NEWSದೇಶ-ವಿದೇಶ

ದೇಶದೆಲ್ಲೆಡೆ ಮೊಳಗುತ್ತಿದೆ 78ನೇ ಸ್ವಾತಂತ್ರ್ಯೋತ್ಸವ – ತ್ರಿವರ್ಣ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ದೇಶದೆಲ್ಲೆಡೆ 78ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆಮಾಡಿದೆ. ಸಮಸ್ತ ಭಾರತೀಯರು ದೇಶಭಕ್ತಿ ಭಾವ ಮೆರೆದಿದ್ದಾರೆ. ಇತ್ತ ದೆಹಲಿಯ ಕೆಂಪುಕೋಟೆಯಲ್ಲಿ ಸ್ವಾತಂತ್ರ ದಿನವನ್ನು ಆಚರಿಸಲಾಗುತ್ತಿದೆ.

ಪ್ರಧಾನಿ ನರೇಂದ್ರ ಮೋದಿಅವರು ಬೆಳಗ್ಗೆ 7:30ರ ಸುಮಾರಿಗೆ ಧ್ವಜಾರೋಹಣ ನೆರವೇರಿಸಿ, ದೇಶದ ಜನತೆಗೆ ಸ್ವಾತಂತ್ರೋತ್ಸವದ ಶುಭಕೋರಿದರು. ಇದಕ್ಕೂ ಮೊದಲು ಪ್ರಧಾನಿ ಮೋದಿ ಅವರು ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧಿ ಅವರಿಗೆ ಪುಷ್ಪ ನಮನ ಸಲ್ಲಿಸಿದರು. ರಾಜ್‌ಘಾಟ್‌ನಿಂದ ಕೆಂಪುಕೋಟೆ ತಲುಪಿದರು.

ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಪ್ರಧಾನಿಯನ್ನು ಸ್ವಾಗತಿಸಿದರು. ನರೇಂದ್ರ ಮೋದಿ ಅವರಿಗೆ ಗನ್ ಸೆಲ್ಯೂಟ್ ಮೂಲಕ ಸ್ವಾಗತ ಕೋರಲಾಯಿತು. ಬಳಿಕ ಸಾಂಪ್ರದಾಯಿಕ ಕೆಂಪು ಕೋಟೆಯ ಮೇಲೆ ತ್ರಿವರ್ಣ ಧ್ವಜಾರೋಹಣ ನೆರವೇರಿಸಿದರು.

ಸಮಾರಂಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ, ಲೋಕಸಭಾ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದಾರೆ.

ಸ್ವಾತಂತ್ರೋತ್ಸವದ ಹಿನ್ನೆಲೆಯಲ್ಲಿ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿದ್ದ ಮೋದಿ, ನನ್ನ ಸಹ ಭಾರತೀಯರಿಗೆ ಸ್ವಾತಂತ್ರ್ಯ ದಿನದ ಶುಭಾಶಯಗಳು. ಜೈ ಹಿಂದ್! ಶುಭಾಶಯ ತಿಳಿಸಿದ್ದಾರೆ.

ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ದೇಶದ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಆ ಮೂಲಕ ಸತತ 11ನೇ ಬಾರಿಗೆ ಧ್ವಜಾರೋಹಣ ಮಾಡಿ ದೇಶದ ಜನತೆಯನ್ನುದ್ದೇಶಿಸಿ ಇಂದು ಭಾಷಣ ಮಾಡಿದ್ದಾರೆ.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