ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳ ವೈದ್ಯರು ಮತ್ತು ದಾದಿಯರಿಗೆ ಶೇ. 55 ರಷ್ಟು ವೇತನ ಪರಿಷ್ಕರಣೆಗೆ ರಾಷ್ಟ್ರೀಯ ಆರೋಗ್ಯ ಮಿಷನ್ (NHM) ಅಡಿಯಲ್ಲಿ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ರಾಷ್ಟ್ರೀಯ ಆರೋಗ್ಯ ಮಿಷನ್ (NHM) ಯೋಜನೆಯಡಿ ಕೆಲಸ ಮಾಡುತ್ತಿರುವ ವೈದ್ಯಕೀಯ ಸಿಬ್ಬಂದಿ ವೇತನವನ್ನು ಪರಿಷ್ಕರಿಸಲಾಗಿದೆ. ಈ ವೇತನ ಹೆಚ್ಚಳ ಹೊಸದಾಗಿ ನೇಮಕವಾಗುವ ಸಿಬ್ಬಂದಿಗೆ ಮಾತ್ರ ಅನ್ವಯವಾಗಲಿದೆ ಎಂದು ತಿಳಿಸಿದರು.
ಇನ್ನು ಈಗಿರುವ ಸಿಬ್ಬಂದಿಗೆ ಇದೇ ವೇತನ ಮುಂದುವರಿಯಲಿದೆ. ಅವರು ಕೂಡ ಹೊಸ ವೇತನಕ್ಕೆ ಅರ್ಹರಾಗಬೇಕಾದರೆ, ಈಗಿರುವ ಸ್ಥಾನಕ್ಕೆ ರಾಜೀನಾಮೆ ನೀಡಿ, ಪುನಃ ಹೊಸದಾಗಿ ಅರ್ಜಿ ಸಲ್ಲಿಸಬೇಕು ಎಂದು ಸ್ಪಷ್ಟಪಡಿಸಿದ್ದಾರೆ. ಆದರೆ, ಹೊಸದಾಗಿ ಅರ್ಜಿ ಸಲ್ಲಿಕೆ ಮಾಡಿದಾಗ ಈಗಾಗಲೇ ಕೆಲಸ ಮಾಡಿದ ವೈದ್ಯರಿಗೆ ಹೊಸ ಹುದ್ದೆಗಳನ್ನು ನೀಡಲಾಗುತ್ತದೆ ಎಂಬ ಭರವಸೆಯನ್ನು ನೀಡಲಾಗುವುದಿಲ್ಲ ಎಂದೂ ಸ್ಪಷ್ಟಪಡಿಸಿದರು.
ರಾಜ್ಯದಲ್ಲಿ ಈಗಾಗಲೇ ಒಟ್ಟು 9,041 ಹುದ್ದೆಗಳಿವೆ. ಇದರಲ್ಲಿ 1,398 ಎಂಬಿಬಿಎಸ್ ವೈದ್ಯರು, 899 ತಜ್ಞ ವೈದ್ಯರು ಹಾಗೂ 936 ಸ್ಟಾಫ್ ನರ್ಸ್‌ಗಳ ಹುದ್ದೆಗಳಿವೆ. ಇದರಲ್ಲಿ ಪ್ರಸ್ತುತವಾಗಿ 579 ಎಂಬಿಬಿಎಸ್ ವೈದ್ಯರು, 305 ತಜ್ಞ ವೈದ್ಯರು ಹಾಗೂ 936 ಸ್ಟಾಫ್ ನರ್ಸ್ ಹುದ್ದೆಗಳು ಖಾಲಿ ಇವೆ ಎಂದು ಮಾಹಿತಿ ನೀಡಿದರು.
