NEWSನಮ್ಮಜಿಲ್ಲೆನಮ್ಮರಾಜ್ಯ

ನಾಳೆ ಇಪಿಎಸ್ ಪಿಂಚಣಿದಾರರ 78ನೇ ಮಾಸಿಕ ಸಭೆ: BMTC & KSRTC ನಂಜುಂಡೇಗೌಡ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಇಪಿಎಸ್ ಪಿಂಚಣಿದಾರರ 78ನೇ ಮಾಸಿಕ ಸಭೆ ಇದೇ ಜುಲೈ 7ರ ಭಾನುವಾರ ಬೆಳಗ್ಗೆ 8ಗಂಟೆಗೆ ಲಾಲ್ ಬಾಗ್ ಆವರಣದಲ್ಲಿ ಜರುಗಲಿದ್ದು ಎಲ್ಲರು ತಪ್ಪದೆ ಭಾಗವಹಿಸಬೇಕು ಎಂದು ಬಿಎಂಟಿಸಿ & ಕೆಎಸ್ಆರ್ಟಿಸಿ ನಿವೃತ್ತ ನೌಕರರ ಸಂಘಟನೆಯ ಕಾರ್ಯಾಧ್ಯಕ್ಷ ನಂಜುಂಡೇಗೌಡ ಮನವಿ ಮಾಡಿದ್ದಾರೆ.

ಜೂನ್ 29 ರಂದು ಎನ್ಎಸಿ ಮುಖ್ಯ ಸಂಯೋಜಕ ರಮಕಾಂತ್ ನರಗುಂದ ಅವರ ನೇತೃತ್ವದಲ್ಲಿ ನೂರಾರು ಇಪಿಎಸ್ ನಿವೃತ್ತರು ಕೇಂದ್ರ ಸರ್ಕಾರದ ನೂತನ ಕಾರ್ಮಿಕ ಹಾಗೂ ಉದ್ಯೋಗ ಖಾತೆ (minister for labour & employment) ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಅವರನ್ನು ಬೆಂಗಳೂರಿನ ಅವರ ಕಚೇರಿಯಲ್ಲಿ ನಾವೆಲ್ಲರೂ ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದ್ದೇವೆ. ಈ ವೇಳೆ ಸಚಿವೆರವರ ಬಳಿ ಇಪಿಎಸ್ ನಿವೃತ್ತರು ತಮ್ಮ ಮನದಾಳದ ನೋವನ್ನು ವ್ಯಕ್ತಪಡಿಸಿದ್ದು, ಇದಕ್ಕೆ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.

ಇನ್ನು ಎನ್‌ಎಸಿ ಅಧ್ಯಕ್ಷರಾದ ಶ್ರೀ ಅಶೋಕ್ ರಾಹುತ್ ರವರ ನಿಯೋಗ ದೆಹಲಿಯಲ್ಲಿ ಜುಲೈ 2 ರಂದು ಶೋಭಾ ಕರಂದ್ಲಾಜೆ ಅವರನ್ನು ಅವರ ಕಚೇರಿಯಲ್ಲಿ ಭೇಟಿ ಮಾಡಿ, ಮನವಿ ಪತ್ರ ಸಲ್ಲಿಸಿ, ಮಾತುಕತೆ ನಡೆಸಿರುವುದು ಅತ್ಯಂತ ಮಹತ್ವದ ಬೆಳವಣಿಗೆಯಾಗಿದೆ.

ಈ ಎಲ್ಲದರ ಜತೆಗೆ “ನಿಧಿ ಆಪ್ಕೆ ನಿಕಟ್” ಕಳೆದ ತಿಂಗಳು ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ಆವರಣದಲ್ಲಿ ಜರುಗಿದ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ ಅತ್ಯಂತ ಯಶಸ್ವಿಯಾಗಿ ಜರುಗಿದ್ದು, ಈ ಬಗ್ಗೆ ವಿಜಯಪಥ ಹಾಗೂ ಹಲವಾರು ದಿನಪತ್ರಿಕೆಗಳಲ್ಲಿ ಪ್ರಕಟಗೊಂಡು, ರಾಜ್ಯಾದ್ಯಂತ ಸುದ್ದಿಯಾದ ವಿಷಯ ತಮಗೂ ತಿಳಿದಿದೆ. ಏನೇ ಆಗಲಿ ಈ ಬಾರಿ ಇಪಿಎಸ್ ನಿವೃತ್ತರ ಹೋರಾಟಕ್ಕೆ ಜಯ ಶತಸಿದ್ಧ ಎಂಬ ಆಶಯ ನಮ್ಮದಾಗಿದೆ.

