 

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು