NEWSನಮ್ಮಜಿಲ್ಲೆನಮ್ಮರಾಜ್ಯ

6 ತಿಂಗಳು ಸಾರಿಗೆ ನೌಕರರು ಮುಷ್ಕರ, ಪ್ರತಿಭಟನೆ, ಅಸಹಕಾರ ಚಳವಳಿ ಮಾಡುವಂತಿಲ್ಲ – ಸರ್ಕಾರದ ಆದೇಶ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕಳೆದ 2020ರ ಜನವರಿ 1ರಿಂದ ಹೆಚ್ಚಳವಾಗಿರುವ ಶೇ.15ರಷ್ಟು ವೇತನದ 38 ತಿಂಗಳುಗಳ ಹಿಂಬಾಕಿ ಕೊಡದಿರುವುದಕ್ಕೆ ಸಾರಿಗೆ ನೌಕರರು ಪ್ರತಿಭಟನೆ ನಡೆಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದರು. ಇದನ್ನು ಅರಿತ ಸರ್ಕಾರ ಇನ್ನು ಆರು ತಿಂಗಳುಗಳ ಕಾಲ ನೌಕರರು ಯಾವುದೇ ಮುಷ್ಕರ ನಡೆಸದಂತೆ ಆದೇಶ ಹೊರಡಿಸಿದೆ.

ಇನ್ನು 38 ತಿಂಗಳುಗಳ ವೇತನ ಹೆಚ್ಚಳದ  ಹಿಂಬಾಕಿ ನೀಡಿಲ್ಲ. ಜತೆಗೆ 2024ರ ಜನವರಿ 1ರಿಂದ ಮತ್ತೆ ವೇತನ ಪರಿಷ್ಕರಣೆ ಆಗಬೇಕಿದ್ದು, ಅದು ಕೂಡ 6 ತಿಂಗಳುಗಳು ಕಳೆಯುತ್ತ ಬಂದರೂ ಈವರೆಗೂ ಯಾವುದೇ ಮಾತುಕತೆಗೆ ಸರ್ಕಾರ ಮುಂದಾಗಿಲ್ಲ. ಹೀಗಾಗಿ ನೌಕರರು ಪ್ರತಿಭಟನೆ ಮಾಡುವುದಕ್ಕೆ ಅಣಿಯಾಗುತ್ತಿದ್ದರು.

ಆದರೆ, ಸಾರಿಗೆ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರು ಯಾವುದೇ ಕಾರಣಕ್ಕೂ ಮುಷ್ಕರ, ಪ್ರತಿಭಟನೆ, ಹರತಾಳ ಹಾಗೂ ಅಸಹಕಾರ ಚಳವಳಿಗಳನ್ನು ಮಾಡುವಂತಿಲ್ಲ ಎಂದು ಸರ್ಕಾರ ಆದೇಶ ಹೊರಡಿಸಿದ್ದು, ಅದಷ್ಟೇ ಅಲ್ಲದೇ ಮುಂದಿನ ಆರು ತಿಗಳುಗಳು ಯಾವುದೇ ಸಮಸ್ಯೆಗಳಿದ್ದರೂ ಸಹ ಪ್ರತಿಭಟನೆ ನಡೆಸುವಂತಿಲ್ಲ ಎಂದು ಸರ್ಕಾರ ಅಧಿಸೂಚನೆ ಹೊರಡಿಸಿದೆ. ಇದು ಸಾರಿಗೆ ನೌಕರರ ಆಕ್ರೋಶಕ್ಕೆ ಕಾರಣವಾಗಿದೆ.

ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳ ನೌಕರರು ಈಗಾಗಲೇ ಹತ್ತು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅದನ್ನು ಪರಿಹರಿಸುವ ನಿಟ್ಟಿನಲ್ಲಿ ಸರ್ಕಾರ ಯಾವುದೇ ಕ್ರಮವನ್ನು ಈವರೆಗೂ ತೆಗೆದುಕೊಂಡಿಲ್ಲ. ಇದೇ ಕಾರಣಕ್ಕೆ ಈ ಹಿಂದೆಯೂ ಸರ್ಕಾರದ ವಿರುದ್ಧ ನೌಕರರು ತಿರುಗಿಬಿದ್ದಿದ್ದರು.

