ನಾಳೆ EPS ಪಿಂಚಣಿದಾರರ 90ನೇ ಮಾಸಿಕ ಸಭೆ: ಬಿಎಂಟಿಸಿ & ಕೆಎಸ್‌ಆರ್‌ಟಿಸಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ನಂಜುಂಡೇಗೌಡ

ಬೆಂಗಳೂರು: ಇಪಿಎಸ್ ಪಿಂಚಣಿದಾರರ 90ನೇ ಮಾಸಿಕ ಸಭೆಯನ್ನು ನಾಳೆ ಅಂದರೆ ಜು.6ರ ಭಾನುವಾರ ಲಾಲ್‌ಬಾಗ್ ಆಭರಣದಲ್ಲಿ ಆಯೋಜಿಸಲಾಗಿದೆ ಎಂದು ಬಿಎಂಟಿಸಿ & ಕೆಎಸ್‌ಆರ್‌ಟಿಸಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ನಂಜುಂಡೇಗೌಡ ತಿಳಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಶತಮಾನಗಳ ಭವ್ಯ ಪರಂಪರೆಯನ್ನು ಹೊಂದಿರುವ, ನಡಿಗೆದಾರರ ಸ್ವರ್ಗ ಎಂದು ಕರೆಯುವ, ವಿಶ್ವ ವಿಖ್ಯಾತ ಲಾಲ್‌ಬಾಗ್‌ಗೂ ಇಪಿಎಸ್ ಪಿಂಚಣಿದಾರರಿಗೂ ಅವಿನವಬಾವ ಸಂಬಂಧ, ಈ ಸುಂದರ ಪರಿಸರ ತಾಣದಲ್ಲಿ ಕ್ಷಣ ಕಾಲ ಕಳೆದಲ್ಲಿ, ಬದುಕಿನ ಜಂಜಾಟವನ್ನು ಮರೆತಂತಾಗಿ, ಹಿರಿಯ ಜೀವಗಳಿಗೆ ನವ ಚೇತನದ ಸ್ಫೂರ್ತಿ ಬಂದದಂತಾಗುತ್ತದೆ.
ಇನ್ನು ಕಳೆದ ಜೂ.27ರಂದು ನಗರದ ರಿಚ್ಮಂಡ್ ವೃತ್ತದಲ್ಲಿರುವ ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ಆವರಣದಲ್ಲಿ ನೂರಾರು ಇಪಿಎಸ್ ನಿವೃತ್ತರು ನಡೆಸಿದ ಪ್ರತಿಭಟನೆ ಹಾಗೂ ಮನವಿ ಸಲ್ಲಿಸುವ ಕಾರ್ಯಕ್ರಮ ಅತ್ಯಂತ ಪರಿಣಾಮಕಾರಿಯಾಗಿತ್ತು. ದೇಶಾದ್ಯಂತ ಇರುವ ಇಪಿಎಸ್ ನಿವೃತ್ತರು ಮಾತ್ರವಲ್ಲದೆ ಸಾರ್ವಜನಿಕ ವಲಯದಲ್ಲಿಯೂ ಸಹ ಇದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಎಲ್ಲ ಇಪಿಎಸ್ ನಿವೃತ್ತರಿಗೆ ನಮ್ಮ ಅಭಿನಂದನೆಗಳು.
ಈ ಎಲ್ಲದರ ನಡುವೆ ಸಿಬಿಟಿ ಸಭೆ ಇದೇ ಜುಲೈ 11ರಂದು ನಡೆಯಲಿದ್ದು, ಮುಂಗಾರು ಪಾರ್ಲಿಮೆಂಟ್ ಅಧಿವೇಶನ ಜು. 21ರಿಂದ ಪ್ರಾರಂಭವಾಗಲಿದೆ. ಹೀಗಾಗಿ ಈ ಸಿಬಿಟಿ ಸಭೆ ಹಾಗೂ ಪಾರ್ಲಿಮೆಂಟ್ ಅಧಿವೇಶನದಲ್ಲಿ ಇಪಿಎಸ್ ನಿವೃತ್ತರ ಹೋರಾಟ ಯಾವ ತಿರುವು ಪಡೆಯಲಿದೆ ಎಂಬುದನ್ನು ನಾವು ಕೂಡ ಕಾದು ನೋಡಬೇಕು.
