Please assign a menu to the primary menu location under menu

NEWSನಮ್ಮಜಿಲ್ಲೆನಮ್ಮರಾಜ್ಯ

ಜ.5ರಂದು ಇಪಿಎಸ್ ಪಿಂಚಣಿದಾರರ 84ನೇ ಮಾಸಿಕ ಸಭೆ: ನಂಜುಂಡೇಗೌಡ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಸ್ಯಕಾಶಿ ಲಾಲ್ ಬಾಗ್ ಆವರಣದಲ್ಲಿ 84ನೇ ಇಪಿಎಸ್ ಪಿಂಚಣಿದಾರರ ಮಾಸಿಕ ಸಭೆ ಇದೇ ಜನವರಿ 5ರ ಭಾನುವಾರ ಹಮ್ಮಿಕೊಳ್ಳಲಾಗಿದೆ ಎಂದು ಬಿಎಂಟಿಸಿ & ಕೆಎಸ್‌ಆರ್‌ಟಿಸಿ ನಿವೃತ್ತ ನೌಕರರ ಸಂಘಟನೆಯ ಅಧ್ಯಕ್ಷ ನಂಜುಂಡೇಗೌಡ ತಿಳಿಸಿದ್ದಾರೆ.

2024ನೇ ಇಸವಿ ಕಾಲಗರ್ಭ ಸೇರಿದ್ದು, ನಿವೃತ್ತರ ಪಾಲಿಗೆ ನಿರಾಶದಾಯಕವಾಗಿತ್ತು. ಕಳೆದ ವಷ೯ ದೇಶಾದ್ಯಂತ ಲಕ್ಷಾಂತರ ಇಪಿಎಸ್ ನಿವೃತ್ತರು ಇಹಲೋಕ ತ್ಯಜಿಸಿದ್ದು, ಇಪಿಎಫ್ಒ ಅಧಿಕಾರಿಗಳಿಗೆ ಯಾವುದೇ ಕನಿಕರ ಇಲ್ಲ. ನಿವೃತ್ತರ ಸಾವನ್ನು ಸಂಭ್ರಮಿಸುತ್ತಾರೆ. ಇನ್ನೇನಿದ್ದರೂ 2025 ನೂತನ ವರ್ಷದಲ್ಲಿ ನಾವೆಲ್ಲರೂ ಜಾಗೃತರಾಗಿ, ಆತ್ಮಸ್ಥೈರ್ಯ ಕಳೆದುಕೊಳ್ಳದೆ, ಭರವಸೆ ಹಾಗೂ ನಂಬಿಕೆ ಇಟ್ಟು, ಹೋರಾಟವನ್ನು ತೀವ್ರಗೊಳಿಸಿ, ಮುಂದುವರಿಸೋಣ.

ಕಳೆದ 2024ರ ಡಿ. 27ರಂದು, ಇಪಿಎಫ್ಒ ಕಚೇರಿ ಆವರಣದಲ್ಲಿ ಇಪಿಎಸ್ ನಿವೃತ್ತರ ಶಾಂತಿಯುತ ಪ್ರತಿಭಟನೆಗೆ ಕರೆ ನೀಡಲಾಗಿತ್ತು. ಕೇಂದ್ರ ಹಾಗೂ ರಾಜ್ಯ ಸರ್ಕಾರವು ಮಾಜಿ ಪ್ರಧಾನಮಂತ್ರಿ ಮನಮೋಹಸಿಂಗ್ ಅವರ ನಿಧನದ ಗೌರವಾರ್ಥ ಅಂದು ಸಾರ್ವತ್ರಿಕ ರಜೆ ಘೋಷಣೆ ಮಾಡಿ, ಶೋಕಾಚರಣೆಯ ಈ ಸಂದರ್ಭದಲ್ಲಿ, ನಮ್ಮ ಪ್ರತಿಭಟನೆಯನ್ನು ಕೈ ಬಿಡಲಾಯಿತು.

