NEWSನಮ್ಮಜಿಲ್ಲೆನಮ್ಮರಾಜ್ಯ

ನಾಳೆ 79ನೇ ಇಪಿಎಸ್ ಪಿಂಚಿಣಿದಾರರ ಬೃಹತ್‌ ಸಭೆ: BMTC & KSRTC ನಿವೃತ್ತ ನೌಕರರ ಸಂಘದ ಕಾರ್ಯಾಧ್ಯಕ್ಷ ನಂಜುಂಡೇಗೌಡ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಇಪಿಎಸ್ ಪಿಂಚಣಿದಾರರ 78ನೇ ಮಾಸಿಕ ಸಭೆ ಇದೇ ಆಗಸ್ಟ್‌ 4ರ ಭಾನುವಾರ ಬೆಳಗ್ಗೆ 8ಗಂಟೆಗೆ ಲಾಲ್ ಬಾಗ್ ಆವರಣದಲ್ಲಿ ಜರುಗಲಿದ್ದು ಎಲ್ಲರೂ ತಪ್ಪದೆ ಭಾಗವಹಿಸಬೇಕು ಎಂದು ಬಿಎಂಟಿಸಿ & ಕೆಎಸ್ಆರ್ಟಿಸಿ ನಿವೃತ್ತ ನೌಕರರ ಸಂಘಟನೆಯ ಕಾರ್ಯಾಧ್ಯಕ್ಷ ನಂಜುಂಡೇಗೌಡ ಮನವಿ ಮಾಡಿದ್ದಾರೆ.

ದೆಹಲಿಯ ಜಂತರ್ ಮಂತರ್‌ನಲ್ಲಿ ಜು.31 ಮತ್ತು ಆ.1ರಂದು ನಡೆದ ಪ್ರತಿಭಟನೆಯ ಸಂಪೂರ್ಣ ವಿವರವನ್ನು ಈ ಮಾಸಿಕ ಸಭೆಯಲ್ಲಿ ಚರ್ಚಿಸಲಾಗುವುದು. ಮಾತ್ರವಲ್ಲದೆ ಕನಿಷ್ಠ ಪಿಂಚಣಿ ಹಾಗೂ ಹೆಚ್ಚುವರಿ ಪಿಂಚಣಿ ಈ ಎರಡು ಅಂಶಗಳ ಬಗ್ಗೆ ವಿವರವನ್ನು ನೀಡಲಾಗುವುದು. ಎನ್ಎಸಿ ಮುಖ್ಯ ಸಂಯೋಜಕ ರಮಾಕಾಂತ್ ನರಗುಂದ ಹಾಗೂ ಜಿಎಸ್‌ಎಮ್ ಸ್ವಾಮಿ ಅವರು ಇಪಿಎಸ್ ನಿವೃತ್ತರ ಮುಂದಿನ ಹೋರಾಟದ ರೂಪುರೇಷೆ ಬಗ್ಗೆ ತಿಳಿಸಲಿದ್ದಾರೆ.

ಇನ್ನು ಕಳೆದ ತಿಂಗಳು ಎನ್ಎಸಿ ಮುಖ್ಯ ಸಂಯೋಜಕ ರಮಕಾಂತ್ ನರಗುಂದ ಅವರ ನೇತೃತ್ವದಲ್ಲಿ ನೂರಾರು ಇಪಿಎಸ್ ನಿವೃತ್ತರು ಕೇಂದ್ರ ಸರ್ಕಾರದ ನೂತನ ಕಾರ್ಮಿಕ ಹಾಗೂ ಉದ್ಯೋಗ ಖಾತೆ (minister for labour & employment) ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಅವರನ್ನು ಬೆಂಗಳೂರಿನ ಅವರ ಕಚೇರಿಯಲ್ಲಿ ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದ್ದೇವೆ. ಈ ವೇಳೆ ಸಚಿವರ ಬಳಿ ಇಪಿಎಸ್ ನಿವೃತ್ತರು ತಮ್ಮ ಮನದಾಳದ ನೋವನ್ನು ವ್ಯಕ್ತಪಡಿಸಿದ್ದು, ಇದಕ್ಕೆ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದರು.

ಈ ಎಲ್ಲದರ ಜತೆಗೆ “ನಿಧಿ ಆಪ್ಕೆ ನಿಕಟ್” ಕಳೆದ ತಿಂಗಳು ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ಆವರಣದಲ್ಲಿ ಜರುಗಿದ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ ಅತ್ಯಂತ ಯಶಸ್ವಿಯಾಗಿ ಜರುಗಿದ್ದು, ಈ ಬಗ್ಗೆ ಹಲವಾರು ಪತ್ರಿಕೆಗಳಲ್ಲಿ ಪ್ರಕಟಗೊಂಡು, ರಾಜ್ಯಾದ್ಯಂತ ಸುದ್ದಿಯಾದ ವಿಷಯ ತಮಗೂ ತಿಳಿದಿದೆ. ಏನೇ ಆಗಲಿ ಈ ಬಾರಿ ಇಪಿಎಸ್ ನಿವೃತ್ತರ ಹೋರಾಟಕ್ಕೆ ಜಯ ಶತಸಿದ್ಧ ಎಂಬ ಆಶಯ ನಮ್ಮದಾಗಿದೆ.

ಹೆಚ್ಚುವರಿ ಪಿಂಚಣಿಗೆ ಸಂಬಂಧಿಸಿದಂತೆ ಮೇ 31 ರ ಗಡುವು ಮುಗಿದಿದ್ದು, ಇಪಿಎಫ್ಒ ಅಧಿಕಾರಿಗಳು ಯಾವುದಕ್ಕೂ ತಲೆಕೆಡಿಸಿಕೊಳ್ಳುವುದಿಲ್ಲ. ಬೇಸಿಗೆ ರಜೆಯ ನಂತರ ಜುಲೈ 8 ರಿಂದ ಸರ್ವೋಚ್ಚ ನ್ಯಾಯಾಲಯದ ಕಾರ್ಯಕಲಾಪಗಳು ಪ್ರಾರಂಭವಾಗುತ್ತಿದ್ದು, ಆರ್‌.ಸಿ. ಗುಪ್ತ ನ್ಯಾಯಾಲಯ ನಿಂದನಾ ಅರ್ಜಿ, ಪುನರ್ ಪರಿಶೀಲನಾ ಅರ್ಜಿಗಳು ಹಾಗೂ ಇನ್ನೂ ಹಲವಾರು ಪ್ರಕರಣಗಳ ಪಟ್ಟಿ ಕಾಸ್ ಲಿಸ್ಟ್ (cause list) ನಲ್ಲಿ ಪ್ರಕಟಣೆಯಾಗಿದ್ದು, ಈ ಎಲ್ಲ ಪ್ರಕರಣಗಳು ಇತ್ಯರ್ಥಪಡಿಸಲು ಈಗ ಕಾಲ ಕೂಡಿ ಬರುತ್ತಿದೆ!!!. ಇಪಿಎಫ್ಒ ಅಧಿಕಾರಿಗಳ ಆಟ ಇನ್ನೂ ಮುಂದೆ ನಡೆಯುವುದಿಲ್ಲ.

RC Guptha contempt of court case is posted for final hearing on 16/07/2024 before the Supreme Court. Every day is accountable & required to be explained properly or to face further consequences under Contempt of Court Act, which must be taken note of it by the concerned officers. This time we will win the game !!!.

ಇನ್ನು ಈ ಮಾಸಿಕ ಸಭೆಗೆ ತಾವೆಲ್ಲರೂ ವಿಶ್ವ ಪಾರಂಪರಿಕ ಲಾಲ್ ಬಾಗ್ ಹೂತೋಟದಲ್ಲಿ ವಾಯುವಿಹಾರ ನಡೆಸಿ, ತಮ್ಮ ಹಳೆಯ ಸ್ನೇಹಿತರ ಭೇಟಿ, ವಿಚಾರ ವಿನಿಮಯ ಹಾಗೂ ಈ ಎಲ್ಲ ಅಂಶಗಳ ಬಗ್ಗೆ ಚರ್ಚಿಸೋಣ. ಅದಕ್ಕಾಗಿ ಆ.4 ರಂದು ಬೆಳಗ್ಗೆ 8ಗಂಟೆಗೆ ತಾವೆಲ್ಲರೂ ಆಗಮಿಸಬೇಕು ಎಂದು ನಂಜುಂಡೇಗೌಡ ಮನವಿ ಮಾಡಿದ್ದಾರೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು