Please assign a menu to the primary menu location under menu

NEWSದೇಶ-ವಿದೇಶನಮ್ಮಜಿಲ್ಲೆ

ರಾಜ್ಯದಲ್ಲಿ ಇಂದು 22 ಕೋವಿಡ್‌-19 ಹೊಸ ಸೋಂಕು ದೃಢ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಇಂದು ರಾಜ್ಯದಲ್ಲಿ ಹೊಸದಾಗಿ 22 ಕೊರೊನಾ ಪಾಸಿಟಿವ್‌ ಪ್ರಕರಣಗಳು ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 557ಕ್ಕೆ ಏರಿಕೆಯಾಗಿದೆ.  ಇವುಗಳಲ್ಲಿ 21 ಜನರು ಮೃತಪಟ್ಟಿದ್ದು, 223 ಜನರು ರೋಗದಿಂದ ಮುಕ್ತಗೊಂಡು ಮನೆಗೆ ಮರಳಿದ್ದಾರೆ.

ಬೆಳಗಾವಿಯಲ್ಲಿ ಅತಿ ಹೆಚ್ಚು ಅಂದರೆ 14 ಪ್ರಕರಣಗಳು ಪತ್ತೆಯಾಗಿದ್ದು, ವಿಜಯಪುರದಲ್ಲಿ ಎರಡು, ಬೆಂಗಳೂರಿನಲ್ಲಿ ಮೂರು, ದಾವಣಗೆರೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು, ತುಮಕೂರಿನಲ್ಲಿ ಒಂದು  ಹೊಸ ಕೊರೊನಾ ಸೋಂಕಿತ ಪ್ರಕರಣ ಪತ್ತೆಯಾಗಿದೆ.

ನಿನ್ನೆ ವರೆಗೂ ಗ್ರೀನ್‌ ಜೋನ್‌ಆಗಿದ್ದ ದಾವಣಗೆರೆಯಲ್ಲಿ ಇಂದಿನವರೆಗೆ ಎರಡು  ಹೊಸ ಕೊರೊನಾ ಪ್ರಕರಣ ದೃಢಪಟ್ಟಿರುವುದರಿಂದ ಇಲ್ಲಿನ ನಿವಾಸಿಗಳಲ್ಲಿ ಆತಂಕ ಮನೆ ಮಾಡಿದೆ.

ರಾಜ್ಯದಲ್ಲಿ ಒಟ್ಟಾರೆ 557 ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು ಈ ಪೈಕಿ 223 ಮಂದಿ ಗುಣಮುಖರಾಗಿದ್ದಾರೆ. ಇನ್ನು 312  ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ಇದುವರೆಗೂ 21 ಮಂದಿ ಮೃತಪಟ್ಟಿದ್ದಾರೆ. ಆದರೆ ಬೆಳಗಾವಿಯಲ್ಲಿ 14 ಹೊಸ ಪ್ರಕರಣಗಳು ಪತ್ತೆಯಾಗುವ ಮೂಲಕ  ತನ್ನ ರುದ್ರನರ್ತನವನ್ನು ಕೊರೊನಾ ವೈರಸ್‌ ಮುಂದುವರಿಸಿದೆ. ಈ ನಡುವೆ ಮೈಸೂರಿನಲ್ಲಿ ಯಾವುದೇ ಪಾಸಿಟಿವ್‌ ಪ್ರಕರಣ ವರದಿಯಾಗಿಲ್ಲ.