ರಾಷ್ಟ್ರೀಯ ಸಂಘರ್ಷ ಸಮಿತಿ ಮುಖ್ಯಸ್ಥ ಕಮಾಂಡರ್ ಅಶೋಕ್ ರಾಹುತ್ ಅವರು ಕಳೆದೊಂದು ವಾರದಿಂದ ಕರ್ನಾಟಕ ಪ್ರವಾಸ ಕೈಗೊಂಡು, ಮೈಸೂರು, ತುಮಕೂರು ಹಾಗೂ ಇಳಕಲ್ ನಗರಗಳಲ್ಲಿ 3 ಬೃಹತ್ ಇಪಿಎಸ್ ನಿವೃತ್ತರ ಸಮಾವೇಶವನ್ನು ಉದ್ಘಾಟಿಸಿ, ಮಾತನಾಡಿದರು. ಈ ವೇಳೆ ನೂತನ ವರ್ಷದ ಮೊದಲ ಒಂದೂವರೆ ತಿಂಗಳಿನಲ್ಲಿಯೇ ಕೇಂದ್ರ ಸರ್ಕಾರವು ನಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ, ಕ್ರಮವಹಿಸಲಿದೆ ಎಂದು ತಿಳಿಸಿದ್ದಾರೆ. ಆದರೂ ನಿವೃತ್ತರು ಇನ್ನೂ ನಿಟ್ಟುಸಿರು ಬಿಟ್ಟಿಲ್ಲ.

ಬಜೆಟ್ ಅಧಿವೇಶನ ಫೆಬ್ರವರಿ 01, 2025 ರಿಂದ ಪ್ರಾರಂಭವಾಗಲಿದ್ದು, ಈ ಬಗ್ಗೆ ಕೇಂದ್ರ ಕಾರ್ಮಿಕ ಹಾಗೂ ಉದ್ಯೋಗ ಖಾತೆಯ(minister for labour & employment) ಸಚಿವ ಮುನ್ಸುಖ್ ಮಾಂಡವೀಯ ಅವರು ಇಪಿಎಸ್ ನಿವೃತ್ತರಿಗೆ ಸಂಬಂಧಿಸಿದ ಕನಿಷ್ಠ ಹೆಚ್ಚುವರಿ ಪಿಂಚಣಿ ಹಾಗೂ ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ಪ್ರಕಾರ ಅಧಿಕ ಪಿಂಚಣಿ ಈ ಎರಡು ಪ್ರಸ್ತಾವನೆಗಳನ್ನು ಕೇಂದ್ರ ಹಣಕಾಸು ಸಚಿವಾಲಯಕ್ಕೆ ಕಳುಹಿಸಿ, ಒಪ್ಪಿಗೆ ಪಡೆದು ಅಧಿವೇಶದಲ್ಲಿ ಮಂಡಿಸುವ ಸಾಧ್ಯತೆ ದಟ್ಟವಾಗಿದೆ.

ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಕೊಳ್ಳುವುದಕ್ಕೆ ಜ.5ರ ಮಾಸಿಕ ಸಭೆಗೆ ಎಲ್ಲರೂ ಬನ್ನಿ. ನಿಮ್ಮ ಜತೆಗೆ ಎನ್ಎಸಿ ಮುಖ್ಯ ಸಂಯೋಜಕ ರಮಾಕಾಂತ್ ನರಗುಂದ ಹಾಗೂ ಜಿಎಸ್‌ಎಮ್ ಸ್ವಾಮಿ, ಚಿಕ್ಕಬಳ್ಳಾಪುರದ ಕೆಎಸ್ಆರ್‌ಟಿಸಿ ಕ್ಷೇಮಾಭಿವೃದ್ಧಿ ಟ್ರಸ್ಟ್ ಪದಾಧಿಕಾರಿಗಳು, ಮುಖಂಡರು ಭಾಗವಹಿಸಲಿದ್ದಾರೆ.

