NEWSನಮ್ಮಜಿಲ್ಲೆನಮ್ಮರಾಜ್ಯ

KSRTC ಶಕ್ತಿ ಯೋಜನೆಯಡಿ ಮಹಿಳೆಯರ 500 ಕೋಟಿ ಉಚಿತ ಪ್ರಯಾಣ: ಜು.14ರಂದು ಎಲ್ಲೆಡೆ ಸಿಹಿ ಹಂಚಿ ಸಂಭ್ರಮ- ಅಧ್ಯಕ್ಷ ರೇವಣ್ಣ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳ ಕಳೆದ 2023ರ ಜೂನ್‌ 11ರಂದು ಜಾರಿಗೆ ಬಂದ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ನೀಡಿದ್ದು, ಈವರೆಗೆ 500 ಕೋಟಿ ಮಹಿಳಾ ಪ್ರಯಾಣಿಕರು ಉಚಿತವಾಗಿ ಪ್ರಯಾಣಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಜುಲೈ 14ರಂದು ಡಿಪೋಗಳು ಸೇರಿದಂತೆ ಇತರೆಡೆಗಳಲ್ಲಿ ಸಿಹಿ ಹಂಚಿ ಸಂಭ್ರಮಿಸಲಾಗುವುದು ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ. ರೇವಣ್ಣ ತಿಳಿಸಿದ್ದಾರೆ.

ಈ ಸಂಬಂಧ ಎಲ್ಲ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಪದಾಧಿಕಾರಿಗಳಿಗೆ ಮಾಹಿತಿ ನೀಡಿರುವ ಅವರು, ಶಕ್ತಿ ಯೋಜನೆ ಅಡಿಯಲ್ಲಿ 500 ಕೋಟಿ ಫಲಾನುಭವಿಗಳು ಪ್ರಯಾಣಿಸಿರುವುದನ್ನು ಸಾಂಕೇತಿಕವಾಗಿ ಸೋಮವಾರ ಅಂದರೆ ಜುಲೈ 14 ರಂದು ರಾಜ್ಯದ ಎಲ್ಲ ಜಿಲ್ಲೆಗಳ ಹಾಗೂ ತಾಲೂಕುಗಳ ಬಸ್ ಡಿಪೋ/ ಬಸ್ ನಿಲ್ದಾಣ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಆಯಾ ಸಮಿತಿಯ ಸದಸ್ಯರು ಒಂದು ಬಸ್ಸಿಗೆ ಪೂಜೆ ಸಲ್ಲಿಸಿ, ಪ್ರಯಾಣಿಕರಿಗೆ ಸಿಹಿ ಹಂಚುವುದರೊಂದಿಗೆ ಆಚರಿಸುವಂತೆ ತಿಳಿಸಿದ್ದಾರೆ.

ಇನ್ನು 2023ನೇ ಸಾಲಿನ ವಿಧಾನಸಭಾ ಚುನಾವಣೆಯ ಕರ್ನಾಟಕ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಸರ್ಕಾರದ ಬಹು ನಿರೀಕ್ಷಿತ ಮತ್ತು ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳನ್ನು ಪ್ರಕಟಿಸಿ ಅವುಗಳನ್ನು ಸಕರಾತ್ಮಕವಾಗಿ ಅನುಷ್ಠಾನಗೊಳಿಸಿರುವುದು ನಮ್ಮೆಲ್ಲರ ಹೆಮ್ಮೆಯ ವಿಚಾರ ಎಂದು ಹೇಳಿದ್ದಾರೆ.

ಈ ಐದು ಗ್ಯಾರಂಟಿ ಯೋಜನೆಗಳ ಪೈಕಿ ‘ಶಕ್ತಿ – ಯೋಜನೆಯನ್ನು ಮೊಟ್ಟಮೊದಲಿಗೆ ನಮ್ಮ ಸರ್ಕಾರ ಜಾರಿಗೊಳಿಸಿತು. ಈ ಮೂಲಕ, ರಾಜ್ಯದ ಎಲ್ಲ ಮಹಿಳೆಯರು ವಿದ್ಯಾರ್ಥಿನಿಯರು ಮತ್ತು ಲಿಂಗತ್ವ ಅಲ್ಪ ಸಂಖ್ಯಾತರು ಸೇರಿದಂತೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಸೌಲಭ್ಯವನ್ನು ನಮ್ಮ ಸರ್ಕಾರ ಒದಗಿಸಿದ್ದು, ಇಂದಿಗೆ ಈ ‘ಶಕ್ತಿ’ ಯೋಜನೆಯ ಫಲಾನುಭವಿಗಳ ಸಂಖ್ಯೆ: 500 ಕೋಟಿ ಗಡಿಯನ್ನು ದಾಟಿದೆ.

