NEWSನಮ್ಮರಾಜ್ಯ

ಮನೆ ಕಟ್ಟಲು ಪಾಯತೆಗೆಯುತ್ತಿದ್ದಾಗ ಸಿಕ್ಕಿತು 470ಗ್ರಾಂ ನಿಧಿ: ಪ್ರಾಮಾಣಿಕತೆ ಮೆರೆದ ಕುಟುಂಬ- ಇವರಿಗೇ ಕೊಡಿಬಿಡಿ ಎಂದ ಜನರು

ವಿಜಯಪಥ ಸಮಗ್ರ ಸುದ್ದಿ

ಗದಗ: ಜಿಲ್ಲೆಯ ಲಕ್ಕುಂಡಿ ಗ್ರಾಮವನ್ನು ದೇವಾಲಯಗಳ ಸ್ವರ್ಗ, ಶಿಲ್ಪ ಕಲೆಯ ತೊಟ್ಟಿಲು, ವಾಸ್ತು ಶಿಲ್ಪ ಕಲೆಗಳ ಸ್ವರ್ಗ ಅಂತ ಕೆರೆಯಲಾಗುತ್ತದೆ. ಇಂತಹ ಐತಿಹಾಸಿಕ ಸ್ಥಳದಲ್ಲಿ ಹೊನ್ನಿನ ನಿಧಿ ಪತ್ತೆಯಾಗಿದೆ. ಮನೆ ಕಟ್ಟಲು ಪಾಯ ತೆಗೆಯುವಾಗ ತಾಮ್ರದ ಪಾತ್ರೆಯಲ್ಲಿ ಚಿನ್ನಾಭರಣ ಪತ್ತೆಯಾಗಿದೆ.

ಲಕ್ಕುಂಡಿ ಗ್ರಾಮದ ನಿವಾಸಿ ಗಂಗವ್ವ ಬಸವರಾಜ ರಿತ್ತಿ ಎಣಬುವರು ಮನೆ ಕಟ್ಟಲು ಅಡಿಪಾಯ ಹಾಕಿಸುತ್ತಿದ್ದರು. ಈ ವೇಳೆ 470 ಗ್ರಾಂ ಚಿನ್ನಾಭರಣಗಳು ಸಿಕ್ಕಿದ್ದು, ಅದನ್ನು ಪ್ರಾಮಾಣಿಕವಾಗಿ ಕುಟುಂಬದವರು ಗ್ರಾಮಪಂಚಾಯಿತಿಗೆ ಒಪ್ಪಿಸಿದ್ದಾರೆ.

ತಾಮ್ರದ ಪಾತ್ರೆಯಲ್ಲಿ ನಿಧಿ ಪತ್ತೆ!: ಗಂಗವ್ವ ಬಸವರಾಜ ರಿತ್ತಿ ಅವರು ಮನೆ ಕಟ್ಟಲು ಪಾಯ ತೆಗೆಯುತ್ತಿದ್ದು, ಈ ವೇಳೆ ಎಂಟನೇ ತರಗತಿಯ ವಿದ್ಯಾರ್ಥಿ ಪ್ರಜ್ವಲ್ ರಿತ್ವಿಕ್​ಗೆ ತಾಮ್ರದ ಪಾತ್ರೆ ಕಾಣಿಸಿದೆ. ಅದರಲ್ಲಿ ರಾಜರ ಕಾಲದ ಹಾರ ಮತ್ತು ಕಿವಿಯೋಲೆಗಳು ಸೇರಿದಂತೆ ವಿವಿಧ ರೀತಿಯ ಚಿನ್ನಾಭರಣಗಳು ಪತ್ತೆಯಾಗಿವೆ.

ಅದು ಸುಮಾರು 470 ಗ್ರಾಂ ಚಿನ್ನಾಭರಣ ಪತ್ತೆಯಾಗಿದ್ದು, ಅದನ್ನು ಕಂಡ ಕೂಡಲೇ ಓಪನ್‌ ಮಾಡಿ ಚಿನ್ನಾಭರಣ ಎಂದು ತಿಳಿದ ಕೂಡಲೇ ಆತ ಗ್ರಾಮ ಪಂಚಾಯಿತಿ ಸದಸ್ಯರಿಗೆ ಒಪ್ಪಿಸಿದ್ದಾರೆ. ಅವರು ಈ ಸಂಬಂಧ ತಾಲೂಕು ಆಡಳಿತಕ್ಕೆ ಮಾಹಿತಿ ನೀಡಿದ್ದಾರೆ.