ರಾಷ್ಟ್ರೀಯ ಸಂಘರ್ಷ ಸಮಿತಿ ಬರುವ ಆಗಸ್ಟ್ 3 ರಂದು ತನ್ನ ಕಾರ್ಯಕಾರಿ ಸಮಿತಿ ಸಭೆಯನ್ನು ದೆಹಲಿಯಲ್ಲಿ ಏರ್ಪಡಿಸಿದ್ದು, ಇದಾದ ನಂತರ ಆಗಸ್ಟ್ 4 & 5 ಈ ಎರಡು ದಿನಗಳ ಕಾಲ ಜಂತರ್ ಮಂತರ್‌ನಲ್ಲಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದೆ. ದೇಶಾದ್ಯಂತ ಇರುವ ಎಲ್ಲ ಇಪಿಎಸ್ ನಿವೃತ್ತರು ಈ ಹೋರಾಟದಲ್ಲಿ ಭಾಗವಹಿಸಬೇಕೆಂದು ಕರೆ ನೀಡಲಾಗಿದೆ. ಈ ಮುಷ್ಕರದಲ್ಲಿ ಭಾಗವಹಿಸಲು ಇಚ್ಛಿಸುವ ನಿವೃತ್ತರು ಕೂಡಲೇ ತಮ್ಮ ರೈಲ್ವೆ ಮುಂಗಡ ಟಿಕೆಟ್‌ಗಳನ್ನು ಕಾಯ್ದಿರಿಸಿಕೊಂಡು, ಎನ್ಎಸಿ ಕಾರ್ಯಕಾರಿ ಸಮಿತಿ ಸದಸ್ಯರಿಗೆ ಮಾಹಿತಿ ನೀಡಬೇಕೆಂದು ತಿಳಿಸಿದ್ದಾರೆ.
ಇನ್ನು 78 ಲಕ್ಷ ನಿವೃತ್ತರ ಬದುಕು ಇಂದಿಗೂ ಅತಂತ್ರ ಸ್ಥಿತಿಯಲ್ಲಿದ್ದು, ಇದಕ್ಕೆ ಯಾರು ಕಾರಣ ಎಂದು ಪ್ರಶ್ನಿಸಬೇಕಾಗಿಲ್ಲ. ಇಪಿಎಫ್ಒ ಅಧಿಕಾರಿಗಳ ಧೋರಣೆ, ಅಸಹಕಾರ, ನಿರ್ಲಜ್ಜ ನಡೆ, ಇಪಿಎಸ್ ನಿವೃತ್ತರನ್ನು ಈ ಸ್ಥಿತಿಗೆ ತಂದು ನಿಲ್ಲಿಸಿದೆ ಎಂಬುವುದು ಸ್ಪಷ್ಟ. ಏನೇ ಆಗಲಿ ನಾವೆಲ್ಲರೂ ಒಂದೇ, ಒಗ್ಗಟ್ಟಾಗಿ ನಮ್ಮ ಮುಂದಿನ ಹೋರಾಟದ ಕಾರ್ಯತಂತ್ರಗಳನ್ನು ಸರಿಯಾಗಿ ನಿರೂಪಿಸಿಕೊಂಡು, ನಮ್ಮ ಗುರಿ ಮುಟ್ಟಲು ಪ್ರಯತ್ನಿಸೋಣ ಎಂದು ಕರೆ ನೀಡಿದ್ದಾರೆ.
“Life is only once, there is no rebirth, let us live & let live” ಇನ್ನು ಎನ್ಎಸಿ ರಾಜ್ಯಾಧ್ಯಕ್ಷ ಜಿಎಸ್ಎಂ ಸ್ವಾಮಿ ಅವರು ಈ ಮಾಸಿಕ ಸಭೆಯಲ್ಲಿ ನಿವೃತ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ನಮ್ಮ ಸಂಘದ ಎಲ್ಲ ಪದಾಧಿಕಾರಿಗಳು, ಚಿಕ್ಕಬಳ್ಳಾಪುರ ಕೆಎಸ್‌ಆರ್‌ಟಿಸಿ ಕ್ಷೇಮಾಭಿವೃದ್ಧಿ ಟ್ರಸ್ಟಿನ ಪದಾಧಿಕಾರಿಗಳು, ಸದಸ್ಯರು, ಎಚ್ಎಂಟಿ, ಕಿರ್ಲೋಸ್ಕರ್, ಲಿಡ್ಕರ್, ಎಸ್ಕಾರ್ಟ್ ನಿವೃತ್ತರು ಭಾಗವಹಿಸಲಿದ್ದಾರೆ. ಮುಖಂಡರು ಇತ್ತೀಚಿನ ಎಲ್ಲ ಬೆಳವಣಿಗೆಗಳು ಹಾಗೂ ಮುಂದಿನ ಹೋರಾಟದ ರೂಪರೇಷೆಯ ಬಗ್ಗೆ ಪ್ರಸ್ತಾಪಿಸಲಿದ್ದಾರೆ.
