
ಬೆಳಗಾವಿ: ವಾಯವು ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲನಾ ಸಿಬ್ಬಂದಿಗಳ ಮೇಲೆ ವಿನಾಕಾರಣ ಹಲ್ಲೆ ಮಾಡಿರುವ ಬಗ್ಗೆ 63ಕ್ಕೂ ಹೆಚ್ಚು ಪ್ರಕರಣಗಳು ವಿವಿಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು ಈ ಪ್ರಕರಣಗಳ ಶೀಘ್ರ ಕ್ರಮಕ್ಕೆ ಮುಂದಾಗಬೇಕು ಎಂದು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಪ್ರಿಯಾಂಗಾ ಐಜಿಪಿ ಚೇತನ್ ಸಿಂಗ್ ರಾಥೋಡ್, ರವರಿಗೆ ಮನವಿಯನ್ನು ಸಲ್ಲಿಸಿದ್ದಾರೆ.
ಸೋಮವಾರ ಈ ಸಂಬಂಧ ಬೆಳಗಾವಿ ಉತ್ತರ ವಲಯ ಐಜಿಪಿ ಚೇತನ್ ಸಿಂಗ್ ರಾಥೋಡ್ ಅವರನ್ನು ಅವರ ಕಚೇರಿಯಲ್ಲಿ ಭೇಟಿ ಮಾಡಿದ NWKRTC ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಪ್ರಿಯಾಂಗಾ ಅವರು ನಮ್ಮ ನೌಕರರಿಗೆ ಕೆಲ ಕಿಡಿಗೇಡಿಗಳು ಡ್ಯೂಟಿ ಮಾಡುವ ವೇಳೆ ಹಲ್ಲೆ ಮಾಡಿದ್ದು ಈ ಬಗ್ಗೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಮನವಿ ಮಾಡಿದ್ದಾರೆ.
ನಮ್ಮ ಸಂಸ್ಥೆ ಚಾಲಕ ಮತ್ತು ನಿರ್ವಾಹಕರ ಮೇಲೆ ಕೆಲ ಪ್ರಯಾಣಿಕರು ಕ್ಷುಲ್ಲಕ ಕಾರಣಕ್ಕಾಗಿ ಹಲ್ಲೆ ಮಾಡಿದ್ದು, ಈ ಬಗ್ಗೆ 63 ಪ್ರಕರಣಗಳನ್ನು ದಾಖಲಿಸಲಾಗಿದೆ. ಹೀಗಾಗಿ ಈ ಕೇಸ್ಗಳನ್ನು ಕಾಳಜಿಯಿಂದ ತೆಗೆದುಕೊಂಡು ನೌಕರರಲ್ಲಿ ಇರುವ ಭಯ ಆತಂಕವನ್ನು ದೂರಮಾಡಬೇಕು. ಜತೆಗೆ ಆರೋಪಗಳ ವಿರುದ್ಧ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ವಾಯವು ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಎಂಡಿ ಪ್ರಿಯಾಂಗಾ ಅವರ ಮನವಿಗೆ ಸ್ಪಂದಿಸಿದ ಐಜಿಪಿ ಚೇತನ್ ಸಿಂಗ್ ರಾಥೋಡ್, ಸಾರಿಗೆ ನೌಕರರು ಬಹಳ ಶ್ರಮ ಜೀವಿಗಳು ಅವರು ಸಂಸ್ಥೆಯ ತಳಹದಿಯಾಗಿದ್ದಾರೆ. ಇಂಥವರ ಮೇಲೆ ಸುಖಾಸುಮ್ಮನೆ ಹಲ್ಲೆ ಮಾಡಿದರೆ ಅಂಥ ಆರೋಪಿಗಳನ್ನು ಸುಮ್ಮನೆ ಬಿಡುವುದಿಲ್ಲ ಎಂದು ಧೈರ್ಯ ತುಂಬಿದ್ದಾರೆ.
ಇನ್ನು ಹಲ್ಲೆ ಮಾಡಿರುವ ಆರೋಪಿಗಳ ವಿರುದ್ಧ ಅತೀ ಶೀಘ್ರದಲ್ಲೇ ಎಲ್ಲರೀತಿಯ ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಸಂಬಂಧಪಟ್ಟ ಪೊಲೀಸ್ ಠಾಣೆಗಳ ಅಧಿಕಾರಿಗಳಿಗೆ ಸೂಚನೆ ನೀಡುತ್ತೇವೆ. ನೀವು ನೌಕರರಿಗೆ ಧೈರ್ಯ ಹೇಳಿ ಎಂದು ಎಂಡಿ ಮೇಡಂ ಅವರಿಗೆ ಭರವಸೆ ನೀಡಿದ್ದಾರೆ.
ಅಲ್ಲದೆ ಸಾರಿಗೆ ಬಸ್ ಚಾಲನಾ ಸಿಬ್ಬಂದಿಗಳು ಡ್ಯೂಟಿಯಲ್ಲಿದ್ದಾ ಅವರ ಮೇಲೆ ಸಾರ್ವಜನಿಕರು ಹಲ್ಲೆ ಮಾಡಿದರೆ ಕಾನೂನಿನಡಿ ಶಿಕ್ಷೆಗೆ ಗುರಿಯಾಗುತ್ತೀರಿ. ಈ ಬಗ್ಗೆ ಎಚ್ಚರಿಕೆ ಇರಬೇಕು ಎಂದು ಹಲ್ಲೆಕೋರರಿಗೆ ಎಚ್ಚರಿಕೆ ಸಂದೇಶವನ್ನು ಕಳುಹಿಸಿದ್ದಾರೆ.
ಇತ್ತೀಚೆಗೆ ಅದರಲ್ಲೂ ಸಾರಿಗೆ ನಿಗಮಗಳ ಬಸ್ಗಳಲ್ಲಿ ಪ್ರಯಾಣಿಸುವ ಕೆಲವರು ಚಾಲನಾ ಸಿಬ್ಬಂದಿಗಳ ಮೇಲೆ ಹಲ್ಲೆ ಮಾಡುವುದು ಅವಾಚ್ಯ ಪದಗಳಿಂದ ನಿಂದಿಸುವುದು ಮಾಡುತ್ತಿದ್ದಾರೆ. ಈ ರೀತಿ ಮಾಡಿದರೆ ಜೈಲು ಸೇರಬೇಕಾಗುತ್ತದೆ ಎಂಬ ತಿಳಿವಳಿಕೆಯನ್ನೂ ಐಜಿಪಿ ಚೇತನ್ ಸಿಂಗ್ ರಾಥೋಡ್ ನೀಡಿದ್ದು, ಈ ರೀತಿ ನಡೆದುಕೊಳ್ಳದಂತೆ ಎಚ್ಚರಿಕೆಯನ್ನು ನೀಡಿದ್ದಾರೆ.