ಬೆಂಗಳೂರು: ಭಾರತ 11ನೇ ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರು 91ನೇ ಜನ್ಮದಿನಕ್ಕೆ ಪದಾರ್ಪಣೆ ಮಾಡಿದ್ದಾರೆ.
ದೇಶದ ಶಕ್ತಿ, ಪ್ರೇರಣೆ, ದಾರಿದೀಪ ಆಗಿರುವ ಅವರು, ಜೆಡಿಎಸ್ ಪಾಲಿನ ಮಹಾನ್ ಚೈತನ್ಯ. ದೇಶ ಮತ್ತು ಕನ್ನಡನಾಡಿಗೆ ಅವರ ಕೊಡುಗೆ ಅವಿಸ್ಮರಣೀಯವಾಗಿದೆ.
ಅವರ ಅನುಭವಧಾರೆ ದೇಶದ ರಾಜಕಾರಣಿಗಳಿಗೆ ಅಮೃತಧಾರೆ. ಆ ಭಗವಂತ ಇವರಿಗೆ ಇನ್ನೂ ಹೆಚ್ಚಿನ ಆಯುರಾರೋಗ್ಯ ಕರುಣಿಸಲಿ. ಅವರು ದೇಶದ ಮತ್ತು ನಾಡಿನ ಉನ್ನತಿಗಾಗಿ ಇನ್ನೂ ದೀರ್ಘಕಾಲ ಲಹೆ ಸೂಚನೆಗಳನ್ನು ಕೊಡುತ್ತಿರಲಿ ಎಂದು ಎಂದು ಪ್ರಾರ್ಥಿಸೋಣ.
ಇನ್ನು ದೇವೇಗೌಡರ ಹುಟ್ಟುಹಬ್ಬಕ್ಕೆ ರಾಜಕೀಯ ನಾಯಕರು, ಮಠಾಧೀಶರು ಸೇರಿದಂತೆ ಹಲವಾರು ಗಣ್ಯರು ಶುಭಾಶಯ ಕೋರಿದ್ದಾರೆ.
ಭಾರತದ 11ನೇ ಪ್ರಧಾನಮಂತ್ರಿಗಳು, @JanataDal_S ಪಕ್ಷದ ರಾಷ್ಟ್ರೀಯ ಅಧ್ಯಕ್ಷರೂ ಹಾಗೂ ನನ್ನ ಪೂಜ್ಯ ತಂದೆಯವರಾದ ಶ್ರೀ @H_D_Devegowda ಅವರಿಗೆ 91ನೇ ಜನ್ಮದಿನದ ಹಾರ್ದಿಕ ಶುಭಾಶಯಗಳು ಹಾಗೂ ನನ್ನ ಭಕ್ತಿಪೂರ್ವಕ ಪ್ರಣಾಮಗಳು. 1/2 pic.twitter.com/hRdkTDQouA
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 18, 2023
ಹಿರಿಯ ಮುತ್ಸದ್ಧಿ ನಾಯಕರು, ಮಾಜಿ ಪ್ರಧಾನ ಮಂತ್ರಿ ಶ್ರೀ @H_D_Devegowda ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.
ಭಗವಂತನ ಕೃಪಾಶೀರ್ವಾದ ತಮ್ಮ ಮೇಲೆ ಸದಾ ಇರಲಿಯೆಂದು ಪ್ರಾರ್ಥಿಸುತ್ತೇನೆ. pic.twitter.com/X8MELyGmpg
— Basavaraj S Bommai (@BSBommai) May 18, 2023
ಮುತ್ಸದ್ಧಿ ಹಿರಿಯ ರಾಜಕಾರಣಿಗಳು, ಮಾಜಿ ಪ್ರಧಾನಮಂತ್ರಿಗಳಾದ ಸನ್ಮಾನ್ಯ ಶ್ರೀ ಹೆಚ್.ಡಿ.ದೇವೇಗೌಡ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರ ಅನುಗ್ರಹ ಸದಾ ತಮ್ಮ ಮೇಲಿರಲಿ ಎಂದು ಪ್ರಾರ್ಥಿಸುತ್ತೇನೆ.@H_D_Devegowda
— B.S.Yediyurappa (@BSYBJP) May 18, 2023