NEWSನಮ್ಮಜಿಲ್ಲೆನಮ್ಮರಾಜ್ಯ

700-800 ಇದ್ದ ಬಸ್‌ ಟಿಕೆಟ್‌ ದರ ದಿಢೀರ್‌ 1600-2000 ರೂ.ಗೆ ಏರಿಕೆ: ದಂಗಾದ ಪ್ರಯಾಣಿಕರು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಇದೇ ಸೆ.18 ಗಣೇಶ ಚತುರ್ಥಿ ಸೇರಿ ಹಬ್ಬ ಹರಿದಿನಗಳು ಹಾಗೂ ವಾರಾಂತ್ಯದ ದಿನಗಳಲ್ಲಿ ಖಾಸಗಿ ಬಸ್‌ಗಳ ಟಿಕೆಟ್‌ ದರವನ್ನು ವಿಪರೀತವಾಗಿ ಏರಿಕೆ ಮಾಡಲಾಗುತ್ತಿದ್ದು, ಇದರಿಂದ ಪ್ರಯಾಣಿಕರಿಗೆ ಅನುಕೂಲಕ್ಕಿಂತ ಅನಾನುಕೂಲವೆ ಹೆಚ್ಚಾಗುತ್ತಿದೆ.

ಅಲ್ಲದೆ ಸಾರ್ವಜನಿಕರ ಜೇಬಿಗೂ ಕತ್ತರಿ ಬೀಳುತ್ತಿದೆ. ಈ ಹಿನ್ನೆಲೆ ಖಾಸಗಿ ಬಸ್‌ ಮಾಲೀಕರು ಹಾಗೂ ಆನ್‌ಲೈನ್‌ ಟಿಕೆಟ್‌ ನೀಡುವ ವಿತರಕರಿಗೆ ಕರ್ನಾಟಕ ಸಾರಿಗೆ ಇಲಾಖೆ ಎಚ್ಚರಿಕೆ ನೀಡಿದ್ದು, ಟಿಕೆಟ್‌ ದರವನ್ನು ಹೆಚ್ಚಿಸಿ ಪ್ರಯಾಣಿಕರಿಗೆ ಅನಾನುಕೂಲ ಮಾಡಿದರೆ ಅದಕ್ಕೆ ತಕ್ಕ ದಂಡ ತೆರಬೇಕಾಗುತ್ತಿದೆ ಎಂದು ಎಚ್ಚಚರಿಕೆ ನೀಡಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರು, ಇತ್ತೀಚಿಗೆ ಮಾಧ್ಯಮಗಳಲ್ಲಿ ವಾರಾಂತ್ಯ, ಹಬ್ಬ ಹರಿದಿನಗಳಂದು ಖಾಸಗಿ ಪ್ರಯಾಣಿಕರ ವಾಹನಗಳ ಪ್ರಯಾಣ ದರಗಳಲ್ಲಿ ವಿಪರೀತ ಹೆಚ್ಚಳ ಮಾಡಿ ಪ್ರಯಾಣಿಕರನ್ನು ಸುಲಿಗೆ ಮಾಡುತ್ತಿರುವ ಕುರಿತು ವರದಿಯಾಗಿರುತ್ತದೆ ಹಾಗೂ ಇದೇ ವಿಷಯದ ಕುರಿತು ಸಾರಿಗೆ ಇಲಾಖೆಗೆ ಸಾರ್ವಜನಿಕರಿಂದ ಹಲವು ದೂರುಗಳು ಸಹ ಬಂದಿವೆ ಎಂದು ಹೇಳಿದ್ದಾರೆ.

ಹೀಗಾಗಿ ಖಾಸಗಿ ಪ್ರಯಾಣಿಕರ ವಾಹನಗಳ ಮಾಲೀಕರು ಮತ್ತು ಆನ್‌ಲೈನ್ ಟಿಕೆಟ್ ವಿತರಕರಿಗೆ ವಾರಾಂತ್ಯ ಹಾಗೂ ಸರದಿ ಹಬ್ಬ ಹರಿದಿನಗಳಲ್ಲಿ ಪ್ರಯಾಣ ದರಗಳಲ್ಲಿ ವಿಪರೀತ ಹೆಚ್ಚಳ ಮಾಡಿ ಪ್ರಯಾಣಿಕರಿಗೆ ಅನಾನುಕೂಲತೆ ಮಾಡಬಾರದು ಹಾಗೂ ಪ್ರಯಾಣಿಕರ ವಾಹನಗಳಲ್ಲಿ ಇತರೆ ಸರಕುಗಳನ್ನು ಅನಧಿಕೃತವಾಗಿ ಸಾಗಿಸಬಾರದು ತಿಳಿಸಿದ್ದಾರೆ.

