CrimeNEWSದೇಶ-ವಿದೇಶ

50 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಕಿರಿಯ ಇಂಜಿನಿಯರ್ ಬಂಧನ

ವಿಜಯಪಥ ಸಮಗ್ರ ಸುದ್ದಿ

ಚಿತ್ರಕೂಟ್‌ (ಉ.ಪ್ರ.): ಹತ್ತು ವರ್ಷಗಳ ಅವಧಿಯಲ್ಲಿ ಸುಮಾರು 50 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಸಿಬಿಐ ಅಧಿಕಾರಿಗಳು, ಉತ್ತರ ಪ್ರದೇಶ ಸರ್ಕಾರದ ಕಿರಿಯ ಇಂಜಿನಿಯರ್‌ ಒಬ್ಬನನ್ನು ಬಂಧಿಸಿದ್ದಾರೆ.

ಚಿತ್ರಕೂಟ್‌ ನಿವಾಸಿ ರಾಮ ಭವನ್‍ ಬಂಧಿತ ಆರೋಪಿ. ಈತ ಕಳೆದ ಹತ್ತು ವರ್ಷಗಳಲ್ಲಿ 50 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಕೇಳಿ ಬಂದಿದೆ. ಅಲ್ಲದೇ ಮಕ್ಕಳ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಫೋಟೋಗಳು, ವಿಡಿಯೋಗಳನ್ನು ಮಾರಾಟ ಮಾಡಿರುವ ಆರೋಪ ಸಹ ಇದೆ.

ಬಂಧಿತ ಆರೋಪಿಯನ್ನು ಸಿಬಿಐ ಅಧಿಕಾರಿಗಳು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಈ ಎಲ್ಲಾ ಕೃತ್ಯಗಳನ್ನು ಒಬ್ಬನೇ ಮಾಡಿರುವ ಬಗ್ಗೆಯೂ ಅನುಮಾನ ವ್ಯಕ್ತಪಡಿಸಿದ್ದಾರೆ.

ಇನ್ನು ಅಧಿಕಾರಿಗಳ ಪ್ರಕಾರ ದೌರ್ಜನ್ಯಕ್ಕೊಳಗಾದ ಮಕ್ಕಳು, 5 ರಿಂದ 16 ವರ್ಷದೊಳಗಿನವರು ಎನ್ನಲಾಗಿದ್ದು, ಉತ್ತರ ಪ್ರದೇಶದ ಬಂದಾ, ಚಿತ್ರಕೂಟ್‌  ಮತ್ತು ಹಮೀರ್‌ ಪುರದವರು ಎಂದು ತಿಳಿದು ಬಂದಿದೆ.

ಆರೋಪಿಯ ನಿವಾಸದ ಮೇಲೆ ದಾಳಿ ನಡೆಸಿದ ಅಧಿಕಾರಿಗಳು, 8 ಮೊಬೈಲ್‍, 8 ಲಕ್ಷ ರೂ. ನಗದು, ಲ್ಯಾಪ್‍ಟಾಪ್‍ ಸೇರಿ ಡಿಜಿಟಲ್ ಸಾಕ್ಷ್ಯಗಳನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