NEWSನಮ್ಮಜಿಲ್ಲೆರಾಜಕೀಯ

ಬೆಂಗಳೂರಿನಲ್ಲಿ 79,08,394 ಮತದಾರರಿರು : ಬಿಬಿಎಂಪಿ- ಚುನಾವಣಾ ಆಯೋಗದಿಂದ ಕರಡು ಮತದಾರರ ಪಟ್ಟಿ ಪ್ರಕಟ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯ ಚುನಾವಣಾ ಆಯೋಗದಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸಾರ್ವತ್ರಿಕ ಚುನಾವಣೆ-2022ರ ಸಂಬಂಧ 243 ವಾರ್ಡ್ ವಾರು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸುವ ಸಂಬಂಧ ಇಂದು ಮಧ್ಯಾಹ್ನ 3 ಗಂಟೆಗೆ ರಾಜ್ಯ ಚುನಾವಣಾ ಆಯೋಗದ ಆಯುಕ್ತ ಬಸವರಾಜು ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರ ಅಧ್ಯಕ್ಷತೆಯಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಯಿತು.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ -2022ರ ಚುನಾವಣೆ ಸಂಬಂಧ ಬಿಬಿಎಂಪಿ ವ್ಯಾಪ್ತಿಯಲ್ಲಿ 243 ವಾರ್ಡ್‌ಗಳ ಕ್ಷೇತ್ರ ಪುನರ್‌ವಿಂಗಡಣೆ ಮಾಡಿ ಪ್ರತಿ ವಾರ್ಡಿನ ಗಡಿಗಳನ್ನು ಗುರುತಿಸಿ ಅಂತಿಮ ಪಟ್ಟಿಯನ್ನು ಹೊರಡಿಸಲಾಗಿದೆ. ರಾಜ್ಯ ಚುನಾವಣಾ ಆಯೋಗ ಅವರ ಸುತ್ತೋಲೆ ಸಂಖ್ಯೆ: ರಾಚುಅ 149 ಇಯುಬಿ 2022, ದಿನಾಂಕ: 15.07.2022 ರಂತೆ ವಾರ್ಡ್‌ವಾರು ಮತದಾರರ ಪಟ್ಟಿಯನ್ನು ತಯಾರಿಸುವ ಸಂಬಂಧ ಸೂಚನೆ ಮತ್ತು ವೇಳಾಪಟ್ಟಿಯನ್ನು ನೀಡಲಾಗಿದೆ.

ಅದರಂತೆ, ವಿಧಾನಸಭಾ ಕ್ಷೇತ್ರವಾರು 31.07.2022 ರವರೆಗಿನ ಮತದಾರರ ಮಾಹಿತಿಯನ್ನು ವಾರ್ಡ್ ವಾರು ಪುನರ್ ವಿಂಗಡಿಸಿ ಪಾಲಿಕೆಯ ವಾರ್ಡ್ ವಾರು ಮತದಾರರ ಪಟ್ಟಿಯನ್ನು ಸಿದ್ದಗೊಳಿಸಲಾಗಿದೆ. ಈ ಪೈಕಿ ಪಾಲಿಕೆಯ 243 ವಾರ್ಡ್ ಗಳಲ್ಲಿ ಒಟ್ಟು 79,08,394 ಮತದಾರರಿರುತ್ತಾರೆ. ಅದರಲ್ಲಿ 4109496 ಪುರುಷರು, 3797497 ಮಹಿಳೆಯರು ಹಾಗೂ 1401 ಇತರೆ ಮತದಾರರಿದ್ದಾರೆ.

ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ 25.08.2022 ರಂದು ಬಿಬಿಎಂಪಿ ವ್ಯಾಪ್ತಿಯ ವಾರ್ಡ್‌ವಾರು ಮತದಾರರ ಪಟ್ಟಿಯ ಕರಡು ಪ್ರತಿಯನ್ನು ವಲಯ ಜಂಟಿ ಆಯುಕ್ತರ ಕಚೇರಿ ಆಯಾ ವ್ಯಾಪ್ತಿಯ ಮತದಾರರ ನೋಂದಣಾಧಿಕಾರಿ/ ಸಹಾಯಕ ಮತದಾರರ ನೋಂದಣಾಧಿಕಾರಿ ಮತ್ತು ವಾರ್ಡ್ ಕಚೇರಿಗಳಲ್ಲಿ ಹಾಗೂ www.bbmp.gov.in ನಲ್ಲಿ ಪ್ರಚುರ ಪಡಿಸಲಾಗಿದೆ.