ರಾಜ್ಯದಲ್ಲಿ ವೈದ್ಯಕೀಯ ಸಿಬ್ಬಂದಿಗೆ ವೇತನ ಕಡಿಮೆ ಇರುವ ಕಾರಣದಿಂದ, ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದರೂ ವೈದ್ಯರು ಹಾಗೂ ನರ್ಸ್‌ಗಳು ಸರ್ಕಾರಿ ಆಸ್ಪತ್ರೆಗೆ ಬಂದು ಕೆಲಸ ಮಾಡುವುದಕ್ಕೆ ಆಸಕ್ತಿ ತೋರಿಸುತ್ತಿಲ್ಲ. ಈ ಕಾರಣದಿಂದಲೇ ಕೇಂದ್ರ ಸರ್ಕಾರದ ಅನುದಾನದ ಒಳಗೆ ವೇತನ ಪರಿಷ್ಕರಣೆ ಮಾಡಲು ಅವಕಾಶ ನೀಡುವಂತೆ ಮನವಿ ಮಾಡಿದ್ದೇವೆ. ಕಳೆದ ಎಂಟು ತಿಂಗಳಿಂದ ಈ ಕುರಿತು ಮನವಿ ಮಾಡುತ್ತಾ ಬಂದಿದ್ದು, ಇದೀಗ ಕೇಂದ್ರದಿಂದ ಒಪ್ಪಿಗೆ ಲಭಿಸಿದೆ ಎಂದರು.
ಈ ಹಿಂದೆ 46,895 ರಿಂದ 50,000 ರೂ.ಗಳವರೆಗೆ ವೇತನ ಪಡೆಯುತ್ತಿದ್ದ MBBS ವೈದ್ಯರು ಈಗ ತಿಂಗಳಿಗೆ 60,000 ರೂ.ಗಳನ್ನು ಪಡೆಯುತ್ತಾರೆ. ತಜ್ಞ ವೈದ್ಯರು 1,40,000 ರೂ.ಗಳನ್ನು ಪಡೆಯಲಿದ್ದಾರೆ, ಇದು ಹಿಂದಿನ 1,10,000 ರೂ.ಗಳಿಂದ 1,30,000 ರೂ.ಗಳಿಗೆ ಏರಿಕೆಯಾಗಿದೆ. 14,186 ರೂ.ಗಳಿಂದ 18,774 ರೂ.ಗಳವರೆಗೆ ಪಡೆಯುತ್ತಿದ್ದ ಸ್ಟಾಫ್ ನರ್ಸ್‌ಗಳಿಗೆ ಈಗ 22,000 ರೂ.ಗಳನ್ನು ಪಾವತಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ. ಅನುಭವ ಹೊಂದಿರುವ ಅಭ್ಯರ್ಥಿಗಳು ನೇಮಕಾತಿಯ ಸಮಯದಲ್ಲಿ ಪ್ರತಿ ವರ್ಷದ ಅನುಭವಕ್ಕೆ ಹೆಚ್ಚುವರಿಯಾಗಿ 2.5% ವೇತನ ಹೆಚ್ಚಳವನ್ನು ಪಡೆಯುತ್ತಾರೆ.
ಪ್ರಸೂತಿ ಮತ್ತು ಸ್ತ್ರೀರೋಗ ಶಾಸ್ತ್ರ, ಮಕ್ಕಳ ವೈದ್ಯಕೀಯ, ಅರಿವಳಿಕೆ, ಜನರಲ್ ಮೆಡಿಸಿನ್, ಮೂಳೆಚಿಕಿತ್ಸೆ, ಶಸ್ತ್ರಚಿಕಿತ್ಸೆ ಮತ್ತು ನೇತ್ರವಿಜ್ಞಾನದಂತಹ ವಿಭಾಗಗಳಲ್ಲಿನ ಪ್ರಮುಖ ಕ್ಲಿನಿಕಲ್ ತಜ್ಞರಿಗೆ ನಿಗದಿತ ಆರಂಭಿಕ ವೇತನವನ್ನು 1,40,000 ರೂ.ಗಳಿಗೆ ನಿಗದಿಪಡಿಸಲಾಗಿದೆ ಎಂದು ಗುಂಡೂ ರಾವ್ ಮಾಹಿತಿ ನೀಡಿದ್ದಾರೆ.