ಒಂದು ವೇಳೆ ಈ ರೀತಿಯ ಪ್ರಕರಣಗಳು ಕಂಡುಬಂದಲ್ಲಿ ವಾಹನ ಮಾಲೀಕರ / ಆನ್‌ಲೈನ್ ಟಿಕೆಟ್ ನೀಡುವ ವಿತರಕರ ವಿರುದ್ಧ ಪ್ರಕರಣಗಳನ್ನು ದಾಖಲಿಸಿ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆಯನ್ನು ನೀಡಿದ್ದಾರೆ.

ಹಬ್ಬದ ಸಂದರ್ಭ ಟಿಕೆಟ್‌ ದರ ದಿಢೀರ್‌ ಏರಿಕೆ!: ಯುಗಾದಿ, ಗಣೇಶ ಚತುರ್ಥಿ, ದಸರಾ, ದೀಪಾವಳಿ ಸೇರಿ ಇತರೆ ಹಬ್ಬಗಳ ಸಂದರ್ಭದಲ್ಲಿ ಖಾಸಗಿ ಬಸ್‌ಗಳ ಟಿಕೆಟ್‌ ದರ ದಿಢೀರ್‌ ಏರುತ್ತದೆ. ಹಬ್ಬದ ವೇಳೆ ಬೆಂಗಳೂರು ಸೇರಿ ವಿವಿಧ ಪ್ರಮುಖ ನಗರಗಳಿಂದ ತಮ್ಮ ವಾಸ ಸ್ಥಾನಗಳಿಗೆ ಜನರು ತೆರಳುತ್ತಾರೆ. ಇದನ್ನೇ ಬಳಸಿಕೊಳ್ಳುವ ಖಾಸಗಿ ವಾಹನಗಳ ಮಾಲೀಕರು ನಿಗದಿತ ದರಕ್ಕಿಂತ ದುಪ್ಪಟ್ಟು ದರವನ್ನು ವಿಧಿಸುತ್ತಾರೆ. ಇದರಿಂದ ಜನರು ಅನಿವಾರ್ಯವಾಗಿ ಭಾರೀ ಬೆಲೆ ನೀಡಿ ಊರಿಗೆ ತೆರಳಬೇಕಾದ ಪರಿಸ್ಥಿತಿ ಈ ಹಿಂದಿನಿಂದಲೂ ನಿರ್ಮಾಣ ಆಗುತ್ತಲೇ ಇದೆ.

ಈ ಹಿಂದೆ ಸಾರಿಗೆ ಸಚಿರಾಗಿದ್ದ ಬಿ.ಶ್ರೀರಾಮುಲು ಇಂತಹ ಘಟನೆಗಳು ನಡೆದಲ್ಲಿ ರೂಟ್ ಪರ್ಮಿಟ್ ತಕ್ಷಣದಿಂದಲೇ ರದ್ದು ಪಡಿಸಲಾಗುತ್ತದೆ. ಯಾವುದೇ ಕಾರಣಕ್ಕೂ ರಾಜೀ ಇಲ್ಲ ಎಂದು ಖಾಸಗಿ ಬಸ್‌ ಮಾಲೀಕರಿಗೆ ಎಚ್ಚರಿಕೆ ನೀಡಿದ್ದರು. ಆದರೆ, ವ್ಯವಸ್ಥೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

ಸದ್ಯ ಗಣೇಶ ಚತುರ್ಥಿಗೆ ಒಂದು ದಿನ ರಜೆ ಹಾಕಿದರೆ ನಾಲ್ಕು ದಿನ ರಜೆ ಸಿಗಲಿದೆ. ಶುಕ್ರವಾರ ರಾತ್ರಿಯಿಂದ ಖಾಸಗಿ ಬಸ್‌ ಟಿಕೆಟ್‌ ದರ ಏರಿಕೆಯಾಗಿದೆ. ಸಾಮಾನ್ಯ ದಿನಗಳಲ್ಲಿ ಬೆಂಗಳೂರಿನಿಂದ ಗಂಗಾವತಿಗೆ 700 ರಿಂದ 800 ರೂ. ದರ ಇತ್ತು. ಶುಕ್ರವಾರ ಈ ಬಸ್‌ಗಳ ದರ 1600 ರಿಂದ 2000 ರೂ.ವರೆಗೂ ಏರಿಕೆಯಾಗಿದೆ. ಇದನ್ನು ಕೂಡಲೇ ಸಾರಿಗೆ ಸಚಿವರು ನಿಯಂತ್ರಿಸಬೇಕು ಎಂದು ಪ್ರಯಾಣಿಕರು ಒತ್ತಾಯ ಮಾಡಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು