Please assign a menu to the primary menu location under menu

NEWSನಮ್ಮಜಿಲ್ಲೆರಾಜಕೀಯ

ಬೆಂ.ಗ್ರಾಮಾಂತರ ಜಿಲ್ಲೆಯಲ್ಲಿ 8.85 ಲಕ್ಷ ಮತದಾರರು: ಜಿಲ್ಲಾಧಿಕಾರಿ ಡಾ.ಶಿವಶಂಕರ್

ವಿಜಯಪಥ ಸಮಗ್ರ ಸುದ್ದಿ
  • ಮುಂಬರುವ ಲೋಕಸಭಾ ಚುನಾವಣೆಯ ಅಂತಿಮ ಮತದಾರರ ಪಟ್ಟಿ ಪ್ರಕಟ

ಬೆಂಗಳೂರು ಗ್ರಾಮಾಂತರ: ಮುಂಬರುವ ಲೋಕಸಭಾ ಚುನಾವಣೆಗೆ ಸಿದ್ಧತೆ ನಡೆಸಿದ್ದು ಅಂತಿಮ ಮತದಾರರ ಪಟ್ಟಿಯಲ್ಲಿ 438024 ಪುರುಷ ಮತದಾರರು, 446904 ಮಹಿಳಾ ಮತದಾರರು, 140 ಇತರೆ ಮತದಾರರು ಸೇರಿ ಒಟ್ಟು 885068 ಮತದಾರರಿದ್ದಾರೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಎನ್.ಶಿವಶಂಕರ್ ಹೇಳಿದರು.

ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ರಾಜಕೀಯ ಪಕ್ಷಗಳ ಸಭೆ ನಡೆಸಿದ ನಂತರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಪ್ರಸಕ್ತ 2024ರ ವಾರ್ಷಿಕ ಮತದಾರರ ಪಟ್ಟಿಯ ಪರಿಷ್ಕರಣೆ ಸಂದರ್ಭದಲ್ಲಿ 1ನೇ ಜನವರಿ, 1ನೇ ಏಪ್ರಿಲ್, 1ನೇ ಜುಲೈ ಮತ್ತು 1ನೇ ಅಕ್ಟೋಬರ್-2024ಕ್ಕೆ 18 ವರ್ಷ ತುಂಬುವ ಯುವ ಮತದಾರರು ಮತದಾರರ ಪಟ್ಟಿಗೆ ಹೆಸರು ಸೇರಿಸಲು ಮುಂಗಡ ಅರ್ಜಿ ಸಲ್ಲಿಸಲು ಅವಕಾಶವಿದೆ. ಇದರಿಂದ ನೋಂದಣಿಗಾಗಿ ಮುಂದಿನ ವರ್ಷದ ವಿಶೇಷ ಪರಿಷ್ಕರಣೆಗೆ ಕಾಯುವುದನ್ನು ತಪ್ಪಿಸಲಾಗಿದೆ ಮತ್ತು ಮಧ್ಯಂತರ ಅವಧಿಯಲ್ಲಿ ನಡೆಯುವ ಚುನಾವಣೆಗಳಲ್ಲಿ ಮತಚಲಾವಣೆಗೆ ಅವಕಾಶ ದೊರೆಯಲಿದೆ.

ಮತದಾರರ ಗುರುತಿನ ಚೀಟಿಯನ್ನು ಸಂಬಂಧಪಟ್ಟ ಮತದಾರರಿಗೆ ನೇರವಾಗಿ ಅಂಚೆ ಮೂಲಕ ಕಳುಹಿಸಲಾಗುವುದು. ರಾಜಕೀಯ ಪಕ್ಷಗಳಿಗೆ ಸಂಬಂಧಿಸಿದಂತೆ ರಾಜಕೀಯ ಪಕ್ಷಗಳು, ಮಾನ್ಯತೆ ಪಡೆದ ರಾಜಕೀಯ ಪಕ್ಷಗಳು, ಬೂತ್ ಲೆವೆಲ್ ಏಜೆಂಟ್ (BLA) ಗಳನ್ನು ನೇಮಿಸಲು ಅಗತ್ಯ ಕ್ರಮಕೈಗೊಳ್ಳಬೇಕಾಗಿದೆ. ಮತದಾರರ ಅಂತಿಮ ಪಟ್ಟಿ ಯು ಪ್ರತಿ ವರ್ಷವು ನಿರಂತರವಾಗಿ ನಡೆಯಲಿದೆ. ಇದರಂತೆ 2024ರ ಮತದಾರರ ಪಟ್ಟಿ ಅಂತಿಮ ಪಟ್ಟಿಯ ಪ್ರತಿಯನ್ನು ಪ್ರಕಟಿಸಲಾಗಿದೆ.