ದೇಶದಲ್ಲಿ 33,062 ಕ್ಕೇರಿದ ಸೋಂಕಿತರ ಸಂಖ್ಯೆ
ಇನ್ನು ದೇಶದಲ್ಲಿ ಈವರೆಗೆ 33,062 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. 1,079 ಮಂದಿ ಮೃತಪಟ್ಟಿದ್ದಾರೆ. 8,437 ಮಂದಿ ರೋಗಮುಕ್ತರಾಗಿದ್ದಾರೆ. ಪ್ರಪಂಚಾದ್ಯಂತ ಈವರೆಗೆ 32,22,478  ಜನರಲ್ಲಿ ಸೋಂಕು ಇರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಖಚಿತಪಡಿಸಿದೆ. ಇನ್ನು 2,28,470 ಜನರು ಮೃತಪಟ್ಟಿದ್ದಾರೆ. 10,05,606 ಮಂದಿ ರೋಗದಿಂದ ಗುಣಮುಖರಾಗಿದ್ದಾರೆ.

Leave a Reply

error: Content is protected !!
LATEST
ಪತ್ನಿ ಅಕ್ರಮ ಸಂಬಂಧದಿಂದ ಪತಿ ಆತ್ಮಹತ್ಯೆ ಪ್ರಕರಣ: ಹೆಂಡತಿಗೆ ಶಿಕ್ಷಿಸಲಾಗದು - ಹೈ ಕೋರ್ಟ್ ತೀರ್ಪು ತುಮಕೂರು: ಗೋವಾಗೆ ಹೋಗುತ್ತಿದ್ದ ಬಸ್ ಪಲ್ಟಿ: ಮೂವರು ಮಹಿಳೆಯರು ಮೃತ ಮೈಸೂರು-ಮಂಡ್ಯ: ಮಳೆ ಹೆಚ್ಚಾಗಿರುವ ಹಿನ್ನೆಲೆ ಶಾಲೆಗಳಿಗೆ ರಜೆ- ಡಿಸಿಗಳ ಆದೇಶ ದೆಹಲಿ: ರೈತರು ಉಪವಾಸ ಸತ್ಯಾಗ್ರಹ ಬೆಂಬಲಿಸಿ ಡಿ.6ರಿಂದ ಬೆಂಗಳೂರಿನಲ್ಲೂ ಸತ್ಯಾಗ್ರಹ: ಕುರುಬೂರು ಶಾಂತಕುಮಾರ್ ರಾಜ್ಯದಲ್ಲಿ ವರುಣನ ಅಬ್ಬರ: ಹಲವು ಜಿಲ್ಲೆಗಳ ಶಾಲಾ- ಕಾಲೇಜುಗಳಿಗೆ ನಾಳೆ ರಜೆ ಕನ್ನಡ ಕಿರುತೆರೆಯ ಬ್ರಹ್ಮಗಂಟು ಸೀರಿಯಲ್ ಖ್ಯಾತಿಯ ಶೋಭಿತಾ ಶಿವಣ್ಣ ಆತ್ಮಹತ್ಯೆ KSRTC: 1308 ನೌಕರರ ವರ್ಗಾವಣೆ- ಆಕ್ಷೇಪಣೆ ಸಲ್ಲಿಸಲು ಡಿ.4ರವರೆಗೂ ಅವಕಾಶ ಸಾರಿಗೆ ನೌಕರರ ಬೇಡಿಕೆ ಅರ್ಥ ಮಾಡಿಕೊಳ್ಳಿ: ಜಂಟಿ ಕ್ರಿಯಾ ಸಮಿತಿಗೆ ನೌಕರನ ಒತ್ತಾಯ ಬಿಬಿಎಂಪಿ: 13 ಕೆರೆಗಳ ಒತ್ತುವರಿ ತೆರವು- ₹242.5 ಕೋಟಿ ಮೌಲ್ಯದ 7 ಎಕರೆ ಪ್ರದೇಶ ವಶ -ಪ್ರೀತಿ ಗೆಹ್ಲೋಟ್ ಫೆಂಗಲ್ ಚಂಡಮಾರುತದ ಪರಿಣಾಮ ಎಲ್ಲಾ ಅಧಿಕಾರಿಗಳು ಮುಂಜಾಗ್ರತಾ ಕ್ರಮ ವಹಿಸಲು ಸೂಚನೆ: ತುಷಾರ್ ಗಿರಿನಾಥ್