ಅಂದಿನ ಬಿಜೆಪಿ ಸರ್ಕಾರದ ಆಡಳಿತದಲ್ಲಿ ಸತತವಾಗಿ 15ದಿನಗಳ ಕಾಲ ಮುಷ್ಕರ ನಡೆಸಿದ್ದರು. ಆಗ ಸಾರಿಗೆ ನೌಕರರೊಡನೆ ಮಾತುಕತೆ ನಡೆಸಿದ್ದ ವಿಪಕ್ಷ ಸ್ಥಾನದಲ್ಲಿದ್ದ ಇದೇ ಕಾಂಗ್ರೆಸ್‌ ಪಕ್ಷವು ತಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ನಿಮ್ಮ ಎಲ್ಲ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಭರವಸೆ ನೀಡಿತ್ತು.

ಆದರೆ, ಅಧಿಕಾರಕ್ಕೆ ಬಂದು ಒಂದೂವರೆ ವರ್ಷ ಕಳೆಯುತ್ತಿದ್ದರೂ ನೌಕರರ ಬಗ್ಗೆ ಯಾವುದೇ ಆಸಕ್ತಿ ತೋರಿಸುತ್ತಿಲ್ಲ. ಇನ್ನು ಇತ್ತ ಶಕ್ತಿ ಯೋಜನೆಯಿಂದಾಗಿ ಸಾರಿಗೆ ಸಿಬ್ಬಂದಿಗಳ ಮೇಲೆ ಒತ್ತಡ ಹೆಚ್ಚುತ್ತಿದೆ. ಜತೆಗೆ, ಶಕ್ತಿ ಯೋಜನೆಗೆ ಹಣ ಹೊಂದಿಸುವ ಸಲುವಾಗಿ ನೌಕರರ ಹಿತಾಸಕ್ತಿಯನ್ನೂ ಸಹ ಕಡೆಗಣಿಸುತ್ತಿದೆ ಈ ಸರ್ಕಾರ ಎಂಬ ಆರೋಪ ಕೇಳಿಬಂದಿದೆ.

ಈ ಎಲ್ಲದರ ನಡುವೆಯೂ ಈಗ ಮುಷ್ಕರ ಹಾಗೂ ಪ್ರತಿಭಟನೆ ನಡೆಸುವ ಅವಕಾಶಕ್ಕೂ ಸಹ ತಡೆಯೊಡ್ಡಿರುವುದು ನೌಕರರ ಆಕ್ರೋಶಕ್ಕೆ ಕಾರಣವಾಗಿದೆ. ಇನ್ನು ಈ ಬಗ್ಗೆ ಕೆಲ ಸಂಘಟನೆಗಳ ಮುಖಂಡರೆ ಸರ್ಕಾರಕ್ಕೆ ಈ ರೀತಿ ಮಾಡಿ ಎಂದು ಸಲಹೆ ನೀಡಿರುವುದರಿಂದ ಈ ರೀತಿ ಸರ್ಕಾರ ಆದೇಶ ಮಾಡಿದೆ ಎಂದು ಬಹುತೇಕ ಎಲ್ಲ ನೌಕರರು ಆರೋಪ ಮಾಡುತ್ತಿದ್ದಾರೆ.

ಇನ್ನು ಇದೇ ಜೂನ್‌ 15ರಂದು ನಾಲ್ಕೂ ನಿಗಮಗಳ ಎಂಡಿಗಳ ಜತೆ 38 ತಿಂಗಳ ವೇತನ ಹೆಚ್ಚಳದ ಹಿಂಬಾಕಿ ಕೊಡುವ ಸಂಬಂಧ ಸಭೆ ಕರೆದಿದ್ದ ಸರ್ಕಾರ ಅದನ್ನು ಮುಂದೂಡಿದೆ. ಇದರ ಹಿಂದೆಯೂ ನೌಕರರ ಕೆಲ ಸಂಘಟನೆಗಳು ಮೂಗು ತೂರಿಸಿ ಆಗುವ ಕೆಲಸಕ್ಕೂ ತಡೆಯಾಗಿ ನಿಂತಿವೆ ಎಂಬ ಆರೋಪವು ನೌಕರರಿಂದ ಕೇಳಿ ಬಂದಿದೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