NEWSದೇಶ-ವಿದೇಶ

77 ನೇ ದಿನಕ್ಕೆ ಕಾಲಿಟ್ಟ MSRTC ನೌಕರರ ಮುಷ್ಕರ: ಮುಷ್ಕರ ಹಿಂತೆಗೆದುಕೊಳ್ಳುವಂತೆ ಶರದ್ ಪವಾರ್ ಮನವಿ

ವಿಜಯಪಥ ಸಮಗ್ರ ಸುದ್ದಿ

ಮುಂಬೈ:  ಎಂಎಸ್ಆರ್ಟಿಸಿ ಸಂಸ್ಥೆಯನ್ನು ರಾಜ್ಯ ಸರ್ಕಾರದೊಂದಿಗೆ ವಿಲೀನಗೊಳಿಸುವಂತೆ ಒತ್ತಾಯಿಸಿ ಎಂಎಸ್ಆರ್ಟಿಸಿ ನೌಕರರು ಕಳೆದ 77 ದಿನಗಳಿಂದ ನಿರಂತರವಾಗಿ ಮುಷ್ಕರವನ್ನು ನಡೆಸುತ್ತಿದ್ದು, ನೌಕರರ ಮುಷ್ಕರಕ್ಕೆ ಸರ್ಕಾರ ಮುಣಿಯುವ ಎಲ್ಲ ಲಕ್ಷಣಗಳು ಗೋಚರಿಸುತ್ತಿವೆ.

ಹೌದು ! ನೌಕರರ ಬೇಡಿಕೆಗೆ ಸರ್ಕಾರ ಮಣಿಯಲಿದೆ. ನೌಕರರ ಬೇಡಿಕೆಯಂತೆ ಸರ್ಕಾರದೊಂದಿಗೆ ನಿಗಮವನ್ನು ವಿಲೀನಗೊಳಿಸುವುದಕ್ಕೆ ಸರ್ಕಾರದೊಂದಿಗೆ ಮಾತನಾಡುವುದಾಗಿ ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಮತ್ತು ಸಾರಿಗೆ ಸಚಿವ ಅನಿಲ್ ಪರಬ್ ಅವರೇ ಭರವಸೆ ನೀಡಿದ್ದು, ಕೆಲಸಕ್ಕೆ ಮರಳುವಂತೆ ಮನವಿ ಮಾಡಿದ್ದಾರೆ.

ಎಂಎಸ್ಆರ್ಟಿಸಿ ಸಂಸ್ಥೆಯನ್ನು ರಾಜ್ಯ ಸರ್ಕಾರದೊಂದಿಗೆ ವಿಲೀನಗೊಳಿಸುವಂತೆ ಒತ್ತಾಯಿಸಿ ಎಂಎಸ್ಆರ್ಟಿಸಿ ನೌಕರರು ಕಳೆದ ಅಕ್ಟೋಬರ್ 27 ರಿಂದ ಮುಷ್ಕರ ನಡೆಸುತ್ತಿದ್ದಾರೆ.

ರಾಜ್ಯದ 250 ಬಸ್ ಡಿಪೋಗಳನ್ನು ನವೆಂಬರ್ 9 ರಿಂದ ಇಲ್ಲಿಯವರೆಗೂ ಮುಚ್ಚಲಾಗಿದೆ ಸಾರ್ವಜನಿಕ ಸಾರಿಗೆ ಸೇವೆಗಳು ಬಹುತೇಕ ಸ್ಥಗಿತಗೊಂಡಿವೆ. ಗ್ರಾಮೀಣ ಭಾಗದ ಸಾರ್ವಜನಿಕರು ಬಸ್ಸೇವೆಯನ್ನು ಅವಲಂಬಿಸಿದ್ದಾರೆ.

ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಮತ್ತು ಸಾರಿಗೆ ಸಚಿವ ಅನಿಲ್ ಪರಬ್ ಅವರೊಂದಿಗೆ ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರ ವಿವಿಧ ಸಂಘಟನೆಗಳು ಪದಾಧಿಕಾರಿಗಳು ಸಭೆ ನಡೆಸಿ ಕಾರ್ಮಿಕರ ಮುಷ್ಕರದ ಕುರಿತು ಚರ್ಚಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪವಾರ್, ಸಾರಿಗೆ ನೌಕರರು ಕೆಲಸ ಪುನರಾರಂಭಿಸುವಂತೆ ಮನವಿ ಮಾಡಿದರು. ಅಲ್ಲದೆ ನೌಕರರ ಬೇಡಿಕೆಗಳನ್ನು ರಾಜ್ಯ ಸರ್ಕಾರ ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು.

ರಾಜ್ಯದ ಸಾಮಾನ್ಯ ಜನರ ಜೀವನಾಡಿ ಎಂಎಸ್ಆರ್ಟಿಸಿಯು “ಕಳೆದ ಎರಡು ವರ್ಷಗಳಿಂದ, ಕೋವಿಡ್ -19ನಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಇದು ಸಂಸ್ಥೆಯ ಅಸ್ತಿತ್ವದ ಮೇಲೆ ಪ್ರಶ್ನಾರ್ಥಕ ಚಿಹ್ನೆಯನ್ನು ಸೃಷ್ಟಿಸಿದೆ.

ಇಂತಹ ಪರಿಸ್ಥಿತಿಯಲ್ಲಿ ಲಕ್ಷಾಂತರ ಪ್ರಯಾಣಿಕರಿಗೆ ತೊಂದರೆಯಾಗದಂತೆ ಹಾಗೂ ಅವರ ಭವಿಷ್ಯ ಮತ್ತು ಸಂಸ್ಥೆಗೆ ತೊಂದರೆಯಾಗದಂತೆ ಸಿಬ್ಬಂದಿಗಳು ಕೂಡಲೇ ಕೆಲಸಕ್ಕೆ ಮರಳಬೇಕು” ಎಂದು ಪವಾರ್ ಮನವಿ ಮಾಡಿದರು.

MSRTC ಮುಷ್ಕರವು ಸೋಮವಾರ 76 ನೇ ದಿನಕ್ಕೆ ಕಾಲಿಟ್ಟಿದೆ, 92,666 ಸಿಬ್ಬಂದಿಗಳಲ್ಲಿ 24,000 ಸಿಬ್ಬಂದಿ ಮಾತ್ರ ಕೆಲಸಕ್ಕೆ ವರದಿ ಮಾಡಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