ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳ ವೈದ್ಯರು ಮತ್ತು ದಾದಿಯರಿಗೆ ಶೇ. 55 ರಷ್ಟು ವೇತನ ಪರಿಷ್ಕರಣೆಗೆ ರಾಷ್ಟ್ರೀಯ ಆರೋಗ್ಯ ಮಿಷನ್ (NHM) ಅಡಿಯಲ್ಲಿ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ರಾಷ್ಟ್ರೀಯ ಆರೋಗ್ಯ ಮಿಷನ್ (NHM) ಯೋಜನೆಯಡಿ ಕೆಲಸ ಮಾಡುತ್ತಿರುವ ವೈದ್ಯಕೀಯ ಸಿಬ್ಬಂದಿ ವೇತನವನ್ನು ಪರಿಷ್ಕರಿಸಲಾಗಿದೆ. ಈ ವೇತನ ಹೆಚ್ಚಳ ಹೊಸದಾಗಿ ನೇಮಕವಾಗುವ ಸಿಬ್ಬಂದಿಗೆ ಮಾತ್ರ ಅನ್ವಯವಾಗಲಿದೆ ಎಂದು ತಿಳಿಸಿದರು.
ಇನ್ನು ಈಗಿರುವ ಸಿಬ್ಬಂದಿಗೆ ಇದೇ ವೇತನ ಮುಂದುವರಿಯಲಿದೆ. ಅವರು ಕೂಡ ಹೊಸ ವೇತನಕ್ಕೆ ಅರ್ಹರಾಗಬೇಕಾದರೆ, ಈಗಿರುವ ಸ್ಥಾನಕ್ಕೆ ರಾಜೀನಾಮೆ ನೀಡಿ, ಪುನಃ ಹೊಸದಾಗಿ ಅರ್ಜಿ ಸಲ್ಲಿಸಬೇಕು ಎಂದು ಸ್ಪಷ್ಟಪಡಿಸಿದ್ದಾರೆ. ಆದರೆ, ಹೊಸದಾಗಿ ಅರ್ಜಿ ಸಲ್ಲಿಕೆ ಮಾಡಿದಾಗ ಈಗಾಗಲೇ ಕೆಲಸ ಮಾಡಿದ ವೈದ್ಯರಿಗೆ ಹೊಸ ಹುದ್ದೆಗಳನ್ನು ನೀಡಲಾಗುತ್ತದೆ ಎಂಬ ಭರವಸೆಯನ್ನು ನೀಡಲಾಗುವುದಿಲ್ಲ ಎಂದೂ ಸ್ಪಷ್ಟಪಡಿಸಿದರು.
ರಾಜ್ಯದಲ್ಲಿ ಈಗಾಗಲೇ ಒಟ್ಟು 9,041 ಹುದ್ದೆಗಳಿವೆ. ಇದರಲ್ಲಿ 1,398 ಎಂಬಿಬಿಎಸ್ ವೈದ್ಯರು, 899 ತಜ್ಞ ವೈದ್ಯರು ಹಾಗೂ 936 ಸ್ಟಾಫ್ ನರ್ಸ್‌ಗಳ ಹುದ್ದೆಗಳಿವೆ. ಇದರಲ್ಲಿ ಪ್ರಸ್ತುತವಾಗಿ 579 ಎಂಬಿಬಿಎಸ್ ವೈದ್ಯರು, 305 ತಜ್ಞ ವೈದ್ಯರು ಹಾಗೂ 936 ಸ್ಟಾಫ್ ನರ್ಸ್ ಹುದ್ದೆಗಳು ಖಾಲಿ ಇವೆ ಎಂದು ಮಾಹಿತಿ ನೀಡಿದರು.
ರಾಜ್ಯದಲ್ಲಿ ವೈದ್ಯಕೀಯ ಸಿಬ್ಬಂದಿಗೆ ವೇತನ ಕಡಿಮೆ ಇರುವ ಕಾರಣದಿಂದ, ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದರೂ ವೈದ್ಯರು ಹಾಗೂ ನರ್ಸ್‌ಗಳು ಸರ್ಕಾರಿ ಆಸ್ಪತ್ರೆಗೆ ಬಂದು ಕೆಲಸ ಮಾಡುವುದಕ್ಕೆ ಆಸಕ್ತಿ ತೋರಿಸುತ್ತಿಲ್ಲ. ಈ ಕಾರಣದಿಂದಲೇ ಕೇಂದ್ರ ಸರ್ಕಾರದ ಅನುದಾನದ ಒಳಗೆ ವೇತನ ಪರಿಷ್ಕರಣೆ ಮಾಡಲು ಅವಕಾಶ ನೀಡುವಂತೆ ಮನವಿ ಮಾಡಿದ್ದೇವೆ. ಕಳೆದ ಎಂಟು ತಿಂಗಳಿಂದ ಈ ಕುರಿತು ಮನವಿ ಮಾಡುತ್ತಾ ಬಂದಿದ್ದು, ಇದೀಗ ಕೇಂದ್ರದಿಂದ ಒಪ್ಪಿಗೆ ಲಭಿಸಿದೆ ಎಂದರು.