ಜಿಲ್ಲೆಯಲ್ಲಿ ಪ್ರಕಟಿಸಲಾಗಿರುವ ಅಂತಿಮ ಮತದಾರರ ಪಟ್ಟಿಯಲ್ಲಿ ಜಿಲ್ಲೆಯ ನಾಲ್ಕು ತಾಲೂಕುಗಳಿಂದ 8,85,068 ಮತದಾರರು ಇದ್ದಾರೆ. ಇದರಲ್ಲಿ 4,38,024 ಪುರುಷರು, 4,46,904 ಮಹಿಳೆಯರು ಹಾಗೂ 140 ಇತರೆ ಮತದಾರರು ಇದ್ದಾರೆ. ಒಟ್ಟು ಮತದಾರರ ಸಂಖ್ಯೆಯಲ್ಲಿ 18 ರಿಂದ 19 ವರ್ಷದೊಳಗಿನ 19,090 ಯುವ ಮತದಾರರು. 80 ವರ್ಷ ಮೇಲ್ಪಟ್ಟ 21,425 ಹಿರಿಯ ಮತದಾರರು, 12,417 ಅಂಗವಿಕಲ ಮತದಾರರು ಹಾಗೂ 124 ಸೇವಾ ಮತದಾರರು ಇದ್ದಾರೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.

ಜಿಲ್ಲೆಯ 4 ತಾಲೂಕುಗಳಲ್ಲಿನ ಮತದಾರರ ಪೈಕಿ ಹೆಚ್ಚಿನ ಪ್ರಮಾಣದಲ್ಲಿ ಮಹಿಳಾ ಮತದಾರರೇ ಇದ್ದಾರೆ. ದೊಡ್ಡಬಳ್ಳಾಪುರದಲ್ಲಿ ಒಟ್ಟು 2,16,824 ಮತದಾರರಿದ್ದು, ಅದರಲ್ಲಿ 1,09,420 ಮಹಿಳಾ ಮತದಾರರು ಹಾಗೂ 1,07,403 ಪುರುಷ ಮತದಾರರಿದ್ದಾರೆ. ಹೊಸಕೋಟೆಯಲ್ಲಿ ಒಟ್ಟು 2,35,907 ಮತದಾರರಿದ್ದು, ಅದರಲ್ಲಿ 1,18,815 ಮಹಿಳೆ ಹಾಗೂ 1,17,071 ಪುರುಷ ಮತದಾರರು ಇದ್ದಾರೆ.

ದೇವನಹಳ್ಳಿಯಲ್ಲಿ ಒಟ್ಟು 2,13,408 ಮತದಾರರಿದ್ದು, 1,07,640 ಮಹಿಳಾ ಹಾಗೂ 1,05,753 ಪುರುಷ ಮತದಾರರಿದ್ದಾರೆ. ನೆಲಮಂಗಲದಲ್ಲಿ 2,18,929 ಮತದಾರರ ಪೈಕಿ 1,11,029 ಮಹಿಳೆ ಹಾಗೂ 1,07,797 ಪುರುಷ ಮತದಾರರಿದ್ದಾರೆ. ಜಿಲ್ಲೆಯಲ್ಲಿ ಮತದಾರರ ಲಿಂಗಾನುಪಾತದಲ್ಲಿ 1 ಸಾವಿರ ಪುರುಷರಿಗೆ 1016 ಮಹಿಳೆಯರಿದ್ದಾರೆ. ಅದರಲ್ಲಿ ದೊಡ್ಡಬಳ್ಳಾಪುರದಲ್ಲಿ 1011, ಹೊಸಕೋಟೆಯಲ್ಲಿ 1013, ದೇವನಹಳ್ಳಿ 1013 ಹಾಗೂ ನೆಲಮಂಗಲದಲ್ಲಿ ಅತಿ ಹೆಚ್ಚು 1025 ಲಿಂಗಾನುಪಾತ ಕಂಡುಬಂದಿದೆ.

ಜಿಲ್ಲೆಯಲ್ಲಿ 4 ವಿಧಾನಸಭಾ ಕ್ಷೇತ್ರಗಳಿವೆ. ಇದರಲ್ಲಿ ಒಟ್ಟಾಗಿ 1137 ಮತಗಟ್ಟೆಗಳಿವೆ. ಅದರಲ್ಲಿ ದೊಡ್ಡಬಳ್ಳಾಪುರ 276, ಹೊಸಕೋಟೆ 293, ದೇವನಹಳ್ಳಿ 292 ಹಾಗೂ ನೆಲಮಂಗಲ್ಲಿ 276 ಮತಗಟ್ಟೆಗಳಿದೆ. ಜಿಲ್ಲೆಯಲ್ಲಿರುವ ಮತದಾರರ ಅಂತಿಮ ಪಟ್ಟಿಯನ್ನು ನಾಲ್ಕು ತಾಲೂಕುಗಳ ಮತಗಟ್ಟೆಗಳಲ್ಲಿ, ಮತದಾರ ನೋಂದಣಾಧಿಕಾರಿ ಕಚೇರಿಯಲ್ಲಿ, ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಚೇರಿಯಲ್ಲಿ, ಈ ಕಚೇರಿಗಳಲ್ಲಿ ಸಾರ್ವಜನಿಕರ ಮಾಹಿತಿಗೆ ಪ್ರಕಟಿಸಲಾಗಿದೆ.

ಹೊಸದಾಗಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಮುಂಗಡ ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಎನ್.ಶಿವಶಂಕರ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ಎಚ್‌.ಅಮರೇಶ್ ಉಪಸ್ಥಿತರಿದ್ದರು.

Leave a Reply

error: Content is protected !!
LATEST
ಹೆಂಡತಿ, ಮಾವನ ಕಾಟ: ರೈಲಿಗೆ ತಲೆಕೊಟ್ಟು ಹೆಡ್‌ಕಾನ್‌ಸ್ಟೇಬಲ್ ಆತ್ಮಹತ್ಯೆ 9 ಸಾವಿರ ರೂ. ಲಂಚ ಪ್ರಕರಣ: ಪಿಡಿಒಗೆ 3 ವರ್ಷ ಜೈಲು ಶಿಕ್ಷೆ, 50 ಸಾವಿರ ರೂ.ದಂಡ KSRTC ತುಮಕೂರು: ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿರುವ ಚಾಲಕನಿಗೆ ಧೈರ್ಯ ತುಂಬಿದ ಡಿಸಿ, ಅಧಿಕಾರಿಗಳು KSRTC: ಡಿ.31ರ ಮುಷ್ಕರ ಬೆಂಬಲಿಸುವಂತೆ ಕೂಟಕ್ಕೆ ಜಂಟಿ ಕ್ರಿಯಾ ಸಮಿತಿ ಮನವಿ ಸರ್ಕಾರದ ನಡೆಯೇ  BMTC ಆರ್ಥಿಕವಾಗಿ ಕುಸಿಯಲು ಕಾರಣ: ವರದಿ ಕೊಟ್ಟ CAG KSRTC ಕುಣಿಗಲ್‌: ಹಲ್ಲೆಕೋರರ ವಿರುದ್ಧ ಕ್ರಮ ಜರುಗಿಸದಿರುವುದಕ್ಕೆ ಮನನೊಂದ ಚಾಲಕ ಆತ್ಮಹತ್ಯೆಗೆ ಯತ್ನ KSRTC: ಈ ಅಧಿವೇಶನದಲ್ಲಾದರೂ ಸಿಎಂ ಸರಿ ಸಮಾನ ವೇತನ ಬಗ್ಗೆ ದಿಟ್ಟ ಹೆಜ್ಜೆ ಇಡಲಿ BMTC: ಆಧಾರ್‌ ಕಾರ್ಡ್‌ ಯಾವ ಭಾಷೆಯಲ್ಲೇ ಇರಲಿ ಕರ್ನಾಟಕದ ವಿಳಾಸವಿದ್ದರೆ ಉಚಿತ ಪ್ರಯಾಣ ಹಾವೇರಿ: ಸರ್ಕಾರಿ ಬಸ್ ಹತ್ತಲು ಹೋದ ವೃದ್ಧೆ ಕಾಲುಗಳ ಮೇಲೆ ಹಿಂಬದಿ ಚಕ್ರ ಹರಿದು ಕಾಲುಗಳು ಕಟ್‌ KSRTC ಮಡಿಕೇರಿ: ಸಹೋದ್ಯೋಗಿ ಕಂಡಕ್ಟರ್‌ ಕೊಲ್ಲುವ ಬೆದರಿಕೆ ಹಾಕಿ ಗಾಳಿಯಲ್ಲಿ ಗುಂಡ್ಹಾರಿಸಿದ ಡ್ರೈವರ್‌ ಬಂಧನ