ಬೆಂಗಳೂರು: ಲಾಲ್‌ಬಾಗ್ ಆವರಣದಲ್ಲಿ 91ನೇ ಇಪಿಎಸ್ ಪಿಂಚಣಿದಾರರ ಮಾಸಿಕ ಸಭೆ ಆ.3ರ ಭಾನುವಾರ ಜರುಗಲಿದೆ ಎಂದು ಬಿಎಂಟಿಸಿ & ಕೆಎಸ್‌ಆರ್‌ಟಿಸಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ನಂಜುಂಡೇಗೌಡ ತಿಳಿಸಿದ್ದಾರೆ.
78 ಲಕ್ಷ ನಿವೃತ್ತರ ಬದುಕು ಇಂದಿಗೂ ಅತಂತ್ರ ಸ್ಥಿತಿಯಲ್ಲಿದ್ದು, ಇದಕ್ಕೆ ಯಾರು ಕಾರಣ? ಎಂದು ಹೇಳಬೇಕಾಗಿಲ್ಲ, ಇಪಿಎಫ್ಒ ಅಧಿಕಾರಿಗಳ ಧೋರಣೆ, ಅಸಹಕಾರ, ನಿರ್ಲಜ್ಜ ನಡೆ, ಇಪಿಎಸ್ ನಿವೃತ್ತರನ್ನು ಈ ಸ್ಥಿತಿಗೆ ತಂದು ನಿಲ್ಲಿಸಿದೆ. ಏನೇ ಆಗಲಿ ನಾವೆಲ್ಲರೂ ಒಂದೇ, ಒಗ್ಗಟ್ಟಾಗಿ ನಮ್ಮ ಮುಖಂಡರಿಗೆ ಶುಭ ಹಾರೈಸೋಣ, ಹಾಗೂ ನಮ್ಮ ಮುಂದಿನ ಹೋರಾಟದ ಕಾರ್ಯತಂತ್ರಗಳನ್ನು ಸರಿಯಾಗಿ ನಿರೂಪಿಸಿಕೊಂಡು, ನಮ್ಮ ಗುರಿ ಮುಟ್ಟಲು ಪ್ರಯತ್ನಿಸೋಣ.
ಎನ್ಎಸಿ ರಾಜ್ಯಾಧ್ಯಕ್ಷ ಜಿಎಸ್ಎಂ ಸ್ವಾಮಿರವರು ಈ ಮಾಸಿಕ ಸಭೆಯಲ್ಲಿ, ನಿವೃತ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ನಮ್ಮ ಸಂಘದ ಎಲ್ಲಾ ಪದಾಧಿಕಾರಿಗಳು, ಚಿಕ್ಕಬಳ್ಳಾಪುರ ಕೆಎಸ್‌ಆರ್‌ಟಿಸಿ ಕ್ಷೇಮಾಭಿವೃದ್ಧಿ ಟ್ರಸ್ಟಿನ ಪದಾಧಿಕಾರಿಗಳು, ಸದಸ್ಯರು, ಹೆಚ್ಎಂಟಿ, ಕಿರ್ಲೋಸ್ಕರ್, ಲಿಡ್ಕರ್, ಎಸ್ಕಾರ್ಟ್ ನಿವೃತ್ತರು, ಭಾಗವಹಿಸಲಿದ್ದು, ಮುಖಂಡರು ಇತ್ತೀಚಿನ ಎಲ್ಲ ಬೆಳವಣಿಗೆಗಳು ಹಾಗೂ ಮುಂದಿನ ಹೋರಾಟದ ರೂಪರೇಷೆಯ ಬಗ್ಗೆ ಪ್ರಸ್ತಾಪಿಸಲಿದ್ದಾರೆ.
ತಾವೆಲ್ಲರೂ ವಿಶ್ವ ಪಾರಂಪರಿಕ ಲಾಲ್ ಬಾಗ್ ಹೋತೊಟದಲ್ಲಿ ವಾಯು ವಿಹಾರ ನಡೆಸಿ, ತಮ್ಮ ಹಳೆಯ ಸ್ನೇಹಿತರ ಬೇಟಿ, ವಿಚಾರ ವಿನಿಮಯ ಹಾಗೂ ಈ ಮೇಲ್ಕಂಡ ಎಲ್ಲ ಅಂಶಗಳ ಬಗ್ಗೆ ಚರ್ಚಿಸೋಣ. ಎಲ್ಲ ನಿವೃತ್ತ ನೌಕರರು ಆ.3ರ ಭಾನುವಾರ ಬೆಳಗ್ಗೆ 8 ಗಂಟೆಗೆ ಹಾಜರಾಗಬೇಕೆಂದು ಕಾರ್ಯಕಾರಿ ಸಮಿತಿ ಪರವಾಗಿ ವಿನಂತಿಸಿ ಕೊಳ್ಳಲಾಗಿದೆ.