ಸಾರ್ವಜನಿಕರು/ ಮತದಾರರು ತಮ್ಮ ಹಾಗೂ ಕುಟುಂಬದ ಮಾಹಿತಿಯನ್ನು ಮತದಾರರ ಪಟ್ಟಿಯಲ್ಲಿ ಪರಿಶೀಲಿಸಿ ಕೊಳ್ಳಬಹುದಾಗಿದೆ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ತಮ್ಮ ಹಕ್ಕು ಮತ್ತು ಆಕ್ಷೇಪಣೆಗಳನ್ನು (Claims and Objections) ದಿನಾಂಕ: 25.08.2022 ರಿಂದ 02.09.2022 ರವರೆಗೆ ಸಂಬಂಧಪಟ್ಟ ವ್ಯಾಪ್ತಿಯ ಮತದಾರರ ನೊಂದಣಾಧಿಕಾರಿಗಳ ಕಚೇರಿಗಳಲ್ಲಿ ಸಲ್ಲಿಸಬಹುದಾಗಿರುತ್ತದೆ

ಮುಂದುವರಿದು ಹೊಸದಾಗಿ ಮತದಾರರಾಗಿ ನೋಂದಾಯಿಸಿಕೊಳ್ಳಲು ಮೊಬೈಲ್ ಆ್ಯಪ್ ಆದ Voter Helpline App ಮತ್ತು NVSP Portal ವೆಬ್‌ಸೈಟ್ ಮುಖೇನಾ ವಿಧಾನಸಭಾ ಕ್ಷೇತ್ರವಾರು ಅರ್ಜಿ ಸಲ್ಲಿಸಿದ್ದಲ್ಲಿ ಮುಂದಿನ ಹಂತದಲ್ಲಿ ಪರಿಶೀಲಿಸಿ ವಾರ್ಡ್‌ವಾರು ಮತದಾರರ ಪಟ್ಟಿಯನ್ನು ಸಿದ್ಧಗೊಳಿಸಲು ಕ್ರಮವಹಿಸಲಾಗುವುದು ಎಂದು ಮಾಹಿತಿ ನೀಡಿದರು.

ಈ ವೇಳೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಶ್ರೀನಿವಾಸ್, ಆಡಳಿತ ವಿಭಾಗದ ವಿಶೇಷ ಆಯುಕ್ತರು ಹಾಗೂ ಅಪರ ಜಿಲ್ಲಾ ಚುನಾವಣಾ ಅಧಿಕಾರಿ(ಕೇಂದ್ರ) ರಂಗಪ್ಪ, ವಿಶೇಷ ಆಯುಕ್ತ ಡಾ. ಹರೀಶ್ ಕುಮಾರ್, ರಾಜ್ಯ ಚುನಾವಣಾ ಆಯೋಗದ ಕಾರ್ಯದರ್ಶಿಯಾದ ಹೊನ್ನಮ್ಮ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

error: Content is protected !!
LATEST
KKRTC ವಿಜಯಪುರ ವಿಭಾಗದಲ್ಲಿ ಅಂದು ಡ್ಯೂಟಿಗೆ ಹತ್ತಿಸಿದ ಅಧಿಕಾರಿಗಳೇ ಇಂದು ಚಾಲಕನಿಗೆ ಮುಳುವಾಗಿ ನಿಂತಿದ್ದಾರಾ? ನಾಳೆ KSRTC ನೌಕರರಿಗೆ ನಗದು ರಹಿತಾ ವೈದ್ಯಕೀಯ ಚಿಕಿತ್ಸಾ ಯೋಜನೆ ಜಾರಿ ಸಂಬಂಧ ಎಂಡಿ ಅಧ್ಯಕ್ಷತೆಯಲ್ಲಿ ಸಭೆ BMTC: 7ದಿನಗಳಿಂದ LMSನಲ್ಲಿ ರಜೆ ಹಾಕಲಾಗದೆ ನೌಕರರ ಪರದಾಟ- ಸಮಸ್ಯೆ ಗೊತ್ತಿದ್ದರೂ ಅಧಿಕಾರಿಗಳು ಮೌನ BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC