ಬೆಂಗಳೂರು: ಭಾರಿ ಕುತೂಹಲದಿಂದ ಕಾಯುತ್ತಿದ್ದ ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಶೇ.73.45ರಷ್ಟು ಪರೀಕ್ಷಾರ್ಥಿ ವಿದ್ಯಾರ್ಥಿಗಳು ತೇರ್ಗಡೆಹೊಂದಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಇಂದು (ಏ.8) ಫಲಿತಾಂಶ ಕುರಿತು ಮಧ್ಯಾಹ್ನ 12:45ಕ್ಕೆ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಲ್ಲೇಶ್ವರದಲ್ಲಿರುವ ಮಂಡಳಿಯ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, 6,81,079 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅವರಲ್ಲಿ 4,68,439 ಮಂದಿ ತೇರ್ಗಡೆಯಾಗಿದ್ದಾರೆ ಎಂದು ವಿವರಿಸಿದರು.
ಇನ್ನು ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ 93.90% ಸಾಧನೆ ಮಾಡುವ ಮೂಲಕ ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದೆ. ಎರಡನೇ ಸ್ಥಾನ ದಕ್ಷಿಣ ಕನ್ನಡ (93.57%), ಮೂರನೇ ಸ್ಥಾನವನ್ನು ಬೆಂಗಳೂರು ದಕ್ಷಿಣ (85.36%) ಪಡೆದುಕೊಂಡಿದೆ. ಕೊನೆ ಸ್ಥಾನದಲ್ಲಿ ಯಾದಗಿರಿ( 73.45%) ಇದೆ ಎಂದ ಅವರು, ಮಧ್ಯಾಹ್ನ 1:30 ಗಂಟೆಗೆ ವೆಬ್ಸೈಟ್ನಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎಂದರು.
ದ್ವಿತೀಯ ಪಿಯುಸಿ ಪರಿಕ್ಷೆ ಕಳೆದ ಮಾರ್ಚ್ 1 ರಿಂದ ಆರಂಭಗೊಂಡು ಮಾರ್ಚ್ 20 ರಂದು ಮುಕ್ತಾಯಗೊಂಡಿತ್ತು. ಈ ಬಾರಿ ಸುಮಾರು 7.13 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನವನ್ನು ತ್ವರಿತಗತಿಯಲ್ಲಿ ನಡೆಸಿ ಇಂದು ಫಲಿತಾಂಶ ಘೋಷಣೆ ಮಾಡಲಾಯಿತು.
ಕಲಾ ವಿಭಾಗ: ಕಲಾ ವಿಭಾಗದಲ್ಲಿ ಬಳ್ಳಾರಿ ಮೂಲದ ಸಂಜನಾ ಬಾಯಿ 600ಕ್ಕೆ 597 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದರೆ, ಬಳ್ಳಾರಿಯ ನಿರ್ಮಾಲಾ 596 ಅಂಕಗಳನ್ನು ಪಡೆದು ರಾಜ್ಯಕ್ಕೇ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.
ಯಾವ ಶ್ರೇಣಿಯಲ್ಲಿ ಎಷ್ಟು ಮಂದಿ ಪಾಸ್?
