CrimeNEWSನಮ್ಮಜಿಲ್ಲೆ

8ಕಿಮೀ BMTC ಬಸ್‌ ಹಿಂಬಾಲಿಸಿಕೊಂಡು ಬಂದು ಚಾಲಕನ ಮೇಲೆ ಹಲ್ಲೆಮಾಡಿ ಪೊಲೀಸರ ಅತಿಥಿಯಾದ ಬೈಕ್‌ ಸವಾರ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನನ್ನ ಬೈಕ್‌ಗೆ ಡಿಕ್ಕಿ ಹೊಡೆದಿದ್ದೀಯ ಎಂದು ಆರೋಪಿಸಿ ಸಿನಿಮೀಯ ರೀತಿಯಲ್ಲಿ ಹಿಂಬಾಲಿಸಿಕೊಂಡು ಹೋಗಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಬಸ್ ಚಾಲಕನ ಮೇಲೆ ಬೈಕ್ ಸವಾರ ಹಲ್ಲೆ ಮಾಡಿರುವ ಘಟನೆ ನಗರದ ಮೈಸೂರು ರಸ್ತೆಯ ಹಳೆಗುಡ್ಡದಹಳ್ಳಿ ಬಳಿ ನಡೆದಿದೆ.

ಆರೋಪಿಯನ್ನು ಮಲ್ಲೇಶ್ವರಂ ನಿವಾಸಿ ಕಮಲ್ ಸಿಂಗ್ (36) ಎಂದು ಗುರುತಿಸಲಾಗಿದೆ. ಭಾನುವಾರ ರಾತ್ರಿ 8 ಗಂಟೆ ಸುಮಾರಿಗೆ ಈತ ಬಿಎಂಟಿಸಿ ಚಾಲಕರ ಮೇಲೆ ಹಲ್ಲೆ ಮಾಡಿದ್ದಾನೆ.

ದೀಪಾಂಜಲಿನಗರದ ಬಿಎಂಟಿಸಿ ಘಟಕ 16ರ ಕೆಎ-47ಎಫ್4034 ಬಸ್‌ 60ಅ/8 ವಿಜಯನಗರ-ಜಯನಗರದ ನಡುವೆ ಬಸ್‌ ಸಂಚಾರ ಮಾಡುತ್ತಿದ್ದ ವೇಳೆ ಚಾಲಕ ಮುರ್ತುಜಾ ಸಾಬ್ ಅವರ ಮೇಲೆ ಹಲ್ಲೆ ನಡೆದಿದೆ.

ಮಲ್ಲೇಶ್ವರಂನಲ್ಲಿ ಬೈಕ್‌ಗೆ ಬಿಎಂಟಿಸಿ ಬಸ್ ತಾಗಿದೆ. ಇದರಿಂದ ರೊಚ್ಚಿಗೆದ್ದ ಸವಾರ ಚಾಲಕನ ಜತೆ ಕಿರಿಕ್ ಮಾಡಿಕೊಂಡಿದ್ದಾನೆ. ಬಳಿಕ ಅಲ್ಲಿಂದ 8 ಕಿಮೀ ಹಿಂಬಾಲಿಸಿಕೊಂಡು ಬಂದು ಗುಡ್ದದಹಳ್ಳಿಯ ಸಿಗ್ನಲ್‌ನಲ್ಲಿ ಬಸ್ ನಿಲ್ಲುತ್ತಿದ್ದಂತೆ ಬಸ್‌ ಹತ್ತಿ ಚಾಲಕನ ಮೇಲೆ ಹಲ್ಲೆ ಮಾಡಿದ್ದಾನೆ.

ಸದ್ಯ ಚಾಲಕ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಪಿಯನ್ನು  ಪೊಲೀಸರು ಬಂಧಿಸಿದ್ದಾರೆ. ಘಟನೆ ಸಂಬಂಧ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ ಮೂರು ತಿಂಗಳಲ್ಲಿ 6 ಹಲ್ಲೆ ಪ್ರಕರಣ ನಡೆದಿದ್ದು, ನವೆಂಬರ್ ತಿಂಗಳಲ್ಲಿ ನಡೆದ ಮೊದಲ ಘಟನೆ ಇದಾಗಿದೆ.

