- ದುಂದುವೆಚ್ಚ ವಿವಾಹ ಬದಲಾಗಿ ಸರಳ ವಿವಾಹ ಆಗಿ: ಸಚಿವ ಕೆ.ಎಚ್. ಮುನಿಯಪ್ಪ ಕರೆ
ದೊಡ್ಡಬಳ್ಳಾಪುರ: ರಾಜ್ಯದ ಪ್ರಮುಖ ಧಾರ್ಮಿಕ ಸ್ಥಳಗಳಲ್ಲಿ ಒಂದಾದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಇಂದು 66 ನವ ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟರು.
ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಘಾಟಿ ಕ್ಷೇತ್ರದಲ್ಲಿ ಆಯೋಜಿಸಿದ್ದ ಉಚಿತ ಸಾಮೂಹಿಕ ವಿವಾಹದಲ್ಲಿ 66 ನೂತನ ಜೋಡಿಗಳು ಸತಿ-ಪತಿಗಳಾದರು. ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಗಳ ಸಾನಿಧ್ಯ ಹಾಗೂ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಅವರ ಸಮ್ಮುಖದಲ್ಲಿ ನೂತನ ವಧು-ವರರಿಗೆ ಆಶೀರ್ವದಿಸಿ ಶುಭ ಹಾರೈಸಿದರು.
ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಸಚಿವರು, ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮ ಶುಭ ಲಗ್ನದಲ್ಲಿ ಸುಬ್ರಹ್ಮಣ್ಯ ಸ್ವಾಮಿಯ ಕ್ಷೇತ್ರದಲ್ಲಿ ನಡೆದಿರುವುದು ವಿಶೇಷವಾಗಿದೆ. ಈ ಪುಣ್ಯ ಕಾರ್ಯಕ್ರಮಕ್ಕೆ ಬಂದಿರುವುದು ನನಗೂ ಹೆಮ್ಮೆ ಇದೆ. ಬಡವರಿಗೆ, ಹಿಂದುಳಿದವರಿಗೆ, ಸರಳ ವಿವಾಹ ಬಯಸುವವರಿಗೆ ಇಂಥ ವಿವಾಹ ಬಹಳ ಸಹಕಾರಿ ಎಂದರು.
ಸಾಲ ಮಾಡಿ ಲಕ್ಷಾಂತರ ರೂ. ಖರ್ಚು ಮಾಡಿ ಆಗುವ ಮದುವೆಗಳಿಂದ, ಮುಂದೆ ಸಾಲ ತೀರಿಸಲಾಗದ ಪರಿಸ್ಥಿತಿ ನಿರ್ಮಾಣ ಆಗಬಹುದು. ಸರಳ ವಿವಾಹ ಆಗುವುದರಿಂದ ನೆಮ್ಮದಿಯ ಜೀವನ ನಡೆಸಬಹುದು. ದೇವರ ಸನ್ನಿಧಾನದಲ್ಲಿ ನೆರವೇರಿರುವ ಈ ಸಾಮೂಹಿಕ ವಿವಾಹ ಶ್ರೇಷ್ಠವಾಗಿದೆ. ತಮಗೆ ಉತ್ತಮ ಜೀವನ, ಆರೋಗ್ಯ ಭಾಗ್ಯ, ಆಯಸ್ಸು ಕೊಟ್ಟು ದೇವರು ಕಾಪಾಡಲಿ ಎಂದು ನವ ದಂಪತಿಗಳಿಗೆ ಶುಭ ಹಾರೈಸಿದರು.
ನವ ದಂಪತಿಗಳಾದ ತಾವು ಪ್ರೀತಿ ವಾತ್ಸಲ್ಯದಿಂದ ಜೀವನ ಮಾಡಬೇಕು ಮತ್ತು ತಮ್ಮ ತಂದೆ-ತಾಯಿ, ಕುಟುಂಬವನ್ನು ಚೆನ್ನಾಗಿ ಪೋಷಿಸಿ ಉತ್ತಮ ಜೀವನ ಸಾಗಿಸಲು ಸಲಹೆ ನೀಡಿದರು.
ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಿದ ಪ್ರಾಧಿಕಾರ ಹಾಗೂ ಅಧಿಕಾರಿಗಳಿಗೆ ಸಚಿವರು ಧನ್ಯವಾದ ತಿಳಿಸಿದರು. ಮಾಂಗಲ್ಯ ಭಾಗ್ಯ ಯೋಜನೆಯಡಿ ಪ್ರಾಧಿಕಾರದ ವತಿಯಿಂದ ನವ ಜೋಡಿಗೆ ತಾಳಿ, ಎರಡು ಚಿನ್ನದ ಗುಂಡು, ಪಂಚೆ-ಶಲ್ಯ, ಬೆಳ್ಳಿ ಕಾಲುಂಗುರವನ್ನು ಉಚಿತವಾಗಿ ನೀಡಲಾಯಿತು.
ಜಿಲ್ಲಾಧಿಕಾರಿ ಎ.ಬಿ.ಬಸವರಾಜು, ಸಿಇಒ ಡಾ.ಕೆ.ಎನ್ ಅನುರಾಧ, ಉಪವಿಭಾಗಾಧಿಕಾರಿ ದುರ್ಗಶ್ರೀ, ತಹಸೀಲ್ದಾರ್ ವಿಭಾ ರಾಥೋಡ್, ಇಒ ಮುನಿರಾಜು, ಪ್ರಾಧಿಕಾರದ ಸದಸ್ಯರು, ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು ಉಪಸ್ಥಿತರಿದ್ದರು.
Related

You Might Also Like
BMTC: ಚಾಲಕ ಹುದ್ದೆಯಿಂದ ಚಾಲಕ ಕಂ ನಿರ್ವಾಹಕ ಹುದ್ದೆಗೆ ನಿಯೋಜಿಸಿದ್ದ ಆದೇಶ ಹಿಂಪಡೆಯಲು ಸಿಟಿಎಂ ಆದೇಶ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನಿಯಮ 17/1 ರ ಅಡಿಯಲ್ಲಿ ಚಾಲಕ ಹುದ್ದೆಯಿಂದ ಚಾಲಕ-ಕಂ-ನಿರ್ವಾಹಕ ಹುದ್ದೆಗೆ ನಿಯೋಜಿಸಿರುವ ಆದೇಶಗಳನ್ನು ಜುಲೈ 1ರಿಂದಲೇ ಹಂತ ಹಂತವಾಗಿ ಹಿಂಪಡೆದು...
ಕಾವೇರಿ ತಾಯಿಗೆ ಪೂಜೆ ಸಲ್ಲಿಸಿ, ಬಾಗಿನ ಅರ್ಪಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಮಂಡ್ಯ: ಸೋತ ಗಿರಾಕಿಗಳು ಸರ್ಕಾರ ಬಿದ್ದೋಗತ್ತೆ ಎಂದು ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ. ನನ್ನ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನಡುವಿನ ವಿಶ್ವಾಸ ಸರಿ ಇಲ್ಲ ಎಂದು ಬುರುಡೆ...
ವನಮಹೋತ್ಸವದಲ್ಲಿ ತ್ರಿಚಕ್ರ ವಾಹನ ವಿತರಣೆ, ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ
ಬೆಂಗಳೂರು ಗ್ರಾಮಾಂತ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವನಮಹೋತ್ಸವ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ತ್ರಿಚಕ್ರ ವಾಹನ ವಿತರಣೆ ಹಾಗೂ ಸ್ವಚ್ಛತಾ ಕೆಲಸಕ್ಕಾಗಿ ನೂತನ ಆಟೋ ವಾಹನ ಮತ್ತು ಹಿಟಾಚಿ...
9 ಎಕರೆಯಲ್ಲಿ ಕೆಂಪೇಗೌಡರ ವಸ್ತು ಸಂಗ್ರಹಾಲಯ ನಿರ್ಮಾಣ: ಉಸ್ತುವಾರಿ ಸಚಿವ ಕೆಎಚ್ಎಂ
ನಾಡಪ್ರಭು ಕೆಂಪೇಗೌಡರ 516 ನೇ ಜಯಂತ್ಯೋತ್ಸವ ಬೆಂಗಳೂರು: ನಾಡಪ್ರಭು ಕೆಂಪೇಗೌಡರ ಮೂಲ ಸ್ಥಳವಾದ ಆವತಿ ಗ್ರಾಮದ ಬಳಿ 9.10 ಎಕರೆ ಪ್ರದೇಶದಲ್ಲಿ ನಾಡಪ್ರಭು ಕೆಂಪೇಗೌಡರ ಜೀವನ ಚರಿತ್ರೆ,...
ಲೋಕಾಯುಕ್ತರು ರಾಜಿನಾಮೆ ನೀಡಬೇಕು, ಅಬಕಾರಿ ಸಚಿವರ ವಜಾಗೊಳಿಸಲು ಆಗ್ರಹಿಸಿ KRS ಪಕ್ಷದಿಂದ ಬೃಹತ್ ಪ್ರತಿಭಟನೆ
ಬೆಂಗಳೂರು: ಲೋಕಾಯುಕ್ತರು ರಾಜಿನಾಮೆ ನೀಡಲಿ, ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಅವರನ್ನು ವಜಾಗೊಳಿಸಿ, ನ್ಯಾಯಾಂಗದ ಉಸ್ತುವಾರಿಯಲ್ಲಿ ಸಿಬಿಐ ತನಿಖೆಗೆ ವಹಿಸಿ ಎಂದು ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ...
ಸರ್ಕಾರ ಅತೀ ಶೀಘ್ರದಲ್ಲೇ ಸಾರಿಗೆ ನೌಕರರಿಗೆ ಕೊಟ್ಟ ಭರವಸೆ ಈಡೇರಿಸಲಿದೆ: ಡಿಸಿಎಂ ಡಿಕೆಶಿ
ಬೆಂಗಳೂರು: ಚುನಾವಣಾ ಪೂರ್ವ ಪ್ರಣಾಳಿಕೆ ಭರವಸೆಯಂತೆ ಸಾರಿಗೆ ನೌಕರರಿಗೆ ಸರ್ಕಾರಿ ನೌಕರರಂತೆ ಸಮಾನ ವೇತನ ನೀಡುವಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಸಾರಿಗೆ ನೌಕರರ ಕೂಟದ ರಾಜ್ಯಾಧ್ಯಕ್ಷ...
KKRTC: ತನ್ನದಲ್ಲದ ಆಧಾರ್ ಕಾರ್ಡ್ ತೋರಿಸಿ ಟಿಕೆಟ್ ಕೇಳಿದ ಮಹಿಳೆ- ಪ್ರಶ್ನಿಸಿದ್ದಕ್ಕೆ ಪ್ರಜ್ಞೆ ತಪ್ಪುವವರೆಗೂ ಕಂಡಕ್ಟರ್ ಮೇಲೆ ಹಲ್ಲೆ ಮಾಡಿದ ಸಂಬಂಧಿಕರು
ಕಲಬುರಗಿ: ಬೇರೆಯವರ ಆಧಾರ್ ಕಾರ್ಡ್ ತೋರಿಸಿ ಟಿಕೆಟ್ ಪಡೆದುಕೊಳ್ಳಲು ಮುಂದಾದ ಮಹಿಳೆಗೆ ಇದು ನಿಮ್ಮ ಆಧಾರ ಕಾರ್ಡ್ ಅಲ್ಲ ನಿಮ್ಮದನ್ನು ಕೊಡಿ ಎಂದು ನಿರ್ವಾಹಕರು ಹೇಳಿದ್ದಕ್ಕೆ ಮಹಿಳೆ...
KSRTC: ಟೈರ್ ಬ್ಲಾಸ್ಟಾಗಿ ಮನೆಗೆ ನುಗ್ಗಿದ ಬಸ್-10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
ತಿಪಟೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಟೈರ್ ಬ್ಲಾಸ್ಟ್ ಆಗಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಮನೆಗೆ ಬಸ್ ನುಗ್ಗಿದ ಘಟನೆ ತಾಲೂಕಿನ ಸಿದ್ದಾಪುರ...
ಕ್ರೂರವಾಗಿ ಮಹಿಳೆ ಕೊಲೆಗೈದು ಮೂಟೆಕಟ್ಟಿ ಕಸದ ಲಾರಿಯಲ್ಲಿಟ್ಟ ಪಾಪಿಗಳು ಎಸ್ಕೇಪ್
ಬೆಂಗಳೂರು: ಅತ್ಯಾಚಾರ ಮಾಡಿದ ಬಳಿಕ ಮಹಿಳೆಯನ್ನು ಅತ್ಯಂತ ಕ್ರೂರವಾಗಿ ಕೊಲೆಗೈದು ಮೂಟೆಕಟ್ಟಿ ಕಸದ ಲಾರಿಯಲ್ಲಿಟ್ಟು ದುಷ್ಕರ್ಮಿಗಳು ಎಸ್ಕೇಪ್ ಆಗಿರುವ ಘಟನೆ ಚನ್ನಮ್ಮನಕೆರೆ ಠಾಣಾ ವ್ಯಾಪ್ತಿಯ ಸ್ಕೇಟಿಂಗ್ ಗ್ರೌಂಡ್...