ಉನ್ನತ ಶ್ರೇಣಿ- 1,00,571
ಪ್ರಥಮ ದರ್ಜೆ- 2,78,054
ದ್ವೀತಿಯ ದರ್ಜೆ-70969
ತೃತೀಯ ದರ್ಜೆ-18845
ಜಿಲ್ಲಾವಾರು ಫಲಿತಾಂಶ: ಉಡುಪಿ ಜಿಲ್ಲೆ ಶೇಕಡಾ 93.90, ದಕ್ಷಿಣ ಕನ್ನಡ ಜಿಲ್ಲೆ 93.57ರಷ್ಟು ಫಲಿತಾಂಶ, ಬೆಂಗಳೂರು ದಕ್ಷಿಣ 85.36, ಕೊಡಗು ಜಿಲ್ಲೆ 83.84ರಷ್ಟು ಫಲಿತಾಂಶ, ಬೆಂಗಳೂರು ಉತ್ತರ 83.31, ಉತ್ತರ ಕನ್ನಡ ಜಿಲ್ಲೆ 82.93ರಷ್ಟು ಫಲಿತಾಂಶ, ಶಿವಮೊಗ್ಗ ಜಿಲ್ಲೆ 79.91, ಬೆಂಗಳೂರು ಗ್ರಾಮಾಂತರ ಜಿಲ್ಲೆ 79.70, ಚಿಕ್ಕಮಗಳೂರು ಜಿಲ್ಲೆ 79.56, ಹಾಸನ ಜಿಲ್ಲೆ 77.56ರಷ್ಟು ಫಲಿತಾಂಶ, ಚಿಕ್ಕಬಳ್ಳಾಪುರ ಜಿಲ್ಲೆ 75.80, ಮೈಸೂರು ಜಿಲ್ಲೆ 74.30ರಷ್ಟು ಫಲಿತಾಂಶ.
ಚಾಮರಾಜನಗರ ಜಿಲ್ಲೆ 73.97, ಮಂಡ್ಯ ಜಿಲ್ಲೆ 73.27ರಷ್ಟು ಫಲಿತಾಂಶ, ಬಾಗಲಕೋಟೆ ಜಿಲ್ಲೆ 72.83, ಕೋಲಾರ ಜಿಲ್ಲೆ 72.45ರಷ್ಟು ಫಲಿತಾಂಶ, ಧಾರವಾಡ ಜಿಲ್ಲೆ 72.32, ತುಮಕೂರು ಜಿಲ್ಲೆ 72.02ರಷ್ಟು ಫಲಿತಾಂಶ, ರಾಮನಗರ ಜಿಲ್ಲೆ 69.71, ದಾವಣಗೆರೆ ಜಿಲ್ಲೆ 69.45ರಷ್ಟು ಫಲಿತಾಂಶ, ಹಾವೇರಿ ಜಿಲ್ಲೆ 76.56, ಬೀದರ್ ಜಿಲ್ಲೆ 67.31ರಷ್ಟು ಫಲಿತಾಂಶ ಬಂದಿದೆ.
ಕೊಪ್ಪಳ ಜಿಲ್ಲೆ 67.20, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ 66.76ರಷ್ಟು ಫಲಿತಾಂಶ, ಗದಗ ಜಿಲ್ಲೆ 66.64, ಬೆಳಗಾವಿ ಜಿಲ್ಲೆ 65.37ರಷ್ಟು ಫಲಿತಾಂಶ, ಬಳ್ಳಾರಿ ಜಿಲ್ಲೆ 64.41, ಚಿತ್ರದುರ್ಗ ಜಿಲ್ಲೆ 59.87ರಷ್ಟು ಫಲಿತಾಂಶ, ವಿಜಯಪುರ ಜಿಲ್ಲೆ 58.81, ರಾಯಚೂರು ಜಿಲ್ಲೆ 58.75ರಷ್ಟು ಫಲಿತಾಂಶ ಕಲಬುರಗಿ ಜಿಲ್ಲೆ 55.70, ಯಾದಗಿರಿ ಜಿಲ್ಲೆ 48.45ರಷ್ಟು ಫಲಿತಾಂಶ ಬಂದಿದೆ.
ದ್ವಿತೀಯ ಪಿಯುಸಿ ಪರೀಕ್ಷೆಗೆ 2,92,111 ಬಾಲಕರು ಹಾಜರಾಗಿದ್ದು, ಆ ಪೈಕಿ 1,99,227 ಬಾಲಕರು ಉತ್ತೀರ್ಣರಾಗಿದ್ದಾರೆ. 3,45,694 ಬಾಲಕಿಯರು ಪರೀಕ್ಷೆ ಬರೆದಿದ್ದರು ಅದರಲ್ಲಿ 2,69,212 ಬಾಲಕಿಯರು ಉತ್ತೀರ್ಣರಾಗಿದ್ದಾರೆ.
Related

You Might Also Like
BMTC: ಬ್ರೇಕ್ ಫೇಲಾಗಿ ಕಂದಕಕ್ಕೆ ನುಗ್ಗಿದ ಬಸ್- ಅದೃಷ್ಟವಶಾತ್ ಪ್ರಯಾಣಿಕರು ಸೇಫ್
ಆನೇಕಲ್: ಬ್ರೇಕ್ ಫೇಲಾಗಿ ರಸ್ತೆ ಬದಿಯ ಕಂದಕಕ್ಕೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಬಸ್ ನುಗ್ಗಿರುವ ಘಟನೆ ಬೆಂಗಳೂರು ಹೊರವಲಯ ಜಿಗಣಿ ಸಮೀಪದ ಹರಪ್ಪನಹಳ್ಳಿ ಬಳಿ...
ಹೆಬ್ಬಾಳ ಭಾಗದ ಬಹುದೊಡ್ಡ ಟ್ರಾಫಿಕ್ ಸಮಸ್ಯೆಗೆ ಕೊನೆಗೂ ಇಂದು ಸಿಗುತ್ತಿದೆ ಮುಕ್ತಿ
ಬೆಂಗಳೂರು: ರಾಜ್ಯ ರಾಜಧಾನಿಯ ಹೆಬ್ಬಾಳ ಭಾಗದ ಬಹುದೊಡ್ಡ ಟ್ರಾಫಿಕ್ ಸಮಸ್ಯೆಗೆ ಕೊನೆಗೂ ಇಂದು ಮುಕ್ತಿ ಸಿಗುತ್ತಿದೆ. ಹೌದು! ಬಹುನಿರೀಕ್ಷಿತ ಹೆಬ್ಬಾಳ ವಿಸ್ತರಿತ ಮೇಲ್ಸೇತುವೆ ಉದ್ಘಾಟನೆ ಆಗುತ್ತಿದೆ. ಇಂದು...
ಸರ್ಕಾರಿ ಬಸ್ ಗಾಜು ಒಡೆದು, ಚಾಲನಾ ಸಿಬ್ಬಂದಿ ಮೇಲೆ ಬೈಕ್ ಸವಾರನಿಂದ ಹಲ್ಲೆ
ಹುಬ್ಬಳ್ಳಿ: ಗದುಗಿನಿಂದ ಹುಬ್ಬಳ್ಳಿಗೆ ಬರುತ್ತಿದ್ದ ಸರ್ಕಾರಿ ಸಾರಿಗೆ ಬಸನ್ನು ನಗರದ ಗದಗ ರಸ್ತೆ ಬಳಿ ಬೈಕ್ ಸವಾರನೊಬ್ಬ ಅಡ್ಡಗಟ್ಟಿ ಬಸ್ ಗಾಜು ಒಡೆದು ಹಾಕಿರುವುದಲ್ಲದೆ ಚಾಲಕ ಹಾಗೂ...
ಕೊಟ್ಟ ಚಿನ್ನಾಭರಣ- ನಗದನ್ನು ವಾಪಸ್ ಕೊಡಿಸಿ ಎಂದರೆ 2 ಲಕ್ಷ ಲಂಚಕೊಡಿ ಎಂದ ಪೊಲೀಸರು: ಲೋಕಾಯುಕ್ತ ಖೆಡ್ಡಕ್ಕೆ ಬಿದ್ದರು
ಬೆಂಗಳೂರು: ಕೊಟ್ಟಿರುವ ಆಭರಣ ಮತ್ತು ನಗದನ್ನು ವಾಪಸ್ ಕೊಡಿಸಿ ಎಂದು ದೂರು ನೀಡಲು ಪೊಲೀಸ್ ಠಾಣೆಗೆ ಹೋದರೆ ನಮಗೆ 2 ಲಕ್ಷ ರೂ. ಲಂಚ ಕೊಟ್ಟರೆ ವಾಪಸ್...
ಭೀಕರ ಅಪಘಾತ: ಲಾರಿಗೆ ಸರ್ಕಾರಿ ಬಸ್ ಡಿಕ್ಕಿ -ಮೂವರ ಸಾವು, 7ಮಂದಿಗೆ ಗಂಭೀರಗಾಯ
ಯಲ್ಲಾಪುರ: ನಿಂತಿದ್ದ ಲಾರಿಗೆ ಸರ್ಕಾರಿ ಬಸ್ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಮೃತಪಟ್ಟು 7 ಮಂದಿ ಗಂಭೀರವಾಗಿ ಗಾಯಗೊಂಡಿೆಉವ ಘಟನೆ ಉತ್ತರಕನ್ನಡ...
KSRTC: ಯಾವುದೇ ಕಾರಣಕ್ಕೂ ನೌಕರರ ವಾರದ ರಜೆ ರದ್ದುಪಡಿಸಬಾರದು- ಹಿಂದಿನ ವ್ಯವಸ್ಥಾಪಕ ನಿರ್ದೇಶಕರ ಆದೇಶ
ವಾರದ ರಜೆ ರದ್ದು ಪಡಿಸಿದರೆ ಅಂಥ ಅಧಿಕಾರಿಯ ವಿರುದ್ಧ ಮೇಲಧಿಕಾರಿಗಳಿಗೆ ದೂರು ನೀಡುವ ಅಧಿಕಾರಿ ನೌಕರರಿಗೆ ಇದೆ ಬೆಂಗಳೂರು: ನೌಕರರಿಗೆ ವಾರದ ರಜೆಯನ್ನು ನಿಗದಿತ ದಿನದಂದು ನೀಡಬೇಕು...
ಚಂದ್ರಶೇಖರನಾಥ ಶ್ರೀಗಳ ಪೂರ್ವಾಶ್ರಮದ ಹೆಸರು ಕೆ.ಟಿ.ಗೋವಿಂದೇಗೌಡ
ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧಿಪತಿ 80 ವರ್ಷದ ಶ್ರೀ ಚಂದ್ರಶೇಖರನಾಥ ಸ್ವಾಮಿಗಳು ಇಂದು ರಾತ್ರಿ 12.01 ರ ಸಮಯದಲ್ಲಿ ಇಹಲೋಕ ತ್ಯಜಿಸುವ ಮೂಲಕ ಶ್ರೀ ಕೃಷ್ಣನ...
ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಂಭ್ರಮ: ದೇವಕಿ ಸುತನ ವೇಷದಲ್ಲಿ ಮಿಂಚಿದ ಲಿಟಲ್ ಲಿಶಾನ್
ಬೆಂಗಳೂರು: ರಾಜ್ಯಾದ್ಯಂತ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಶನಿವಾರ ಅದ್ದೂರಿಯಾಗಿ ಆಚರಿಸುತ್ತಿದ್ದು, ಪುಟಾಣಿಗಳು ಶ್ರೀಕೃಷ್ಣ - ರಾಧೆ ವೇಷ ಧರಿಸಿ ಮಿಂಚುತ್ತಿದ್ದಾರೆ. ಈ ಪೈಕಿ ಮಕ್ಕಳ ಚಂದದ ಫೋಟೋಗಳನ್ನು...
ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ನಿಧನ
ಬೆಂಗಳೂರು: ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ಅವರು ಇಂದು ತಡರಾತ್ರಿ ನಿಧನಹೊಂದಿದ್ದಾರೆ. ಕೆಂಗೇರಿ ಸಮೀಪ ಶ್ರೀಮಠ ಸ್ಥಾಪನೆ ಮಾಡಿ ಶಿಕ್ಷಣ, ಆಧ್ಯಾತ್ಮಿಕ...