ಇನ್ನು ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸುದ್ದಿಗಾರರೊಂದಿಗೆ ಮಾತನಾಡಿ, ಕಳೆದ 3 ಪ್ರಕರಣಗಳಲ್ಲಿ 0.01% ರಷ್ಟೂ ನಮ್ಮ ನೌಕರರ ತಪ್ಪಿರಲಿಲ್ಲ. ಚಾಲಕ, ನಿರ್ವಾಹಕರ ಮೇಲೆ ದುಂಡಾ ವರ್ತನೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ನಾನು ಈಗಾಗಲೇ ಎಂಡಿಯವರಿಗೆ ಸೂಚನೆ ಕೊಟ್ಟಿದ್ದೇನೆ. ಕಠಿಣ ಕ್ರಮ ಜರುಗಿಸಲು ಸೂಚಿಸಲಾಗಿದೆ.

ಅಲ್ಲದೆ ನಿನ್ನೆ ಅಂದರೆ ಭಾನುವಾರ ನ.10ರ ರಾತ್ರಿ 8ಗಂಟೆ ಸುಮಾರಿಗೆ ನಡೆದಿರುವ ಹಲ್ಲೆ ಬಗ್ಗೆ ಬಗ್ಗೆ ತಿಳಿದುಕೊಂಡು ಇದರಲ್ಲಿ ಯಾರ ತಪ್ಪಿದೆಯೋ ಅವರ ವಿರುದ್ಧ ಕಾನೂನು ರೀತಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು? 8ಕಿಮೀ BMTC ಬಸ್‌ ಹಿಂಬಾಲಿಸಿಕೊಂಡು ಬಂದು ಚಾಲಕನ ಮೇಲೆ ಹಲ್ಲೆಮಾಡಿ ಪೊಲೀಸರ ಅತಿಥಿಯಾದ ಬೈಕ್‌ ಸವಾರ ಸರಿ ಸಮಾನ ವೇತನಕ್ಕೆ ಅಡ್ಡಗಾಲು ಹಾಕುವುದನ್ನು ಈಗಲಾದರೂ ಬಿಡಿ- ಸಾರಿಗೆ ಅಧಿಕಾರಿಗಳು-ನೌಕರರ ಆಗ್ರಹ ತೆರಿಗೆ ಬಾಕಿ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗಹಾಕಿ ವಸೂಲಿ ಮಾಡಿ: ತುಷಾರ್ ಗಿರಿನಾಥ್ ಅಂಗನವಾಡಿ ನೌಕರರ ಸರ್ಕಾರಿ ನೌಕರರಾಗಿ ಪರಿಗಣಿಸಿ: ಹೈಕೋರ್ಟ್ ತೀರ್ಪಿನಿಂದ ಕರ್ನಾಟಕದ ಅಂಗನವಾಡಿ ನೌಕರರಿಗೂ ಬಲ ವೀರವನಿತೆ ಒನಕೆ ಓಬವ್ವ ಜಯಂತಿ: ಮಹಿಳೆಯರು ಶೌರ್ಯ, ಧೈರ್ಯ ಬೆಳೆಸಿಕೊಳ್ಳಿ-ಸಚಿವ ಮುನಿಯಪ್ಪ ಮೈಸೂರಿನಲ್ಲಿ ಸಚಿವರಿಗೆ ಕಪಾಳ ಮೋಕ್ಷ: ಎಚ್‌ಡಿಕೆ ಆರೋಪ ಸುಳ್ಳು ಎಂದ ಡಿಸಿಎಂ ಶಿವಕುಮಾರ್‌ ಮುಡಾ ಪ್ರಕರಣದ ಹೈಕೋರ್ಟ್‌ ತೀರ್ಪಿನ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಸಚಿವ ಜಮೀರ್‌ ವಿರುದ್ಧ ಕ್ರಮಕ್ಕೆ ರಾಜ್ಯಾಪಾಲರ ಸೂಚನ...