NEWSಆರೋಗ್ಯನಮ್ಮಜಿಲ್ಲೆ

ಅಂಧ ಕಲಾವಿದರಿಗೆ ಕಾರ್ಮಿಕ ಇಲಾಖೆಯಿಂದ ಅಗತ್ಯ ವಸ್ತುಗಳ ವಿತರಣೆ  

ವಿಜಯಪಥ ಸಮಗ್ರ ಸುದ್ದಿ

ತುಮಕೂರು: ತಾಲೂಕಿನ ಹೆಗ್ಗೆರೆ ಗ್ರಾಮದ ಭೈರವೇಶ್ವರ ಕಾಲೇಜಿನ ಬಳಿ ವಾಸವಿರುವ ಅಂಧ ಕಲಾವಿದರಿಗೆ ಇಂದು ಬೆಳಗ್ಗೆ ಕಾರ್ಮಿಕ ಇಲಾಖೆಯಿಂದ 25 ಕೆ.ಜಿ. ಅಕ್ಕಿ, ಸಕ್ಕರೆ, ಸೋಪು ಹಾಗೂ ಮತ್ತಿತರ ಅಗತ್ಯ ವಸ್ತುಗಳನ್ನು ವಿತರಣೆ ಮಾಡಲಾಯಿತು.

ಸೋಂಕು ಹರಡದಂತೆ ಜಾರಿಯಲ್ಲಿರುವ ಲಾಕ್‌ಡೌನ್ ಸಂದರ್ಭದಲ್ಲಿ ಆಹಾರಕ್ಕೆ ತೊಂದರೆಯಾಗಬಾರದೆನ್ನುವ ದೃಷ್ಟಿಯಿಂದ ಈ ಅಂಧ ಕಲಾವಿದರ ತಂಡಕ್ಕೆ  ಅಗತ್ಯ ವಸ್ತುಗಳನ್ನು ವಿತರಣೆ ಮಾಡಲಾಯಿತು. ಕಾರ್ಮಿಕ ಅಧಿಕಾರಿ ಸುಭಾಷ್ ಎಂ. ಆಲದಕಟ್ಟೆ, ಕಂದಾಯ ನಿರೀಕ್ಷಕರು ಮತ್ತಿತರರಿದ್ದರು.

ಕೊರೊನಾ ಯೋಧರಿಂದ ಆಹಾರ ಪೂರೈಕೆ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಭಾರತೀಯ ರೆಡ್‌ಕ್ರಾಸ್ ಸೊಸೈಟಿ ಹಾಗೂ ರಾಜ್ಯ ಕಾರ್ಮಿಕ ಅಧ್ಯಯನ ಸಂಸ್ಥೆ ಸಹಯೋಗದಲ್ಲಿ ರಚಿಸಲಾಗಿರುವ ಕೊರೊನಾ ಯೋಧರು (ಕೊರೊನಾ ವಾರಿಯರ್ಸ್) ಪ್ರತಿದಿನ ಬೆಳಗ್ಗೆ ಹಾಗೂ ಸಂಜೆ ಹೆಗ್ಗೆರೆಯ ಈ 5 ಮಂದಿ ಅಂಧ ಕಲಾವಿದರಾದ ವಿಜಯ್‌ಕುಮಾರ್, ಸುರೇಶ್, ಮಂಜುಳ, ಶಿವಮ್ಮ, ಶೈಲಜ ಅವರಿಗೆ   ಆಹಾರ ಪೂರೈಕೆ ಮಾಡುವ ಮೂಲಕ ಮಾನವೀಯತೆ ಮೆರೆಯುತ್ತಿದ್ದಾರೆ.

ನಂದನ್‌ಕುಮಾರ್, ಹೇಮಂತ್‌ಕುಮಾರ್, ಕುಮಾರಸ್ವಾಮಿ, ಗಿರೀಶ್ ಸೇರಿದಂತೆ 8 ಕೊರೊನಾ ಯೋಧರ ತಂಡವು ಬಾಳನಕಟ್ಟೆಯಲ್ಲಿರುವ ವೀರಶೈವ ಸಮಾಜದ ಕಲ್ಯಾಣ ಮಂಟಪದಲ್ಲಿ ತಯಾರಿಸಲಾಗುತ್ತಿರುವ ಆಹಾರವನ್ನು ಪ್ರತೀ ದಿನ ಅಂಧರಿಗೆ   ತಲುಪಿಸುವ ಕೆಲಸ ಮಾಡುವುದರೊಂದಿಗೆ    ಭೀಮಸಂದ್ರದಿಂದ ಮಲ್ಲಸಂದ್ರದವರೆಗೆ ಜೋಪಡಿಗಳಲ್ಲಿ ವಾಸಿಸುತ್ತಿರುವ 150 ಮಂದಿ ನಿರ್ಗತಿಕರು ಹಾಗೂ ಕಡುಬಡವರಿಗೂ ಆಹಾರ ಪೂರೈಕೆ ಮಾಡುತ್ತಿದ್ದಾರೆ.

ಹೆಗ್ಗೆರೆಯ ಅಂಧ ಕಲಾವಿದರ ತಂಡವು ಲಾಕ್‌ಡೌನ್‌ನಿಂದ ಆಹಾರ ಸಮಸ್ಯೆ ಎದುರಿಸುತ್ತಿದ್ದಾರೆಂದು   ಸಾಮಾಜಿಕ ಜಾಲತಾಣದ ಮೂಲಕ  ಮಾಹಿತಿ ತಿಳಿದ ಕೂಡಲೇ ಕಾರ್ಮಿಕ ಇಲಾಖೆ, ವಾರ್ತಾ ಇಲಾಖೆ, ಆಹಾರ ಇಲಾಖೆ ಅಧಿಕಾರಿಗಳು ಕೂಡಲೇ ಧಾವಿಸಿ ದಿನಸಿ ಪದಾರ್ಥ, ಮಾಸ್ಕ್‌ಗಳನ್ನು ವಿತರಿಸುವುದರೊಂದಿಗೆ ಕೊರೊನಾ ವೈರಸ್ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಅರಿವು ಮೂಡಿಸಿದರು.

ಗ್ರಾ.ಪಂ. ಅಧ್ಯಕ್ಷ ನಾಗರಾಜ್, ಸದಸ್ಯ ಭೋಜಣ್ಣ, ವಾರ್ತಾ ಇಲಾಖೆ ಆರ್. ರೂಪಕಲಾ, ಆನಂದ್, ಆಹಾರ ನಿರೀಕ್ಷಕ ಕಾಂತರಾಜಯ್ಯ, ಸ್ಥಳೀಯರು ಉಪಸ್ಥಿತರಿದ್ದರು.

Leave a Reply

error: Content is protected !!
LATEST
ಚಾಮುಂಡಿ ಹುಟ್ಟುಹಬ್ಬ: ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ವರ್ಧಂತಿ ಸಂಭ್ರಮ: ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ...