ಮೈಸೂರು: ದಸರಾ ಮಹೋತ್ಸವದ ಆಚರಣೆಗೆಂದು ಸರ್ಕಾರವೇ 40 ಕೋಟಿ ರೂ. ಬಿಡುಗಡೆ ಮಾಡುವುದಾಗಿ ಹೇಳಿದೆ. ಈ ನಡುವೆ ಮತ್ತೆ ಪ್ರಾಯೋಜಕರನ್ನು ಹುಡುಕುತ್ತಿರುವುದಾದರು ಏಕೆ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಪ್ರಶ್ನಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಈ ಬಾರಿ ಅದ್ದೂರಿ ದಸರಾ ಮಾಡುವುದಾಗಿ ಹೇಳಿದೆ. ಇದಕ್ಕಾಗಿ 40 ಕೋಟಿ ರೂ. ಅನುದಾನವನ್ನು ಘೋಷಣೆ ಮಾಡಿದೆ. ಇಷ್ಟಾದ ಮೇಲೂ ಪ್ರಾಯೋಜಕರ ಬಳಿ ಹಣ ಕೇಳುವುದು ಎಷ್ಟರ ಮಟ್ಟಿಗೆ ಸರಿ ಎಂದು ಕಿಡಿಕಾರಿದ್ದಾರೆ.
ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಸಿದ್ಧತೆ ಆರಂಭಗೊಂಡಿದ್ದು, ದಸರಾ ಪ್ರಾಯೋಜಕರನ್ನು ಹುಡುಕುವ ಕೆಲಸ ಶುರುವಾಗಿದೆ. ಇದನ್ನು ಗಮನಿಸಿದರೆ ಹಣ ಲೂಟಿ ಮಾಡುವ ಸಂಚು ರೂಪಿಸುತ್ತಿರುವಂತೆ ಕಾಣುತ್ತಿದೆ ಎಂದು ಆರೋಪಿಸಿದ್ದಾರೆ.