ಹೀಗಾಗಿ ಇದೊಂದು ಸಂಭ್ರಮದ ಸಂಗತಿ. ಪ್ರಪಂಚಾದ್ಯಂತ ಹಾಗೂ ನಮ್ಮ ದೇಶದಾದ್ಯಂತ ಒಂದು ಸರ್ಕಾರ ಹೆಣ್ಣುಮಕ್ಕಳಿಗೆ ಉಚಿತವಾಗಿ ಪ್ರಯಾಣಿಸುವ ಸೌಲಭ್ಯವನ್ನು ಕಲ್ಪಿಸಿರುವಂತಹ ಏಕೈಕ ಸರ್ಕಾರ ನಮ್ಮ ಕರ್ನಾಟಕ ಸರ್ಕಾರ ಎಂದು ಹೇಳಿಸಿದ್ದಾರೆ.

ಶಕ್ತಿ ಯೋಜನೆಯಡಿಯಲ್ಲಿ ನಮ್ಮ ನಾಡಿನ ಹೆಣ್ಣು ಮಕ್ಕಳು ರಾಜ್ಯದ ಎಲ್ಲ ಸರ್ಕಾರಿ ಸ್ವಾಮ್ಯದ ಬಸ್ಸುಗಳಲ್ಲಿ ಉಚಿತವಾಗಿ 500 ಕೋಟಿ ಪ್ರಯಾಣಿಸಿರುವ ಹೆಗ್ಗಳಿಕೆಯನ್ನು ಸರಳ ಹಾಗೂ ಸಂಭ್ರಮದಿಂದ ಆಚರಿಸುವುದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಹಾಗೂ ತಾಲೂಕು ಸದಸ್ಯರ ಹಕ್ಕುಭಾದ್ಯವಾಗಿದೆ.

ಆದ್ದರಿಂದ, ಶಕ್ತಿ ಯೋಜನೆಯಡಿಯಲ್ಲಿ ಫಲಾನುಭವಿಗಳು 500 ಕೋಟಿ ಪ್ರಯಾಣಿಸಿರುವುದನ್ನು ಸಾಂಕೇತಿಕವಾಗಿ ಸೋಮವಾರ ರಾಜ್ಯದ ಎಲ್ಲ ಜಿಲ್ಲೆಗಳ ಹಾಗೂ ತಾಲೂಕುಗಳ ಬಸ್ ಡಿಪೋ/ ಬಸ್ ನಿಲ್ದಾಣ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಆಯಾ ಸಮಿತಿಯ ಸದಸ್ಯರು ಒಂದು ಬಸ್ಸಿಗೆ ಪೂಜೆ ಸಲ್ಲಿಸಿ, ಪ್ರಯಾಣಿಕರಿಗೆ ಸಿಹಿ ಹಂಚುವುದರೊಂದಿಗೆ ಆಚರಿಸಕಿದ್ದಾರೆ ಎಂದು ತಿಳಿಸಿದ್ದಾರೆ.

ಇನ್ನು ಈ ಆಚರಣೆಯನ್ನು ಪ್ರಾಧಿಕಾರದ ನಾಲ್ಕು ನಿಗಮಗಳ ಉಪಾಧ್ಯಕ್ಷರು ತಮ್ಮ ವಿಭಾಗದ ಮೇಲ್ವಿಚಾರಣೆಯನ್ನು ವಹಿಸಿ, ಆಯಾ ಜಿಲ್ಲಾ ಅಧ್ಯಕ್ಷರು ತಮ್ಮ ಜಿಲ್ಲೆ ಹಾಗೂ ಎಲ್ಲ ತಾಲೂಕು ಒಳಗೊಂಡಂತೆ ಬಸ್ ಡಿಪೋ/ ಬಸ್ ನಿಲ್ದಾಣ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಬಸ್‌ಗೆ ಪೂಜೆಯನ್ನು ಸಲ್ಲಿಸಿ ಪ್ರಯಾಣಿಕರಿಗೆ ಸಿಹಿ ಹಂಚುವ ಕಾರ್ಯಕ್ರಮವನ್ನು ಜು.14 ರಂದು ನೆರವೇರಿಸಬೇಕು ಎಂದು ಸೂಚಿಸಿದ್ದಾರೆ.

Megha
the authorMegha

Leave a Reply

error: Content is protected !!