ಈ ಹಿಂದೆ 46,895 ರಿಂದ 50,000 ರೂ.ಗಳವರೆಗೆ ವೇತನ ಪಡೆಯುತ್ತಿದ್ದ MBBS ವೈದ್ಯರು ಈಗ ತಿಂಗಳಿಗೆ 60,000 ರೂ.ಗಳನ್ನು ಪಡೆಯುತ್ತಾರೆ. ತಜ್ಞ ವೈದ್ಯರು 1,40,000 ರೂ.ಗಳನ್ನು ಪಡೆಯಲಿದ್ದಾರೆ, ಇದು ಹಿಂದಿನ 1,10,000 ರೂ.ಗಳಿಂದ 1,30,000 ರೂ.ಗಳಿಗೆ ಏರಿಕೆಯಾಗಿದೆ. 14,186 ರೂ.ಗಳಿಂದ 18,774 ರೂ.ಗಳವರೆಗೆ ಪಡೆಯುತ್ತಿದ್ದ ಸ್ಟಾಫ್ ನರ್ಸ್‌ಗಳಿಗೆ ಈಗ 22,000 ರೂ.ಗಳನ್ನು ಪಾವತಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ. ಅನುಭವ ಹೊಂದಿರುವ ಅಭ್ಯರ್ಥಿಗಳು ನೇಮಕಾತಿಯ ಸಮಯದಲ್ಲಿ ಪ್ರತಿ ವರ್ಷದ ಅನುಭವಕ್ಕೆ ಹೆಚ್ಚುವರಿಯಾಗಿ 2.5% ವೇತನ ಹೆಚ್ಚಳವನ್ನು ಪಡೆಯುತ್ತಾರೆ.

ಪ್ರಸೂತಿ ಮತ್ತು ಸ್ತ್ರೀರೋಗ ಶಾಸ್ತ್ರ, ಮಕ್ಕಳ ವೈದ್ಯಕೀಯ, ಅರಿವಳಿಕೆ, ಜನರಲ್ ಮೆಡಿಸಿನ್, ಮೂಳೆಚಿಕಿತ್ಸೆ, ಶಸ್ತ್ರಚಿಕಿತ್ಸೆ ಮತ್ತು ನೇತ್ರವಿಜ್ಞಾನದಂತಹ ವಿಭಾಗಗಳಲ್ಲಿನ ಪ್ರಮುಖ ಕ್ಲಿನಿಕಲ್ ತಜ್ಞರಿಗೆ ನಿಗದಿತ ಆರಂಭಿಕ ವೇತನವನ್ನು 1,40,000 ರೂ.ಗಳಿಗೆ ನಿಗದಿಪಡಿಸಲಾಗಿದೆ ಎಂದು ಗುಂಡೂ ರಾವ್ ಮಾಹಿತಿ ನೀಡಿದ್ದಾರೆ.
ಈ ಪರಿಷ್ಕರಣೆಯು NHM ಹುದ್ದೆಗಳಿಗೆ ಹೆಚ್ಚಿನ ವೈದ್ಯರು ಮತ್ತು ನರ್ಸ್‌ಗಳನ್ನು ಆಕರ್ಷಿಸಲು ಸಹಾಯ ಮಾಡುತ್ತದೆ, ಇದು ರಾಜ್ಯಾದ್ಯಂತ ಆರೋಗ್ಯ ಸೇವೆಗಳನ್ನು ಬಲಪಡಿಸುತ್ತದೆ ಎಂದು ಗುಂಡೂ ರಾವ್ ಹೇಳಿದರು.
“SNCUಗಳು, ICUಗಳು ಮತ್ತು ಇತರ ನಿರ್ಣಾಯಕ ಆರೈಕೆ ಘಟಕಗಳಲ್ಲಿ ಉತ್ತಮ ಸಿಬ್ಬಂದಿ ನೇಮಕವು ತಾಯಿ ಮತ್ತು ಮಕ್ಕಳ ಆರೋಗ್ಯ ಸೇವೆಗಳು, ಶಸ್ತ್ರಚಿಕಿತ್ಸೆಗಳು ಮತ್ತು ಸರ್ಕಾರಿ ಸೌಲಭ್ಯಗಳಲ್ಲಿ ಒಟ್ಟಾರೆ ರೋಗಿಗಳ ಆರೈಕೆಯನ್ನು ಸುಧಾರಿಸುವ ನಿರೀಕ್ಷೆಯಿದೆ ಎಂದು ಹೇಳಿದರು.