ತಾಲೂಕು ಅಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಈ ವಿಷಯ ತಿಳಿಸಿದ್ದು, ಸ್ಥಳಕ್ಕೆ ಅಪರ ಜಿಲ್ಲಾಧಿಕಾರಿ ದುರಗೇಶ್, ಎಸ್.​​ ರೋಹನ್ ಜಗದೀಶ್, ಎಸಿ ಗಂಗಪ್ಪ, ತಹಸೀಲ್ದಾರ್‌ ಶ್ರೀನಿವಾಸ ಕುಲಕರ್ಣಿ ಭೇಟಿ ನೀಡಿ ನಿಧಿಯನ್ನು ವಶಕ್ಕೆ ಪಡೆದಿದ್ದಾರೆ. ಇನ್ನು, ತಾಮ್ರದ ಪಾತ್ರೆಯಲ್ಲಿ ಸಿಕ್ಕ ನಿಧಿ ಯಾವ ಕಾಲದ್ದು ಅನ್ನುವುದನ್ನು ಪರಿಶೀಲನೆ ನಡೆಸಲಾಗುತ್ತಿದೆ.

ಈ ನಡುವೆ ಇದು ನಮ್ಮ ಕುಟುಂಬದವರ ನಿಧಿಯಾಗಿದ್ದರೆ ಇದನ್ನು ನಮಗೇ ಕೊಡಿ ಎಂದು ಕುಟುಂಬದವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಇನ್ನು ಸಿಕ್ಕ ನಿಧಿಯನ್ನು ಪ್ರಾಮಾಣಿಕವಾಗಿ ತಂದು ಸರ್ಕಾರಕ್ಕೆ ಒಪ್ಪಿಸಿರುವುದಕ್ಕೆ ಕುಟುಂಬದ ಯುವಕನನ್ನು ಜಿಲ್ಲಾಡಳಿತದ ವತಿಯಿಂದ ಸನ್ಮಾನಿಸಲಾಗಿದೆ. ಅಲ್ಲದೆ ಈ ವಿಷಯವನ್ನು ತಿಳಿದ ಸಿಎಂ ಸಿದ್ದರಾಮಯ್ಯ ಅವರು ಕುಟುಂಬದ ಬಗ್ಗೆ ಪ್ರಾಶಂಸೆ ವ್ಯಕ್ತಪಡಿಸಿದ್ದಾರೆ.

ಆದರೂ ಕುಟುಂಬಕ್ಕೆ ಆತಂಕ: ಪ್ರಾಮಾಣಿಕತೆ ಮೆರೆದ ಕುಟುಂಬ ನಿಧಿಯನ್ನು ಜಿಲ್ಲಾಡಳಿತಕ್ಕೆ ಹಸ್ತಾಂತರಿಸಿದರೂ, ಈಗ ಆ ಕುಟುಂಬಕ್ಕೆ ಭಯ ಮತ್ತು ಆತಂಕ ಶುರುವಾಗಿದೆ. ನಿಧಿ ಸಿಕ್ಕಿದ ಸ್ಥಳವನ್ನು ನಿಷಿದ್ಧ ಪ್ರದೇಶವೆಂದು ಘೋಷಿಸಿರುವ ಕಾರಣ, ಅವರು ಕಟ್ಟುತ್ತಿದ್ದ ಮನೆ ಅರ್ಧಕ್ಕೆ ನಿಂತಿದೆ. ಹೀಗಾಗಿ, ವಾಸಕ್ಕೆ ಮನೆಯಿಲ್ಲದೆ ಕುಟುಂಬ ಬೀದಿಗೆ ಬಂದಂತಾಗಿದ್ದು, ಎಲ್ಲಿ ಬದುಕು ಸಾಗಿಸಬೇಕು ಎಂಬ ಚಿಂತೆಯಲ್ಲಿದೆ.

ಮನೆಯ ಯಜಮಾನ ಮೃತಪಟ್ಟಿದ್ದು, ಕುಟುಂಬದಲ್ಲಿ ತಾಯಿ ಮತ್ತು ಚಿಕ್ಕ ಮಗನಿದ್ದಾನೆ. ಈ ಬಡ ಕುಟುಂಬಕ್ಕೆ ಈಗ ಆಸರೆ ಇಲ್ಲದೇ ಒದ್ದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಮನೆಯ ಸದಸ್ಯರು ಮತ್ತು ಗ್ರಾಮಸ್ಥರು ಒಗ್ಗಟ್ಟಾಗಿ ನಿಂತು ಸರ್ಕಾರಕ್ಕೆ ಮನವಿ ಮಾಡಿದ್ದು, ಈ ನಿಧಿಯನ್ನು ಈ ಬಡಕುಟುಂಬಕ್ಕೆ ಕೊಡಿ ಅವರು ಜೀವನ ಕಟ್ಟಿಕೊಳ್ಳಲಿ ಎಂದು ಮನವಿ ಮಾಡಿದ್ದಾರೆ.

Megha
the authorMegha

Leave a Reply

error: Content is protected !!