ತಾವೆಲ್ಲರೂ ವಿಶ್ವ ಪಾರಂಪರಿಕ ಲಾಲ್ ಬಾಗ್ ಹೂತೋಟದಲ್ಲಿ ವಾಯು ವಿಹಾರ ನಡೆಸಿ, ತಮ್ಮ ಹಳೆಯ ಸ್ನೇಹಿತರ ಭೇಟಿ, ವಿಚಾರ ವಿನಿಮಯ ಹಾಗೂ ಈ ಎಲ್ಲ ಅಂಶಗಳ ಬಗ್ಗೆ ಚರ್ಚಿಸೋಣ. ಎಲ್ಲ ನಿವೃತ್ತ ನೌಕರರು ಜ.5ರ ಭಾನುವಾರ ಬೆಳಗ್ಗೆ 8 ಗಂಟೆಗೆ ಬರಬೇಕು ಎಂದು ನಂಜುಂಡೇಗೌಡ ಮನವಿ ಮಾಡಿದ್ದಾರೆ.

Leave a Reply

error: Content is protected !!
LATEST
NWKRTC: ನಿರ್ವಾಹಕ ಆತ್ಮಹತ್ಯೆಗೆ ಯತ್ನ- ಅಮಾನತು ಮಾಡುವ ಉದ್ದೇಶದಿಂದಲೇ ಮೆಮೋ ಕೊಟ್ಟ ಆರೋಪ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ನೈರ್ಮಲ್ಯದ ಕೊರತೆ: ಕಸ ಮುಕ್ತ ಅಭಿಯಾನ ಕನ್ನಡ ನುಡಿ ಪ್ರತಿಯೊಬ್ಬ ಕನ್ನಡಿಗನ ಉಸಿರಾಗಬೇಕು: ಅಂದಾನೆಪ್ಪ ವಿಭೂತಿ ಸರ್ವೇ ನಂ-97 ಪುಸ್ತಕ ಮನುಷ್ಯನ ಬದುಕಿನ ಸಂಕಟಗಳಿಗೆ ಕನ್ನಡಿ ಇದ್ದಂತೆ: ರಘುನಾಥ ನ್ಯೂಡೆಲ್ಲಿ: ದಲೈವಾಲ ಪ್ರಾಣಕ್ಕೆ ಕುತ್ತು ಬಂದರೆ ದೇಶದ ರೈತರು ಕೇಂದ್ರ ಸರ್ಕಾರದ ಮರಣ ಶಾಸನ ಬರೆಯಬೇಕಾಗುತ್ತದೆ ಎಚ್ಚರ ಜ್ವರ ಬಂದಾಗ ಎಳನೀರು ಕುಡಿಯುವುದು ಒಳ್ಳೆಯದೇ..ಏಕೆಂದರೆ? ಬಿಜೆಪಿ ಸರ್ಕಾರದಲ್ಲಿ ನಿರಂತರವಾಗಿ ವರ್ಷಕ್ಕೆ ಎರಡೆರಡು ಬಾರಿ ಬಸ್ ಟಿಕೆಟ್‌ ದರ ಹೆಚ್ಚಳ: ಪಟ್ಟಿ ರಿಲೀಸ್​ ಮಾಡಿದ ಸಾರಿಗ... KSRTC: ಅಧಿಕಾರದಲ್ಲಿದ್ದಾಗ ಅಭಿವೃದ್ಧಿ ಮರೆತಿದ್ದ ಬಿಜೆಪಿಯವರು ಈಗ ಬಸ್ ದರ ಹೆಚ್ಚಳ ಖಂಡಿಸುತ್ತಾರೆ- ರಾಮಲಿಂಗಾರೆಡ್ಡಿ APSRTCಯಲ್ಲೂ ಶಕ್ತಿ ಯೋಜನೆ ಶೀಘ್ರ ಜಾರಿ: ಬೆಂಗಳೂರಿಗೆ ಭೇಟಿ ನೀಡಿದ ಸಾರಿಗೆ ಸಚಿವ ಮಂಡಿಪಲ್ಲಿ ರಾಮಪ್ರಸಾದ್ ರೆಡ್ಡಿ ನಿ... ಜ.19ರಂದು ರೈತರ ಮಕ್ಕಳಿಗಾಗಿ ಉದ್ಯೋಗ ಮೇಳ ಆಯೋಜನೆ- 50 ಕಂಪನಿಗಳು ಭಾಗಿ