ರಾಜ್ಯದ ಆರೋಗ್ಯ ಇಲಾಖೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ವೈದ್ಯರು ಹಾಗೂ ಇತರೆ ವೈದ್ಯಕೀಯ ಸಹಾಯಕ ಸಿಬ್ಬಂದಿ ಸೇರಿ 28,250ಕ್ಕೂ ಅಧಿಕ ಸಿಬ್ಬಂದಿ ಕಾರ್ಯು ನಿರ್ವಹಿಸುತ್ತಿದ್ದಾರೆ. ಆದರೆ, ಈ ಎಲ್ಲ ಸಿಬ್ಬಂದಿಗೆ ಕಳೆದ 3 ತಿಂಗಳಿಂದ ವೇತನವನ್ನೇ ಪಾವತಿ ಮಾಡಿಲ್ಲ. ಇದರಿಂದ ಎಲ್ಲ ವೈದ್ಯಕೀಯ ಸಿಬ್ಬಂದಿ ವೇತನ ಸಿಗದೇ ಕುಟುಂಬ ನಿರ್ವಹಣೆಗೆ ಸಮಸ್ಯೆ ಎದುರಿಸುತ್ತಿದ್ದಾರೆ. ಕೂಡಲೇ ಈ ಸಮಸ್ಯೆ ಬಗೆ ಹರಿಸಲಾಗುವುದು ಎದು ಭರವಸೆ ನೀಡಿದರು.
Related


You Might Also Like
KSRTC ಹಾಸನ: ಸತ್ಯ ಮರೆಮಾಚಿದ ತನಿಖಾ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಮುಂದಾದ ಡಿಸಿ
ಹಾಸನ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಹಾಸನ ವಿಭಾಗದ ತನಿಖಾ ಸಿಬ್ಬಂದಿ ಸತ್ಯ ಮರೆಮಾಚಲು ಬಾಡಿ ಕ್ಯಾಮರಾ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಕೆಲವೊಂದು ಸಮಯದಲ್ಲಿ ಹ್ಯಾಂಗ್...
KSRTC ಹಾಸನ: ತನಿಖಾಧಿಕಾರಿಗಳ ಬಾಡಿ ಕ್ಯಾಮೆರಾದ ವಿಡಿಯೋ ರೆಕಾರ್ಡಿಂಗ್ ಕೊಡಲು ವಿಫಲ- ಆರೋಪ ಪತ್ರ ಜಾರಿ ಮಾಡಿದ ಡಿಸಿ
ಹಾಸನ: ಸಾರಿಗೆ ಸಂಸ್ಥೆಯ ಮಾರ್ಗ ತನಿಖಾಧಿಕಾರಿಗಳು ಬಾಡಿ ಕ್ಯಾಮೆರಾವನ್ನು ಹಾಕಿಕೊಂಡು ತನಿಖೆ ಮಾಡದ ಪರಿಣಾಮ ಮಾಹಿತಿ ಆಯೋಗದಲ್ಲಿ ಪ್ರಕರಣ ದಾಖಲು ಮಾಡಿದ ನೌಕರನಿಗೆ ವಿಡಿಯೋ ರೆಕಾರ್ಡಿಂಗ್ ಕೊಡಲು...
ಮೆಜೆಸ್ಟಿಕ್ BMTC: ಟೀ ಚೆನ್ನಾಗಿರುವುದಿಲ್ಲ ಬೇರೆ ಅಂಗಡಿಗೆ ಹೋಗೋಣ ಎಂದಿದ್ದಕ್ಕೆ ಚಾಲಕನ ಮೇಲೆ ಹಲ್ಲೆ- ಆರೋಪಿ ಬಂಧನ
ಬೆಂಗಳೂರು: ಈ ಅಂಗಡಿಯಲ್ಲಿ ಬೇಡ ಇಲ್ಲಿ ಟೀ ಚೆನ್ನಾಗಿರುವುದಿಲ್ಲ ಎಂದು ಹೇಳಿ ಅಲ್ಲಿಯೇ ಪಕ್ಕದಲ್ಲಿದ್ದ ಟೀ ಅಂಗಡಿಗೆ ಹೋಗೋಣ ಎಂದು ಸಹೋದ್ಯೋಗಿಗೆ ಹೇಳಿದ್ದಕ್ಕೆ ಕುಪಿತನಾದ ಟೀ ಮಾರುವ...