ಹೆಚ್ಚುವರಿ ಪಿಂಚಣಿಗೆ ಸಂಬಂಧಿಸಿದಂತೆ ಮೇ 31 ರ ಗಡುವು ಮುಗಿದಿದ್ದು, ಇಪಿಎಫ್ಒ ಅಧಿಕಾರಿಗಳು ಯಾವುದಕ್ಕೂ ತಲೆಕೆಡಿಸಿಕೊಳ್ಳುವುದಿಲ್ಲ. ಬೇಸಿಗೆ ರಜೆಯ ನಂತರ ಜುಲೈ 8 ರಿಂದ ಸರ್ವೋಚ್ಚ ನ್ಯಾಯಾಲಯದ ಕಾರ್ಯಕಲಾಪಗಳು ಪ್ರಾರಂಭವಾಗುತ್ತಿದ್ದು, ಆರ್‌.ಸಿ. ಗುಪ್ತ ನ್ಯಾಯಾಲಯ ನಿಂದನಾ ಅರ್ಜಿ, ಪುನರ್ ಪರಿಶೀಲನಾ ಅರ್ಜಿಗಳು ಹಾಗೂ ಇನ್ನೂ ಹಲವಾರು ಪ್ರಕರಣಗಳ ಪಟ್ಟಿ ಕಾಸ್ ಲಿಸ್ಟ್ (cause list) ನಲ್ಲಿ ಪ್ರಕಟಣೆಯಾಗಿದ್ದು, ಈ ಎಲ್ಲ ಪ್ರಕರಣಗಳು ಇತ್ಯರ್ಥಪಡಿಸಲು ಈಗ ಕಾಲ ಕೂಡಿ ಬರುತ್ತಿದೆ!!!. ಇಪಿಎಫ್ಒ ಅಧಿಕಾರಿಗಳ ಆಟ ಇನ್ನೂ ಮುಂದೆ ನಡೆಯುವುದಿಲ್ಲ.

RC Guptha contempt of court case is posted for final hearing on 16/07/2024 before the Supreme Court. Every day is accountable & required to be explained properly or to face further consequences under Contempt of Court Act, which must be taken note of it by the concerned officers. This time we will win the game !!!.

ಮೂರನೇ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ನೂತನ ಕೇಂದ್ರ ಸರ್ಕಾರ ರಚನೆಯಾಗಿದ್ದು, ನಮ್ಮ ಹೋರಾಟದಲ್ಲಿ ಕೆಲವೊಂದು ಮಾರ್ಪಾಡುಗಳನ್ನು ಮಾಡಿಕೊಂಡು, ಇಪಿಎಸ್ ನಿವೃತ್ತರು ಕ್ಷೇತ್ರವಾರು ನೂತನ ಸಂಸದರನ್ನು ಕಂಡು, ಅಭಿನಂದಿಸಿ, ಮನವಿ ಪತ್ರ ಸಲ್ಲಿಸುತ್ತಿರುವುದು ಅತ್ಯಂತ ಶ್ಲಾಘನೀಯ. ಇದರ ಜತೆಗೆ ಎಲ್ಲ ಇಪಿಎಸ್ ನಿವೃತ್ತರು ಸಂಘಟನಾತ್ಮಕ ಹೋರಾಟ ಮಾಡಿದಲ್ಲಿ ಮಾತ್ರ ನಾವು ನಮ್ಮ ಗುರಿ ತಲಪಲು ಸಾಧ್ಯವಾಗುತ್ತದೆ. ಶಕ್ತಿ ಪ್ರದರ್ಶನಕ್ಕೆ ಇಪಿಎಸ್ ನಿವೃತ್ತರೆಲ್ಲರೂ ಸಜ್ಜಾಗಬೇಕು.

ಹೀಗಾಗಿ ಈ ಮಾಸಿಕ ಸಭೆಗೆ ಎನ್ಎಸಿ ಮುಖ್ಯ ಸಂಯೋಜಕ ರಮಾಕಾಂತ್ ನರಗುಂದ ಹಾಗೂ ರಾಜ್ಯಾಧ್ಯಕ್ಷ ಜಿಎಸ್ಎಂ ಸ್ವಾಮಿ ಭಾಗವಹಿಸಲಿದ್ದು, ನಮ್ಮ ಹೋರಾಟದ ಮುಂದಿನ ರೂಪುರೇಷೆ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಆದ್ದರಿಂದ ತಾವೆಲ್ಲರೂ ವಿಶ್ವ ಪಾರಂಪರಿಕ ಲಾಲ್ ಬಾಗ್ ಹೂತೋಟದಲ್ಲಿ ವಾಯುವಿಹಾರ ನಡೆಸಿ, ತಮ್ಮ ಹಳೆಯ ಸ್ನೇಹಿತರ ಭೇಟಿ, ವಿಚಾರ ವಿನಿಮಯ ಹಾಗೂ ಈ ಎಲ್ಲ ಅಂಶಗಳ ಬಗ್ಗೆ ಚರ್ಚಿಸೋಣ. ಅದಕ್ಕಾಗಿ ಜುಲೈ7 ರಂದು ಬೆಳಗ್ಗೆ 8ಗೆ ತಾವೆಲ್ಲರೂ ಭಾಗವಹಿಸಬೇಕೆಂದು ನಂಜುಂಡೇಗೌಡ ಮನವಿ ಮಾಡಿದ್ದಾರೆ.

Leave a Reply

error: Content is protected !!
LATEST
KSRTC : ಗಣಪತಿ ಪ್ರತಿಷ್ಠಾಪಿಸಿದ್ದರಿಂದ ಡಿಪೋ ಮುಂದೆ ಚಾಲಕ ರವಿ ಪಾರ್ಥಿವ ಶರೀರ ಇಡಲಾತ್ತು, ಪ್ರಮಾದವಾಗಿಲ್ಲ- ಡಿಎಂ ಸಮ... 10 ವರ್ಷದ ಆಧಾರ್‌ ನವೀಕರಣಕ್ಕೆ ಡೆಡ್‌ಲೈನ್‌ ಫಿಕ್ಸ್‌: ನಾಳೆ ಅಂತಿಮ ಗಡುವು- ಬಳಿಕ ದಂಡ ನಾಗಮಂಗಲ ಕೋಮುಗಲಭೆ ಪ್ರಕರಣ: ಇನ್ಸ್‌ಪೆಕ್ಟರ್ ಅಶೋಕ್ ಕುಮಾರ್ ಅಮಾನತು KSRTC ಸಿಬ್ಬಂದಿಯಿಂದಲೇ ಡಿಸಿಗೆ ಇರಿಯಲು ಯತ್ನ- ಕೈ ಅಡ್ಡಹಾಕಿ ಪ್ರಾಣಾಪಾಯದಿಂದ ಪಾರಾದ ಜಗದೀಶ್ ಕುಮಾರ್‌ "ARM" ಸಿನಿಮಾ ಇಂದು ಪ್ರಪಂಚದಾದ್ಯಂತ ಐದು ಭಾಷೆಗಳಲ್ಲಿ ಬಿಡುಗಡೆ ಸೆ.14ರಂದು ಸಾರಿಗೆ ಸಿಬ್ಬಂದಿಗಳಿಗೆ ಔಷಧೀಯ ಸಸ್ಯಗಳ  ಉಚಿತ ವಿತರಣೆ: ಅಧಿಕಾರಿಗಳು ಭಾಗಿ ಟೊವಿನೋ ಥಾಮಸ್ ಸಿನಿಮಾ ವಿತರಿಸಲಿದೆ ಹೊಂಬಾಳೆ ಫಿಲ್ಮ್! ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ ಬಂಧನ ಅವಧಿ ಮತ್ತೆ ಒಂದು ದಿನ ವಿಸ್ತರಣೆ KSRTC ಚಿಕ್ಕಮಗಳೂರು: ಘಟಕದ ಗೇಟ್‌ ಬಳಿ ತ್ಯಾಜ್ಯಗಳ ನಡುವೆ ಚಾಲಕನ ಪಾರ್ಥಿವ ಶರೀರವಿಟ್ಟು ಅಂತಿಮ ದರ್ಶನಕ್ಕೆ ವ್ಯವಸ್ಥೆ-... ವಾಲ್ಮೀಕಿ ಹಗರಣ: ಬಳ್ಳಾರಿಯಿಂದ ಬಿಜೆಪಿ ಪಾದಯಾತ್ರೆ - ಛಲವಾದಿ ನಾರಾಯಣಸ್ವಾಮಿ