ಈ ಪರಿಷ್ಕರಣೆಯು NHM ಹುದ್ದೆಗಳಿಗೆ ಹೆಚ್ಚಿನ ವೈದ್ಯರು ಮತ್ತು ನರ್ಸ್‌ಗಳನ್ನು ಆಕರ್ಷಿಸಲು ಸಹಾಯ ಮಾಡುತ್ತದೆ, ಇದು ರಾಜ್ಯಾದ್ಯಂತ ಆರೋಗ್ಯ ಸೇವೆಗಳನ್ನು ಬಲಪಡಿಸುತ್ತದೆ ಎಂದು ಗುಂಡೂ ರಾವ್ ಹೇಳಿದರು.
“SNCUಗಳು, ICUಗಳು ಮತ್ತು ಇತರ ನಿರ್ಣಾಯಕ ಆರೈಕೆ ಘಟಕಗಳಲ್ಲಿ ಉತ್ತಮ ಸಿಬ್ಬಂದಿ ನೇಮಕವು ತಾಯಿ ಮತ್ತು ಮಕ್ಕಳ ಆರೋಗ್ಯ ಸೇವೆಗಳು, ಶಸ್ತ್ರಚಿಕಿತ್ಸೆಗಳು ಮತ್ತು ಸರ್ಕಾರಿ ಸೌಲಭ್ಯಗಳಲ್ಲಿ ಒಟ್ಟಾರೆ ರೋಗಿಗಳ ಆರೈಕೆಯನ್ನು ಸುಧಾರಿಸುವ ನಿರೀಕ್ಷೆಯಿದೆ ಎಂದು ಹೇಳಿದರು.
ರಾಜ್ಯದ ಆರೋಗ್ಯ ಇಲಾಖೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ವೈದ್ಯರು ಹಾಗೂ ಇತರೆ ವೈದ್ಯಕೀಯ ಸಹಾಯಕ ಸಿಬ್ಬಂದಿ ಸೇರಿ 28,250ಕ್ಕೂ ಅಧಿಕ ಸಿಬ್ಬಂದಿ ಕಾರ್ಯು ನಿರ್ವಹಿಸುತ್ತಿದ್ದಾರೆ. ಆದರೆ, ಈ ಎಲ್ಲ ಸಿಬ್ಬಂದಿಗೆ ಕಳೆದ 3 ತಿಂಗಳಿಂದ ವೇತನವನ್ನೇ ಪಾವತಿ ಮಾಡಿಲ್ಲ. ಇದರಿಂದ ಎಲ್ಲ ವೈದ್ಯಕೀಯ ಸಿಬ್ಬಂದಿ ವೇತನ ಸಿಗದೇ ಕುಟುಂಬ ನಿರ್ವಹಣೆಗೆ ಸಮಸ್ಯೆ ಎದುರಿಸುತ್ತಿದ್ದಾರೆ. ಕೂಡಲೇ ಈ ಸಮಸ್ಯೆ ಬಗೆ ಹರಿಸಲಾಗುವುದು ಎದು ಭರವಸೆ ನೀಡಿದರು.
Related

You Might Also Like
KSRTC ಕೋಲಾರ: ನೌಕರರ ದುಡಿಮೆಗೆ ತಕ್ಕ ವೇತನಕೊಡದೆ ಕಾಡುತ್ತಿರುವ ಡಿಸಿ, ಡಿಟಿಒಗಳ ಅಮಾನತು ಮಾಡಿ- ಸಾರಿಗೆ ಸಚಿವರಿಗೆ ಸೈಕಲ್ ರೆಡ್ಡಿ ಪತ್ರ
ಕೋಲಾರ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕೋಲಾರ ವಿಭಾಗದ ನಿಯಂತ್ರಣಾಧಿಕಾರಿಗಳ ಅಧಿಕಾರ ದುರ್ಬಳಕೆ, ನೌಕರರಿಗೆ ಕಿರುಕುಳ ಮತ್ತು ಲಂಚಾವತಾರ ಹೆಚ್ಚಾಗಿದ್ದು ಇದಕ್ಕೆ ಕಡಿವಾಣ ಹಾಕಬೇಕು ಎಂದು...
