CrimeNEWSನಮ್ಮಜಿಲ್ಲೆನಮ್ಮರಾಜ್ಯ

50 ರೂ.ಲಂಚ ಪ್ರಕರಣ: ಕಡ್ಡಾಯ ನಿವೃತ್ತಿ ಶಿಕ್ಷೆ ರದ್ದು ಪಡಿಸಿದ ಹೈ ಕೋರ್ಟ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: 50 ರೂಪಾಯಿ ಲಂಚ ಪಡೆದು ಎಂಬ ಕಾರಣಕ್ಕೆ ಸರ್ಕಾರಿ ಉದ್ಯೋಗಿಯೊಬ್ಬರಿಗೆ ಕಡ್ಡಾಯ ನಿವೃತ್ತಿ ಶಿಕ್ಷೆ ನೀಡಿರುವುದು ಸಮಂಜಸವಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಸುಮಾರು 18 ವರ್ಷಗಳು ಸರ್ಕಾರಿ ಸೇವೆ ಸಲ್ಲಿಸಿದ ಉದ್ಯೋಗಿ ಎಂ.ಎಸ್. ಕಡ್ಕೋಳ್ ಎಂಬುವರು ಈಗ ಕಡ್ಡಾಯ ನಿವೃತ್ತಿ ಶಿಕ್ಷೆಗೆ ಒಳಗಾಗಿರುವ ಕುರಿತಂತೆ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ ನ್ಯಾಯಮೂರ್ತಿ ಎಸ್.ಜಿ. ಪಂಡಿತ್ ಹಾಗೂ ನ್ಯಾ. ಅನಂತ್ ರಾಮನಾಥ್ ಹೆಗ್ಡೆ ಅವರಿದ್ದ ದ್ವಿಸದಸ್ಯಪೀಠ ಶಿಕ್ಷೆಯನ್ನು ರದ್ದುಪಡಿಸಿದೆ. ಅಲ್ಲದೇ, ಪ್ರಕರಣವನ್ನು ಮತ್ತೆ ಹೊಸದಾಗಿ ಪರಿಗಣಿಸಿ ಕ್ರಮ ಕೈಗೊಳ್ಳುವಂತೆ ಶಿಸ್ತುಪ್ರಾಧಿಕಾರಕ್ಕೆ ಆದೇಶಿಸಿದೆ.

ಪ್ರಕರಣದ ಹಿನ್ನೆಲೆ: ಸಹಾಯಕ ಕಾರ್ಯಪಾಲಕ ಇಂಜಿನಿಯರ್ (AEE) ಚಂದ್ರಾಚಾರಿ ಎಂಬುವರನ್ನು 1998ರಲ್ಲಿ ಬ್ಯಾಡಗಿಯಿಂದ ಧಾರವಾಡಕ್ಕೆ ವರ್ಗಾವಣೆಗೊಂಡಿದ್ದರು. ಆ ವರ್ಗಾವಣೆ ಕಡತವನ್ನು ವಿಲೇವಾರಿ ಮಾಡಲು 150 ರೂಪಾಯಿ ಲಂಚ ಕೇಳಿದ್ದರೆಂದು ದೂರು ನೀಡಲಾಗಿತ್ತು. ಅದರಂತೆ 50 ರೂಪಾಯಿ ಲಂಚ ಪಡೆಯುವ ವೇಳೆ ಕಡ್ಕೋಳ್ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದರು.

ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಸೆಕ್ಷನ್ 7, 13(1) ಹಾಗೂ 13(2) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು. ಆ ಬಳಿಕ ಇಲಾಖಾ ತನಿಖೆ ಕೂಡ ನಡೆಸಲಾಗಿತ್ತು. ತನಿಖಾಧಿಕಾರಿ ದೋಷಾರೋಪಣ ಪಟ್ಟಿ ಸಲ್ಲಿಸಿದ ಬಳಿಕ ಶಿಸ್ತುಪ್ರಾಧಿಕಾರ 2004ರ ಸೆಪ್ಟೆಂಬರ್ 7ರಂದು ಕಡ್ಡಾಯ ನಿವೃತ್ತಿ ಶಿಕ್ಷೆ ನೀಡಿ ಆದೇಶಿಸಿತ್ತು.

ಆ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು 2016ರ ಜೂನ್ 1ರಂದು ಕರ್ನಾಟಕ ಆಡಳಿತ ನ್ಯಾಯಮಂಡಳಿ ತಿರಸ್ಕರಿಸಿತ್ತು. ಈ ಹಿನ್ನೆಲೆಯಲ್ಲಿ ಕಡ್ಕೋಳ್ ಹೈಕೋರ್ಟ್ ಮೊರೆ ಹೋಗಿದ್ದರು. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು 50 ರೂಪಾಯಿ ಲಂಚ ಪಡೆದಿದ್ದಾರೆ ಎಂಬ ಆರೋಪಕ್ಕೆ ಸೇವೆಯಿಂದ ಕಡ್ಡಾಯ ನಿವೃತ್ತಿ ನೀಡಿರುವ ಕ್ರಮ ಸೂಕ್ತವಲ್ಲ ಎಂದು ವಾದ ಮಂಡಿಸಿದರು.

ಅಲ್ಲದೆ ದೂರುದಾರರ ಯಾವುದೇ ಕೆಲಸ ಅರ್ಜಿದಾರರ ಮುಂದೆ ಇರಲಿಲ್ಲ. ಅಂದರೆ ಅರ್ಜಿದಾರರ ವಿರುದ್ಧ ಲಂಚ ಕೇಳಿದ್ದಾರೆ ಎಂಬ ಯಾವುದೇ ದೂರು ಇರಲಿಲ್ಲ. ಹಾಗಿದ್ದೂ ಅವರ ಬಳಿ ಲಂಚ ನೀಡಿದ್ದಾರೆ ಎನ್ನಲಾದ 50 ರೂ. ಸಿಕ್ಕಿತ್ತು ಎಂಬ ಕಾರಣಕ್ಕೆ ಕಡ್ಡಾಯ ನಿವೃತ್ತಿ ಸರಿಯಲ್ಲ ಎಂದು ವಾದಿಸಿದ್ದರು. ಅರ್ಜಿದಾರರ ಪರ ವಕೀಲರ ವಾದ ಪರಿಗಣಿಸಿದ ಹೈಕೋರ್ಟ್ ಹೊಸದಾಗಿ ಪ್ರಕರಣ ಪರಿಗಣಿಸಿ ಇತ್ಯರ್ಥಪಡಿಸಲು ಈ ಮೇಲಿನಂತೆ ಆದೇಶಿ ಹೊರಡಿಸಿದೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು