NEWSನಮ್ಮರಾಜ್ಯಬೆಂಗಳೂರು

ಇಪಿಎಸ್ ನಿವೃತ್ತರ 78ನೇ ಮಾಸಿಕ ಸಭೆ ಯಶಸ್ವಿ: BMTC & KSRTC ನಂಜುಂಡೇಗೌಡ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಇಪಿಎಸ್ ನಿವೃತ್ತರ 78ನೇ ಮಾಸಿಕ ಸಭೆ ನಗರದ ಲಾಲ್ ಬಾಗ್ ಆವರಣದಲ್ಲಿ ಯಶಸ್ವಿಯಾಗಿ ಜರುಗಿತು. ಈ ಸಭೆಗೆ ಬೆಂಗಳೂರು ನಗರ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ನಿವೃತ್ತರು ಆಗಮಿಸಿದ್ದು, ಹೂ ತೋಟದಲ್ಲಿ ವಾಯುವಿಹಾರ ನಡೆಸಿ, ತಮ್ಮ ಹಳೆಯ ಸ್ನೇಹಿತರೊಂದಿಗೆ ಉಭಯ ಕುಶಲೊಪರಿ ನಡೆಸುತ್ತಿದ್ದುದು ಸಾಮಾನ್ಯ ದೃಶ್ಯಾವಳಿಯಾಗಿತ್ತು.

ಸಭೆ ಪ್ರಾರಂಭಕ್ಕೂ ಮೊದಲು, ಇತ್ತೀಚೆಗೆ ಅಗಲಿದ ಇಪಿಎಸ್ ನಿವೃತ್ತರ ಆತ್ಮಕ್ಕೆ ಶಾಂತಿ ಕೋರಿ ಒಂದು ನಿಮಿಷ ಮೌನ ಆಚರಿಸಲಾಯಿತು. ಸಂಘದ ಪ್ರಧಾನ ಕಾರ್ಯದರ್ಶಿ ಡೋಲಪ್ಪನವರು ಎಲ್ಲ ನಿವೃತ್ತರನ್ನು ಸ್ವಾಗತಿಸಿ, ನಮ್ಮ ಹೋರಾಟದ ಬಗ್ಗೆ ಪ್ರಾಸ್ತಾವಿಕ ಭಾಷಣ ಮಾಡಿದರು.

ಬಿಎಂಟಿಸಿ & ಕೆಎಸ್‌ಆರ್‌ಟಿಸಿ ನಿವೃತ್ತ ನೌಕರರ ಸಂಘದ ಕಾರ್ಯಾಧ್ಯಕ್ಷ ನಂಜುಂಡೇಗೌಡ ರವರು ಇಪಿಎಸ್ ಕಾಯಿದೆ ಹಾಗೂ ಪ್ರಚಲಿತ ಸಂಗತಿಗಳ ಬಗ್ಗೆ ಮಾತನಾಡಿ, ಸಭೆಯಲ್ಲಿ ಕೈಗೊಂಡ ನಿರ್ಣಯಗಳ ವಿವರ ನೀಡಿದರು. ನವೆಂಬರ್ 4, 2022 ರಂದು ಸರ್ವೋಚ್ಚ ನ್ಯಾಯಾಲಯವು ಸುನಿಲ್ ಕುಮಾರ್ ಪ್ರಕರಣದಲ್ಲಿ ನೀಡಿರುವ ತೀರ್ಪನ್ನು ಇಪಿಎಫ್ಒ ಅಧಿಕಾರಿಗಳು ಈ ಕೂಡಲೇ ಅನುಷ್ಠಾನಗೊಳಿಸಬೇಕು ಎಂದು ಸಮಸ್ತ ನಿವೃತ್ತ ನೌಕರರು ಆಗ್ರಹಿಸಿದರು.

ಅಸಂಖ್ಯಾತ ಇಪಿಎಸ್ ನಿವೃತ್ತರು 15 ರಿಂದ 20 ವರ್ಷಗಳ ಕೆಳಗೆ ಸೇವೆಯಿಂದ ನಿವೃತ್ತರಾಗಿದ್ದು, ಇವರೆಲ್ಲರೂ ನ್ಯಾಯಾಲಯದ ತೀರ್ಪಿನ ವ್ಯಾಪ್ತಿಗೆ ಒಳಪಡದೆ ಇದ್ದು, ತೀವ್ರ ಸಂಕಷ್ಟಗಳಿಗೆ ಸಿಲುಕಿದ್ದಾರೆ. ಈ ಎಲ್ಲ ನಿವೃತ್ತರಿಗೆ ಮಾನವೀಯ ದೃಷ್ಟಿಯಿಂದ ಕೇಂದ್ರ ಸರ್ಕಾರ ಕನಿಷ್ಠ ಪಿಂಚಣಿ 7500 ರೂ.ಗಳು ಮತ್ತು ಭತ್ಯೆ ಹಾಗೂ ವೈದ್ಯಕೀಯ ಸೌಲಭ್ಯವನ್ನು ಕೂಡಲೇ ವಿಸ್ತರಿಸಬೇಕೆಂದು ಸಭೆಯಲ್ಲಿ ನಿರ್ಣಯಿಸಲಾಯಿತು ಎಂದು ತಿಳಿಸಿದರು.

ಈ ಸಂಬಂಧ ಕೇಂದ್ರ ಕಾರ್ಮಿಕ ಹಾಗೂ ಉದ್ಯೋಗ ಖಾತೆ (minister for labour and employment) ಸಚಿವರಾದ ಮನ್ಸೂಖ್ ಮಾಂಡವಿಯ ಹಾಗೂ ಶೋಭಾ ಕರಂದ್ಲಾಜೆ ಅವರನ್ನು ದೆಹಲಿಯ ನಮ್ಮ ಮುಖಂಡರು ಭೇಟಿ ಮಾಡಿ, ಒತ್ತಡ ಹಾಕಿ, ಈ ಎಲ್ಲ ಬೇಡಿಕೆಗಳ ಬಗ್ಗೆ ಮನವರಿಕೆ ಮಾಡಿಕೊಟ್ಟು, ಮುಂದಿನ ಕ್ರಮ ಕೈಗೊಳ್ಳಬೇಕು ಹಾಗೂ ಇಪಿಎಸ್ ನಿವೃತ್ತರ ಹೋರಾಟ/ ಚಳವಳಿಯನ್ನು ಇನ್ನೂ ತೀವ್ರಗೊಳಿಸಬೇಕೆಂದು ಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯವನ್ನು ಅಂಗೀಕರಿಸಲಾಯಿತು ಎಂದರು.

ಇನ್ನು ಇದೇ ಜುಲೈ 29 ರಿಂದ 31ರವರೆಗೆ ದೆಹಲಿಯಲ್ಲಿ ನಡೆಯುವ ಎನ್ಎಸಿ ಕಾರ್ಯಕಾರಿ ಸಮಿತಿ ಸಭೆ ಹಾಗೂ ಕನಿಷ್ಠ ಹೆಚ್ಚುವರಿ ಪಿಂಚಣಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಪಾಲ್ಗೊಳ್ಳಲು ನಮ್ಮ ಸಂಘದ ಕಾರ್ಯಾಧ್ಯಕ್ಷ ನಂಜುಂಡೇಗೌಡ ಭಾಗವಹಿಸುತ್ತಿದ್ದು, ಅವರಿಗೆ ಸಭೆಯಲ್ಲಿ ಶುಭ ಹಾರೈಸಲಾಯಿತು.

“ನಿಧಿ ಆಪ್ಕೆ ನಿಕಟ್” ಇದೆ ಜುಲೈ 29ರಂದು ನಗರದ ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ಆವರಣದಲ್ಲಿ ನಡೆಯುತ್ತಿದ್ದು, ಅಂದಿನ ಪ್ರತಿಭಟನಾ ಸಭೆಗೆ ಹೆಚ್ಚಿನ ಸಂಖ್ಯೆಯಲ್ಲಿ ಇಪಿಎಸ್ ನಿವೃತ್ತರು ಆಗಮಿಸಿ ಭಾಗವಹಿಸಬೇಕೆಂದು ಸಭೆಯಲ್ಲಿ ನಿರ್ಣಯಿಸಲಾಯಿತು.

ಮಾಸಿಕ ಸಭೆಗೆ ಎನ್ಎಸಿ ಮಾಧ್ಯಮ ಸಂಚಾಲಕ ಅನಿಲ್ ಇನಾಮ್ ದಾರ್ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿ, ಕಮಾಂಡರ್ ಅಶೋಕ್ ರಾಹುತ್ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಟ ಇನ್ನೇನು ಅಂತಿಮ ಘಟ್ಟ ತಲಪಲಿದೆ ಎಂಬ ಆಶಯ ವ್ಯಕ್ತಪಡಿಸಿದರು.

ಸಂಘಟನೆಯ ಪದಾಧಿಕಾರಿಗಳಾದ ನಾಗರಾಜು, ಮನೋಹರ್ ಹಾಗೂ ರುಕ್ಮಿಶ್ ರವರು ಸಭೆಯ ನಿರ್ವಹಣೆಯನ್ನು ಅತ್ಯಂತ ಯಶಸ್ವಿಯಾಗಿ ನಡೆಸಿಕೊಟ್ಟರು.

Leave a Reply

error: Content is protected !!
LATEST
KSRTC : ಗಣಪತಿ ಪ್ರತಿಷ್ಠಾಪಿಸಿದ್ದರಿಂದ ಡಿಪೋ ಮುಂದೆ ಚಾಲಕ ರವಿ ಪಾರ್ಥಿವ ಶರೀರ ಇಡಲಾತ್ತು, ಪ್ರಮಾದವಾಗಿಲ್ಲ- ಡಿಎಂ ಸಮ... 10 ವರ್ಷದ ಆಧಾರ್‌ ನವೀಕರಣಕ್ಕೆ ಡೆಡ್‌ಲೈನ್‌ ಫಿಕ್ಸ್‌: ನಾಳೆ ಅಂತಿಮ ಗಡುವು- ಬಳಿಕ ದಂಡ ನಾಗಮಂಗಲ ಕೋಮುಗಲಭೆ ಪ್ರಕರಣ: ಇನ್ಸ್‌ಪೆಕ್ಟರ್ ಅಶೋಕ್ ಕುಮಾರ್ ಅಮಾನತು KSRTC ಸಿಬ್ಬಂದಿಯಿಂದಲೇ ಡಿಸಿಗೆ ಇರಿಯಲು ಯತ್ನ- ಕೈ ಅಡ್ಡಹಾಕಿ ಪ್ರಾಣಾಪಾಯದಿಂದ ಪಾರಾದ ಜಗದೀಶ್ ಕುಮಾರ್‌ "ARM" ಸಿನಿಮಾ ಇಂದು ಪ್ರಪಂಚದಾದ್ಯಂತ ಐದು ಭಾಷೆಗಳಲ್ಲಿ ಬಿಡುಗಡೆ ಸೆ.14ರಂದು ಸಾರಿಗೆ ಸಿಬ್ಬಂದಿಗಳಿಗೆ ಔಷಧೀಯ ಸಸ್ಯಗಳ  ಉಚಿತ ವಿತರಣೆ: ಅಧಿಕಾರಿಗಳು ಭಾಗಿ ಟೊವಿನೋ ಥಾಮಸ್ ಸಿನಿಮಾ ವಿತರಿಸಲಿದೆ ಹೊಂಬಾಳೆ ಫಿಲ್ಮ್! ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ ಬಂಧನ ಅವಧಿ ಮತ್ತೆ ಒಂದು ದಿನ ವಿಸ್ತರಣೆ KSRTC ಚಿಕ್ಕಮಗಳೂರು: ಘಟಕದ ಗೇಟ್‌ ಬಳಿ ತ್ಯಾಜ್ಯಗಳ ನಡುವೆ ಚಾಲಕನ ಪಾರ್ಥಿವ ಶರೀರವಿಟ್ಟು ಅಂತಿಮ ದರ್ಶನಕ್ಕೆ ವ್ಯವಸ್ಥೆ-... ವಾಲ್ಮೀಕಿ ಹಗರಣ: ಬಳ್ಳಾರಿಯಿಂದ ಬಿಜೆಪಿ ಪಾದಯಾತ್ರೆ - ಛಲವಾದಿ ನಾರಾಯಣಸ್ವಾಮಿ