KSRTC ದೊಡ್ಡಬಳ್ಳಾಪುರ ಘಟಕದ ಚಾಲಕ ಕಂ ನಿರ್ವಾಹಕನಿಗೆ ₹15 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟ ನೌಕರ ಸುರೇಶ್ ಬಾಬು, ಮತ್ತೊಬ್ಬ ಸಿಬ್ಬಂದಿ ಕಿರುಕುಳ: ಆರೋಪ
ದೊಡ್ಡಬಳ್ಳಾಪುರ: KSRTC ದೊಡ್ಡಬಳ್ಳಾಪುರ ಘಟಕದ ಚಾಲಕ ಕಂ ನಿರ್ವಾಹಕ ಹನುಮಂತರಾಯ ಜಳಕಿ ಎಂಬುವರಿಗೆ ಡೀಸೆಲ್ ವಿಭಾಗದ ನೌಕರ ಸುರೇಶ್ ಬಾಬು ಮತ್ತು ಇನ್ನೊಬ್ಬ ಸಿಬ್ಬಂದಿ ಲಂಚಕ್ಕೆ ಬೇಡಿಕೆ...
ನಿವೃತ್ತಿಗೆ ಮುನ್ನವೇ ನೌಕರರ ವಿಚಾರಣೆ ಮುಗಿದಿರಬೇಕು ಇಲ್ಲದಿದ್ದಲ್ಲಿ ಅಧಿಕಾರಿಗಳ ವಿರುದ್ಧವೇ ಶಿಸ್ತು ಕ್ರಮದ ಖಡಕ್ ಎಚ್ಚರಿಕೆ
ಬೆಂಗಳೂರು: ವೃತ್ತಿಯಲ್ಲಿರುವ ಸಂದರ್ಭದಲ್ಲಿ ದುರ್ನಡತೆ, ಕರ್ತವ್ಯಲೋಪದಂತಹ ಆರೋಪಗಳನ್ನು ಎದುರಿಸುವ ಸರ್ಕಾರಿ ನೌಕರರು, ಅವರು ನಿವೃತ್ತರಾಗುವ ಮುನ್ನವೇ ಅವರ ವಿರುದ್ಧದ ಪ್ರಕರಣಗಳನ್ನು ಇತ್ಯರ್ಥ ಮಾಡಬೇಕು. ಇಲ್ಲವಾದಲ್ಲಿ ಸಂಬಂಧಿಸಿದ ಅಧಿಕಾರಿಗಳ...
KSRTC ನೌಕರರ ವೇತನ ಹೆಚ್ಚಳಕ್ಕೆ ಜೆಡಿಎಸ್ ಮುಖಂಡ, ವಕೀಲ ಶಂಕರೇಗೌಡ ಆಗ್ರಹ
ಮೈಸೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಿಬ್ಬಂದಿಗಳಿಗೆ ವೇತನ ಹೆಚ್ಚಳ ಹಾಗೂ 38 ತಿಂಗಳ ಹಿಂಬಾಕಿ ಬಗ್ಗೆ ಕೂಡಲೇ ಆದೇಶ ಹೊರಡಿಸಬೇಕು ಎಂದು ಜೆಡಿಎಸ್ ಮುಖಂಡರು ಆಗ್ರಹಿಸಿದ್ದಾರೆ....
ಮೈಸೂರು: ಶೀಘ್ರದಲ್ಲೇ ಕಬಿನಿ ನೀರು ಹೊರ ವಲಯ ಬಡಾವಣೆಗಳಿಗೆ ಪೂರೈಕೆ: ಶಾಸಕ ಜಿಟಿಡಿ
ಮೈಸೂರು: ಶೀಘ್ರದಲ್ಲೇ ಕಬಿನಿ ನದಿಯಿಂದ ನಗರದ ಹೊರ ವಲಯ ಬಡಾವಣೆಗಳಿಗೆ ಕುಡಿಯುವ ನೀರು ಪೂರೈಸಲಾಗುವುದು ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ. ರೂಪಾ ನಗರದಲ್ಲಿ ಸ್ಥಳೀಯ...