ಪ್ರತಿಭಟನೆಯಲ್ಲಿ ಭಾಗಿಯಾದವರಿಗೆ ಅಭಿನಂದನೆ: ಜುಲೈ 28, 2025 ರಂದು ನಗರದ ರಿಚ್ಮಂಡ್ ವೃತ್ತದಲ್ಲಿರುವ ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ಆವರಣದಲ್ಲಿ, ಹೆಚ್ಚಿನ ಸಂಖ್ಯೆಯಲ್ಲಿ ಇಪಿಎಸ್ ನಿವೃತ್ತರು ಭಾಗವಹಿಸಿ, ಪ್ರತಿಭಟನೆ ಮೂಲಕ ಮನವಿ ಸಲ್ಲಿಸುವ ಕಾರ್ಯಕ್ರಮ ಪಾರ್ಲಿಮೆಂಟ್ ಮುಂಗಾರು ಅಧಿವೇಶನ ನಡೆಯುತ್ತಿರುವ ಹೊತ್ತಿನಲ್ಲಿ, ಜರುಗಿರುಗಿವುದು ಅತ್ಯಂತ ಪರಿಣಾಮಕಾರಿಯಾಗಿದೆ. ದೇಶಾದ್ಯಂತ ಇರುವ ಇಪಿಎಸ್ ನಿವೃತ್ತರು ಮಾತ್ರವಲ್ಲದೆ ಸಾರ್ವಜನಿಕ ವಲಯದಲ್ಲಿಯೂ ಸಹ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಎಲ್ಲ ಇಪಿಎಸ್ ನಿವೃತ್ತರಿಗೆ ಅಭಿನಂದನೆಗಳು.
ಆ.4ರಂದು ಬೃಹತ್ ಪ್ರತಿಭಟನಾ ಸಭೆ: ಅಧಿವೇಶನದ ಹೊತ್ತಿನಲ್ಲಿ, ಆ.4ರಂದು ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನಾ ಸಭೆ ದೆಹಲಿಯ ಜಂತರ್ ಮಂತರ್ ಮೈದಾನದಲ್ಲಿ ರಾಷ್ಟ್ರೀಯ ಸಂಘರ್ಷ ಸಮಿತಿ ಮುಖ್ಯಸ್ಥ ಕಮಾಂಡೋರ್ ಅಶೋಕ್ ರಾಹುತ್ ಅವರ ನೇತೃತ್ವದಲ್ಲಿ ನಡೆಯಲಿದ್ದು, ಈ ಹೋರಾಟಕ್ಕೆ ದೇಶಾದ್ಯಂತ ಸಾವಿರಾರು ಇಪಿಎಸ್ ನಿವೃತ್ತರು ಭಾಗವಹಿಸಲಿದ್ದಾರೆ.

ಕೇಂದ್ರ ಸರ್ಕಾರದ ಉನ್ನತ ಸಚಿವರು ಹಾಗೂ ಅಧಿಕಾರಿಗಳು ಕೂಡಲೇ ಕಾರ್ಯ ಪ್ರವೃತ್ತರಾಗಿ ನಮ್ಮ ಮುಖಂಡರ ಜತೆ ಚರ್ಚಿಸುವ ಮೂಲಕ, ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಲು ಕಾಲಾವಕಾಶವಿದ್ದು, ತಪ್ಪಿದಲ್ಲಿ ಪರಿಸ್ಥಿತಿ ಕೈ ಮೀರಲಿದೆ ಎಂದು ತಿಳಿಸಿದ್ದಾರೆ.
ನಡಿಗೆದಾರರ ಸ್ವರ್ಗ: ಭಾರತಾಂಬೆಯು ತನ್ನ 78ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸುತ್ತಿರುವ ಈ ಶುಭ ಸಂದರ್ಭದಲ್ಲಿ, ಶತಮಾನಗಳ ಭವ್ಯ ಪರಂಪರೆಯನ್ನು ಹೊಂದಿರುವ, ನಡಿಗೆದಾರರ ಸ್ವರ್ಗ ಎಂದು ಕರೆಯುವ, ವಿಶ್ವ ವಿಖ್ಯಾತ ಲಾಲ್‌ಬಾಗ್ ಸಹಾ ತನ್ನ 218 ನೇ ವರ್ಷದ ಫಲ ಪುಷ್ಪ ಪ್ರದರ್ಶನಕ್ಕೆ ನವ ವಧುವಿನಂತೆ ಶೃಂಗಾರ ಗೊಳ್ಳುತ್ತಿದೆ.
ಈ ಬಾರಿ ದೇಶದ ಸ್ವತಂತ್ರ ಹೋರಾಟದಲ್ಲಿ ಹುತಾತ್ಮರಾದ ರಾಣಿ ಚೆನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣ ಅವರ ಪುಷ್ಪಾಲಾಂಕೃತ ಪ್ರತಿಮೆ ಅನಾವರಣಗೊಳ್ಳಲಿದೆ. ಇದರ ಜತೆಗೆ ಲಾಲ್‌ಬಾಗ್‌ಗೂ ಇಪಿಎಸ್ ಪಿಂಚಣಿದಾರರಿಗೂ ಅವಿನವಬಾವ ಸಂಬಂಧ, ಈ ಸುಂದರ ಪರಿಸರ ತಾಣದಲ್ಲಿ ಕ್ಷಣ ಕಾಲ ಕಳೆದಲ್ಲಿ ಬದುಕಿನ ಜಂಜಾಟವನ್ನು ಕೆಲ ಹೂತ್ತು ಮರೆತಂತಾಗಿ ಹಿರಿಯ ಜೀವಗಳಿಗೆ ನವ ಚೇತನದ ಸ್ಫೂರ್ತಿ ತುಂಬುತ್ತದೆ.
Related
