ಹಾಸ್ಟೆಲ್‌ನಲ್ಲಿ 9ನೇ ತರಗತಿ ವಿದ್ಯಾರ್ಥಿಯಿಂದ 8 ಮಕ್ಕಳ ಮೇಲೆ ರಾಡ್‌ನಿಂದ ಭೀಕರ ಹಲ್ಲೆ, ಓರ್ವ ಮೃತ, 7 ಮಕ್ಕಳಿಗೆ ಗಾಯ

ಬಳ್ಳಾರಿ: ಖಾಸಗಿ ಶಾಲೆಯ ಹಾಸ್ಟೆಲ್‌ವೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ಸಹಪಾಠಿ ವಿದ್ಯಾರ್ಥಿಗಳ ಮೇಲೆ ರಾಡ್‌ನಿಂದ ಹಲ್ಲೆ ಮಾಡಿದ ಪರಿಣಾಮ ಒಬ್ಬ ಬಾಲಕ ಮೃತಪಟ್ಟಿದ್ದು, ಏಳು ವಿದ್ಯಾರ್ಥಿಗಳಿಗೆ ಗಾಯ ಮಾಡಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.

ಖಾಸಗಿ ಶಾಲೆಯ ಹಾಸ್ಟೆಲ್‌ವೊಂದರಲ್ಲಿ ಈ ಘಟನೆ ನಡೆದಿದ್ದು, ನಗರವನ್ನೇ ಬೆಚ್ಚಿ ಬೀಳಿಸುವಂತಿದೆ. ಕಬ್ಬಿಣದ ರಾಡ್‌ನಿಂದ ಬಲವಾಹಿ ಹೊಡೆದಿದ್ದರಿಂದ ಒಬ್ಬ ಬಾಲಕ ನರಳಾಡಿ ಅಸುನೀಗಿದ್ದಾನೆ ಎಂದು ತಿಳಿದು ಬಂದಿದೆ.
ಇನ್ನು ಹಾಸ್ಟೆಲ್ ವಾರ್ಡನ್ ಮೇಲೆಯೂ ಈ ಬಾಲಕ ಹಲ್ಲೆ ಮಾಡಿದ್ದು, ಬಳಿಕ ಸ್ಥಳದಿಂದ ಪರಾರಿಯಾಗಿದ್ದಾನೆ. ಇತ್ತ ಹಲ್ಲೆಗೊಳಗಾಗಿ ಗಾಯಗೊಂಡಿದ್ದ ಮಕ್ಕಳನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.
ಇತ್ತ ವಿಷಯ ತಿಳಿದು ಸ್ಥಳಕ್ಕೆ ಬಂದ ಮೃತ ಬಾಲಕನ ಪಾಲಕರ ಅಕ್ರಂದನ ಮುಗಿಲು ಮುಟ್ಟಿದೆ. ಡ್ರಗ್ ಅಡಿಕ್ಟ್ ಆಗಿ ಕೊಲೆ ಮಾಡಿರಬಹುದು ಎಂದು ಮೃತನ ಪೋಷಕರು ಗಂಭೀರ ಆರೋಪ ಮಾಡಿದ್ದಾರೆ. ಇದಕ್ಕೆ ಶಾಲಾ ಆಡಳಿತ ಮಂಡಳಿಯೇ ನೇರ ಹೊಣೆ ಎಂದು ಆರೋಪಿಸಿದ್ದಾರೆ.
ರಾಡ್‌ನಿಂದ ಹೊಡೆದಿದ್ದಾನೆ ಎಂದು ಶಾಲಾ ಆಡಳಿತ ಮಂಡಳಿ ಹೇಳುತ್ತಿದೆ. ಆದರೆ, ಚಾಕುವಿನಿಂದ ಚುಚ್ಚಿರುವ ಅನುಮಾನ ಇದೆ. ಇಷ್ಟೊಂದು ಭಯಾನಕವಾಗಿ ಅಷ್ಟೂ ಜನರ ಮೇಲೆ ಹಲ್ಲೆ ಮಾಡೋದಕ್ಕೆ ಹೇಗೆ ಸಾಧ್ಯ? ಆರೋಪಿ ಬಾಲಕ ಡ್ರಗ್ ಅಡಿಕ್ಟ್ ಆಗಿರಬಹುದು ಎಂದು ಆರೋಪ ಮಾಡಿದ್ದಾರೆ.
ಈ ಸಂಬಂಧ ಬಳ್ಳಾರಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಾಲಕರಾಗಿರುವುದರಿಂದ ಮುಂದಿನ ಕಾನೂನು ಕ್ರಮದ ಬಗ್ಗೆ ಪೊಲೀಸ್ ಅಧಿಕಾರಿಗಳು ಚರ್ಚಿಸಿ ಕ್ರಮ ತೆಗೆದುಕೊಂಡಿದ್ದಾರೆ.
Related