ಜಮೀರ್ ರಾಜೀನಾಮೆಗೆ ಸಾಗರ ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ಒತ್ತಾಯ
ಶಿವಮೊಗ್ಗ: ವಸತಿ ಇಲಾಖೆಯಿಂದ ಮನೆಗಳನ್ನು ಪಡೆಯಲು ಲಂಚ ನೀಡಬೇಕು ಎಂಬ ಶಾಸಕ ಬಿ. ಆರ್. ಪಾಟೀಲ್ ಅವರ ಆರೋಪಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್ ಅಹಮದ್ ಖಾನ್ ರಾಜೀನಾಮೆ...
ಸರ್ಕಾರದ ಕಾರ್ಯವೈಖರಿ ಬಗ್ಗೆ ಕಾಂಗ್ರೆಸ್ ಶಾಸಕರಲ್ಲೇ ಅಸಮಾಧಾನ- 2-3 ದಿನದಲ್ಲಿ ನಾನು ರಾಜೀನಾಮೆ ನೀಡಿದರೂ ಅಚ್ಚರಿ ಇಲ್ಲ ಎಂದ NWKRTC ಅಧ್ಯಕ್ಷ ರಾಜುಕಾಗೆ
ಕಾಗವಾಡ: ರಾಜ್ಯದ ಕಾಂಗ್ರೆಸ್ ಸರ್ಕಾರದ ಆಡಳಿತ ಪಕ್ಷದಲ್ಲೇ ಒಬ್ಬರಾದ ಮೇಲೆ ಒಬ್ಬ ಶಾಸಕರು ಸರ್ಕಾರದ ವಿರುದ್ಧ ಹೇಳಿಕೆ ನೀಡುತ್ತಿದ್ದು, ಸರ್ಕಾರಕ್ಕೆ ತೀವ್ರ ಮುಜುಗರ ತಂದಿಡುತ್ತಿದ್ದಾರೆ. ಜತೆಗೆ ಸರ್ಕಾರ...
KSRTC ಮೈಸೂರು: ಸರಿಸಮಾನ ವೇತನ ಕೊಡಿ- ಎಂಡಿಗೆ ಮನವಿ ಮಾಡಿದ ಸಂಸ್ಥೆಯ ಅಧಿಕಾರಿಗಳು, ಒಕ್ಕೂಟದ ಪದಾಧಿಕಾರಿಗಳು
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ಪದಾಧಿಕಾರಿಗಳಿಂದ ಸನ್ಮಾನ ಮೈಸೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೂತನ ವ್ಯವಸ್ಥಾಪಕ ನಿರ್ದೇಶಕ ಅಕ್ರಮ್ಪಾಷ ಅವರನ್ನು ಕರ್ನಾಟಕ...
ಶ್ರೀ ಗಂಗ ಸಾಮ್ರಾಟ ಶ್ರೀ ಪುರುಷ’ ಪ್ರಶಸ್ತಿ ಸ್ವೀಕರಿಸಿದ ಮಾಜಿ ಪ್ರಧಾನಿ ದೇವೇಗೌಡ್ರು
ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರಿಗೆ ‘ಶ್ರೀ ಗಂಗ ಸಾಮ್ರಾಟ ಶ್ರೀ ಪುರುಷ’ ಪ್ರಶಸ್ತಿ ಪ್ರದಾನ ಮಾಡಿ ಸನ್ಮಾನಿಸಲಾಯಿತು. ನಗರದಲ್ಲಿ ಇಂದು ದೇವೇಗೌಡ ಅಭಿನಂದನಾ ಸಮಿತಿ...