“ಪರಿಸ್ಥಿತಿ ಕೆಡಬಹುದು, ಆದರೆ ಯಾವುದೇ ಕಾರಣಕ್ಕೂ ನಮ್ಮ ಆಲೋಚನೆಗಳು ಕೆಡಬಾರದು”. ಹೀಗಾಗಿ ತಾವೆಲ್ಲರೂ ವಿಶ್ವ ಪಾರಂಪರಿಕ ಲಾಲ್‌ಬಾಗ್ ಹೂದೋಟದಲ್ಲಿ ವಾಯು ವಿಹಾರ ನಡೆಸಿ, ತಮ್ಮ ಹಳೆಯ ಸ್ನೇಹಿತರ ಭೇಟಿ, ವಿಚಾರ ವಿನಿಮಯ ಹಾಗೂ ಈ ಎಲ್ಲ ಅಂಶಗಳ ಬಗ್ಗೆ ಚರ್ಚಿಸೋಣ. ಇದಕ್ಕಾಗಿ ಎಲ್ಲ ನಿವೃತ್ತ ನೌಕರರು ಭಾನುವಾರ ಬೆಳಗ್ಗೆ 8 ಗಂಟೆಗೆ ಹಾಜರಾಗುತ್ತೀರಲ್ಲ. ನೀವು ಭಾಗವಹಿಸುತ್ತೀರಿ ಎಂಬ ನಿರೀಕ್ಷೆಯಲ್ಲಿ ನಾವಿದ್ದೇವೆ ಎಂದು ನಂಜುಂಡೇಗೌಡ ಹೇಳಿದ್ದಾರೆ.
Related

You Might Also Like
ಕುಷ್ಠರೋಗ ಮುಕ್ತ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಿ: ಡಾ.ಪ್ರದೀಪ್ತಾ ಕುಮಾರ್ ನಾಯಕ್
ಬೆಂಗಳೂರು: ಮನುಷ್ಯನ ಆರೋಗ್ಯಕ್ಕೆ ಸಂಬಂಧಿಸಿದಂತೆ ಕುಷ್ಠರೋಗವು ಒಂದು ಬಾಧಿತ ರೋಗವಾಗಿದ್ದು, ಕುಷ್ಠರೋಗ ಮುಕ್ತ ಸಮಾಜ ನಿರ್ಮಿಸಲು ಅಧಿಕಾರಿಗಳು ನಿರಂತರ ಕಾರ್ಯ ಪ್ರವೃತ್ತರಾಗಿರಬೇಕು ಎಂದು ಕೇಂದ್ರ ಮಾನವ ಹಕ್ಕುಗಳ...
NWKRTC: 45 ವರ್ಷದ ಮಹಿಳೆಗೆ ಅನುಕಂಪದ ಆಧಾರದಡಿ ಹುದ್ದೆಕೊಡಿ- ಹೈಕೋರ್ಟ್ ಆದೇಶ
ಬೆಂಗಳೂರು: ವಯೋಮಿತಿ ಮೀರಿದ ಮಹಿಳೆಗೆ ವಿಶೇಷ ಪ್ರಕರಣವೆಂದು ಅನುಕಂಪದ ಹುದ್ದೆ ನೀಡಬೇಕು ಎಂದು ಹೈಕೋರ್ಟ್ ಮಹತ್ವ ಆದೇಶ ಹೊರಡಿಸಿದೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನೌಕರನ...
BBMP: ಗಣೇಶ ಮೂರ್ತಿ ವಿಸರ್ಜನೆಗೆ 41ಕೆರೆಗಳು, 489 ಸಂಚಾರಿ ವಾಹನಗಳ ವ್ಯವಸ್ಥೆ
ಬೆಂಗಳೂರು: ಗಣೇಶ ಮೂರ್ತಿ ವಿಸರ್ಜನೆಗಾಗಿ ಕೆರೆ ಅಂಗಳ, ತಾತ್ಕಾಲಿಕ ಕಲ್ಯಾಣಿ, ಸಂಚಾರಿ ವಾಹನ (ಮೊಬೈಲ್ ಟ್ಯಾಂಕ್)/ ಗಳ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ. 41ಕೆರೆ,...
ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಕಲಾವಿದರು-ಕಲಾತಂಡದವರಿಂದ ಅರ್ಜಿ ಆಹ್ವಾನ
ಶಿವಮೊಗ್ಗ: ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಛಿಸುವ ಕಲಾವಿದರು ಅಥವಾ ಕಲಾ ತಂಡದವರಿಂದ ಅರ್ಜಿ ಆಹ್ವಾನಿಸಲಾಗಿದೆ. ಇದು ಮಹಾನಗರ ಪಾಲಿಕೆವತಿಯಿಂದ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗಿಯಾಗಲು ಬಯಸುವ...
NWKRTC: ಆ.22ರಿಂದ 26ರವರೆಗೆ ಹೆಚ್ಚುವರಿ 265 ವಿಶೇಷ ಸಾರಿಗೆ ಬಸ್ಗಳ ಸೌಲಭ್ಯ
ಬೆಂಗಳೂರು: ಗಣೇಶ ಚತುರ್ಥಿ ಸಮೀಪಿಸುತ್ತಿರುವ ಹಿನ್ನೆಲೆ ಸಾರ್ವಜನಿಕರು ತಮ್ಮ ಊರುಗಳಿಗೆ ತೆರಳುವುದರಿಂದ ಹೆಚ್ಚುವರಿ 265 ವಿಶೇಷ ಸಾರಿಗೆ ಬಸ್ಸುಗಳು ಬೆಂಗಳೂರಿನಿಂದ ರಾಜ್ಯ ಹಾಗೂ ಅಂತರರಾಜ್ಯಗಳಿಗೆ ಕಾರ್ಯಾಚರಣೆ ನಡೆಸಲಿವೆ....
BMTC: ಸ್ಕೂಟರ್ ಸ್ಕಿಡ್ಆಗಿ ಬಿದ್ದ ಬಾಲಕಿ ಬಸ್ ಹಿಂದಿನ ಚಕ್ರಕ್ಕೆ ಸಿಲುಕಿ ಸಾವು
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಬಸ್ 10 ವರ್ಷದ ಬಾಲಕಿ ಮೇಲೆ ಹರಿದ ಪರಿಣಾಮ ಆಕೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಯಲಹಂಕ ಕೋಗಿಲು ಕ್ರಾಸ್...
ಆದಿ ಜಾಂಬವ ಅಭಿವೃದ್ಧಿ ನಿಗಮದಲ್ಲಿ ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ
ಬೆಂಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ 2025-26ನೇ ಸಾಲಿಗೆ ಸಂಬಂಧಿಸಿದಂತೆ ಆರ್ಥಿಕವಾಗಿ ಹಿಂದುಳಿದ ವರ್ಗಗಳ ಅಭಿವೃದ್ದಿಗಾಗಿ ಆದಿ ಜಾಂಬವ ಅಭಿವೃದ್ಧಿ ನಿಗಮಗದಿಂದ ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಅರ್ಹ ಫಲಾಪೇಕ್ಷಿಗಳಿಂದ...
ಉತ್ತರಾಖಂಡ್ನ 6ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷ-ಸದಸ್ಯರ ನಿಯೋಗ ಗ್ರಾಮಾಂತರ ಜಿಲ್ಲೆಗೆ ಭೇಟಿ
ಬೆಂಂಗಳೂರು ಗ್ರಾಮಾಂತರ: ಉತ್ತರಾಖಂಡ್ ರಾಜ್ಯದ 6ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷ ರವಿಶಂಕರ್, ಸದಸ್ಯರಾದ ಜಂಗ್ಪಂಗಿ, ಎಂ.ಸಿ. ಜೋಷಿ ಅವರ ನಿಯೋಗವು ಅಧ್ಯಯನಕ್ಕಾಗಿ ಇಂದು ಜಿಲ್ಲೆಗೆ ಭೇಟಿ...