KRSTC: ಅನ್ಯಮಾರ್ಗದಲ್ಲಿ ಹೋಗಲು ಮಹಿಳಾ ಕಂಡಕ್ಟರನ್ನು ರಾತ್ರಿ ಅರ್ಧದಲ್ಲೇ ಇಳಿಸಿಹೋದ ಸಹೋದ್ಯೋಗಿಗಳು…!
ಸಾರಿಗೆ ಚಾಲನಾ ಸಿಬ್ಬಂದಿಗಳಲ್ಲಿ ಒಬ್ಬರಿಗೊಬ್ಬರು ಆಗುವುದಿಲ್ಲ ಎಂಬುದಕ್ಕೆ ಇದು ಮತ್ತೊಂದು ನಿದರ್ಶನ ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಬಹುತೇಕ ಎಲ್ಲ ಚಾಲನಾ ಸಿಬ್ಬಂದಿಗಳಲ್ಲಿ...
ಸೆ.22ರಿಂದ ಅ.7ರವರೆಗೆ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದಲ್ಲಿ ಇದೇ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರವರೆಗೆ ಹೊಸದಾಗಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ಎಲ್ಲರೂ...
ಬೋನಿನಲ್ಲಿದ್ದ ಕರುವ ಬೇಟೆಯಾಡಲು ಬಂದು ತಿನ್ನದೆ ಅಚ್ಚರಿ ಮೂಡಿಸಿದ ಚಿರತೆ !
ಮೈಸೂರು: ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನಲ್ಲಿ ಅಚ್ಚರಿಯೊಂದು ನಡೆದಿದೆ. ಬೋನಿನಲ್ಲಿ ಹಸುವಿನ ಕರು ಇದ್ದರೂ ಅದನ್ನು ತಿನ್ನದೆ ಚಿರತೆ ಹಾಗೆಯೇ ಅದರ ಜತೆಗೆ ಇದ್ದಿದ್ದು ಭಾರಿ ಅಚ್ಚರಿ ಮೂಡಿಸಿದೆ....
ಕಾಡುಪ್ರಾಣಿಗಳ ದಾಳಿಯಿಂದ ಸತ್ತರೆ ಲಕ್ಷ ಲಕ್ಷ ಪರಿಹಾರ ಸಿಗುತ್ತದೆ ಎಂಬ ಆಸೆಗೆ ಬಿದ್ದು ಪತಿಯನ್ನೇ ಕೊಂದು ಕಥೆ ಕಟ್ಟಿದ ಐನಾತಿ ಪತ್ನಿ
ಮೈಸೂರು: ಕಾಡು ಪ್ರಾಣಿಗಳಿಂದ ಜೀವ ಕಳೆದುಕೊಂಡವರ ಕುಟುಂಬಕ್ಕೆ ಸರ್ಕಾರದಿಂದ ಸಿಗುವ ಪರಿಹಾರ ಹಣದ ಆಸೆಗೆ ಪತಿಯನ್ನು ತಾನೇ ಕೊಂದು, ಹುಲಿ ಕೊಂದಿದೆ ಅಂತ ನಂಬಿಸಲು ಯತ್ನಿಸಿದ ಪತ್ನಿ...
ಇಂದು 15ನೇ ಉಪರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸಿ.ಪಿ.ರಾಧಾಕೃಷ್ಣನ್
ನ್ಯೂಡೆಲ್ಲಿ: ದೇಶದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ.ರಾಧಾಕೃಷ್ಣನ್ ಅವರು ಇಂದು (ಶುಕ್ರವಾರ ಸೆ.12) ಗಣ್ಯರ ಸಮ್ಮುಖದಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ರಾಜನಾಥ್ ಸಿಂಗ್,...
ರಾಷ್ಟ್ರಕವಿ ಕುವೆಂಪುರಿಗೆ ಭಾರತ ರತ್ನ ಕೊಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಸಂಪುಟ ನಿರ್ಧಾರ: ಸಚಿವ HKP
ಬೆಂಗಳೂರು: ವಿಶ್ವ ಮಾನವ ಸಂದೇಶ ಸಾರಿದ ಕುವೆಂಪು ಅವರ ಬರಹಗಳು ಮತ್ತು ಚಿಂತನೆಗಳನ್ನು ರಾಷ್ಟ್ರವ್ಯಾಪಿಯಾಗಿಸಲು, ಆ ಮೂಲಕ ಸಮಾಜದಲ್ಲಿ ಜಾತ್ಯತೀತ ಮತ್ತು ಸೌಹಾರ್ದ ಮನೋವೃತ್ತಿಯನ್ನು ಬೆಳೆಸಲು ಕುವೆಂಪು...