NEWSನಮ್ಮರಾಜ್ಯಸಿನಿಪಥ

ಕನ್ನಡ ಸಿನಿಮಾ ರಂಗದ ಖ್ಯಾತ ನಟಿ 87 ವರ್ಷದ ಲೀಲಾವತಿ ಇನ್ನು ನೆನಪು ಮಾತ್ರ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಟಿ 87 ವರ್ಷದ ಲೀಲಾವತಿ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ಸಂಜೆ ನಿಧನರಾಗಿದ್ದಾರೆ.

ಹಲವು ದಿನಗಳಿಂದ ಅವರ ಆರೋಗ್ಯದಲ್ಲಿ ಏರುಪೇರಾಗುತ್ತಿತ್ತು. ಹೀಗಾಗಿ ಅವರಿಗೆ ಮನೆಯಲ್ಲಿಯೇ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿತ್ತು. ಈ ನಡುವೆ ಮತ್ತೆ ಅವರಲ್ಲಿ ಆರೋಗ್ಯ ಸಮಸ್ಯೆ ಹೆಚ್ಚಾಗಿ ಕಾಣಿಸಿಕೊಂಡಿದ್ದರಿಂದ ಅವರನ್ನು ಕೂಡಲೇ ನೆಲಮಂಗಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಮಧ್ಯಾಹ್ನ ಲೋ ಬಿಪಿ ಸಮಸ್ಯೆಯಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾದರು.

ಲೀಲಾವತಿ ಅವರು ಕೆಲವು ದಿನಗಳಿಂದ ಅನಾರೋಗ್ಯ ಕಾರಣದಿಂದಾಗಿ ಹಾಸಿಗೆ ಹಿಡಿದಿದ್ದರು. ಅವರ ಯೋಗ ಕ್ಷೇಮ ವಿಚಾರಿಸಲು ಖುದ್ದು ಸಿಎಂ ಸಿದ್ದರಾಮಯ್ಯ ನಟಿ ಲೀಲಾವತಿ ಮನೆಗೆ ಭೇಟಿ ನೀಡಿದ್ದರು. ಇದಕ್ಕೂ ಮೊದಲೇ ನಟ ದರ್ಶನ್, ಗಿರಿಜಾ ಲೋಕೇಶ್ ಸೇರಿದಂತೆ ಅನೇಕರು ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯ ತೋಟ ಮನೆಗೆ ಭೇಟಿ ನೀಡಿ ಲೀಲಾವತಿ ಅವರ ಆರೋಗ್ಯ ವಿಚಾರಿಸಿದ್ದರು.

Leave a Reply

error: Content is protected !!
LATEST
ಭ್ರಷ್ಟಾಚಾರ, ಕಮಿಷನ್‌ ದಂಧೆ ನಿಲ್ಲಿಸಿದರೆ ಗ್ಯಾರಂಟಿ ಯೋಜನೆಗಳಿಗೂ ಕೊಟ್ಟು ಹಣ ಉಳಿಯುತ್ತದೆ : ಎಎಪಿ ಜೂ.24ರಂದು ಶಿವಮೊಗ್ಗದಲ್ಲಿ ರಾಷ್ಟ್ರ, ರಾಜ್ಯ ರೈತ ಮುಖಂಡರ ಸಮಾವೇಶ: ಕುರುಬೂರ್ ಶಾಂತಕುಮಾರ್ ಸಂತ್ರಸ್ತೆ ಅಪರಹರಣ ಪ್ರಕರಣ: ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ಮಂಜೂರು KSRTCಯಿಂದ 300ಕ್ಕೂ ಹೆಚ್ಚು ಹೊಸ ಮಾರ್ಗಗಳಲ್ಲಿ ಬಸ್‌ ಓಡಾಟ: ಸಚಿವ ರಾಮಲಿಂಗಾರೆಡ್ಡಿ BMTC: 50ಕ್ಕೂ ಹೆಚ್ಚು ಎಲೆಕ್ಟ್ರಿಕ್ ಬಸ್​​ಗಳ ಚಾಲಕರಿಗೆ ಗೇಟ್‌ಪಾಸ್‌ ಅತ್ಯಾಚಾರ ಆರೋಪಿ ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣನ ಎಸ್‌ಐಟಿ ಕಸ್ಟಡಿ ಅಂತ್ಯ ಪೆಟ್ರೋಲ್‌, ಡೀಸೆಲ್‌ ದರ ಏರಿಕೆ ವಿರೋಧಿಸಿ ನಾಳೆ ರಾಜ್ಯಾದ್ಯಂತ ಎಎಪಿ ಪ್ರತಿಭಟನೆ ನಟ ದರ್ಶನ್‌ ಸ್ಥಿತಿಗೆ ಮರುಗಿ ಅಭಿಮಾನಿ ಅನ್ನನೀರು ಬಿಟ್ಟು ಆತ್ಮಹತ್ಯೆಗೆ ಶರಣು? KSRTC ‘ಅಶ್ವಮೇಧ’ಗಳಿಂದ ಸಂಸ್ಥೆಗೆ ಶೇ.10ಕ್ಕೂ ಹೆಚ್ಚು ಲಾಭ : ಸಚಿವ ರಾಮಲಿಂಗಾರೆಡ್ಡಿ ಅತೀ ಶೀಘ್ರದಲ್ಲೇ NWKRTC ಒಡಲು ಸೇರಲಿವೆ 350 ಹೊಸ ಎಲೆಕ್ಟ್ರಿಕ್​ ಬಸ್‌ಗಳು