ಬೆಂಗಳೂರು: ಇಪಿಎಸ್-95 ಪಿಂಚಣಿದಾರರ 93ನೇ ಮಾಸಿಕ ಸಭೆ ಅಕ್ಟೋಬರ್ 5ರ ಭಾನುವಾರ ಬೆಳಗ್ಗೆ 8 ಗಂಟೆಗೆ ಲಾಲ್ ಬಾಗ್ ಆವರಣದಲ್ಲಿ ಜರುಗಲಿದೆ ಎಂದು ಬಿಎಂಟಿಸಿ ಹಾಗೂ ಕೆಎಸ್‌ಆರ್‌ಟಿಸಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ನಂಜುಂಡೇಗೌಡ ತಿಳಿಸಿದ್ದಾರೆ.
ಕಳೆದ 92 ಮಾಸಿಕ ಸಭೆಗಳಲ್ಲಿ ತಾವೆಲ್ಲರೂ ಭಾಗವಹಿಸಿ, ನಡೆಸಿದ ವಿಚಾರ ವಿನಿಮಯಕ್ಕೂ 93ನೇ ಮಾಸಿಕ ಸಭೆಯಲ್ಲಿ ಚರ್ಚಿಸುವ ಸಂಗತಿಗಳು ಬಹಳಷ್ಟಿವೆ. ಹಾಗಾಗಿ ಈ ಮಾಸಿಕ ಸಭೆಗೆ ಅದರಲ್ಲೂ ಬಿಎಂಟಿಸಿ ಹಾಗೂ ಕೆಎಸ್ಆರ್‌ಟಿಸಿ ನಿವೃತ್ತರು, ಇತರೆ ಎಲ್ಲ ಕಂಪನಿ ಹಾಗೂ ಕಾರ್ಖಾನೆಗಳ ನಿವೃತ್ತರು ತಪ್ಪದೆ ಭಾಗವಹಿಸಬೇಕೆಂದು ವಿನಂತಿಸಿಕೊಂಡಿದ್ದಾರೆ.
ಇನ್ನು ಇದೇ ಅಕ್ಟೋಬರ್ 11, 12ರಂದು ಬೆಂಗಳೂರಿನಲ್ಲಿ ಸಿಬಿಟಿ ಸಭೆ ನಡೆಯುತ್ತಿರುವ ವಿಚಾರ ತಮಗೆಲ್ಲ ತಿಳಿದಿದೆ. ಈ ಹಿನ್ನೆಲೆಯಲ್ಲಿ ಅಕ್ಟೋಬರ್ 09, 2025 ರಂದು ನಗರದ ಫ್ರೀಡಂ ಪಾರ್ಕ್ ಮೈದಾನದಲ್ಲಿ ಇಪಿಎಸ್ ನಿವೃತ್ತರ ಬೃಹತ್ ಪ್ರತಿಭಟನೆ ನಡೆಯುತ್ತಿದ್ದು, ಈ ಸಭೆಗೆ ಇಪಿಎಸ್ ಪಿಂಚಣಿಗೆ ಸಂಬಂಧಿಸಿದಂತೆ ಸಾಕಷ್ಟು ಪರಿಣಿತಿ ಹೊಂದಿರುವ ರಾಜ್ಯ ಉಚ್ಚ ನ್ಯಾಯಾಲಯದ ನಾಲ್ಕು ಜನ ವಕೀಲರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದು ( ಶ್ರೀ ಶ್ರೀಧರ್ ಪ್ರಭು, ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಈ ಹಿಂದೆ ನೀಡಿದ ಉಪನ್ಯಾಸ ಕಾರ್ಯಕ್ರಮ ಹಾಗೂ ಇತರರ ವಿವರ ನಂತರ ನೀಡಲಾಗುವುದು) ಇಪಿಎಸ್ ನಿವೃತ್ತರ ಅಧಿಕ ಪಿಂಚಣಿಗೆ ಸಂಬಂಧಿಸಿದಂತೆ ಮಹತ್ವದ ಸಂಗತಿಗಳನ್ನು ಪ್ರಸ್ತುತಪಡಿಸಲಿದ್ದಾರೆ.
ಭರವಸೆ ಎಂಬುದು ಬದುಕಿನ ಜೀವ ಜಲ, ಅದನ್ನು ಎಂದಿಗೂ ಬತ್ತಲು ಬಿಡಬಾರದು. ಸಂಘರ್ಷವಿಲ್ಲದೆ ಏನನ್ನು ಪಡೆಯಲು ಸಾಧ್ಯವಿಲ್ಲ ಎಂಬುದು ತಮಗೂ ತಿಳಿದಿದೆ.
2014 ರ ನಂತರ ನಿವೃತ್ತರಾದ, ಜಂಟಿ ಆಯ್ಕೆ ಪತ್ರ ಸಲ್ಲಿಸಿದ ಎಲ್ಲ ಇಪಿಎಸ್ ಪಿಂಚಣಿದಾರರಿಗೆ ಅಧಿಕ ಪಿಂಚಣಿ ನೀಡುವ ವಿಚಾರ, ಇತ್ತೀಚಿನ ನ್ಯಾಯಾಲಯದ ತೀರ್ಪುಗಳನ್ನು ವಿಶ್ಲೇಷಿಸಿ, ಮಾತನಾಡಲಿದ್ದಾರೆ. ಅಂದು ನಡೆಯುವ ಇಪಿಎಸ್ ಪಿಂಚಣಿದಾರರ ಶಕ್ತಿ ಪ್ರದರ್ಶನಕ್ಕೆ ತಾವೆಲ್ಲರೂ ಸಾಕ್ಷಿ ಆಗಬೇಕು ಎಂದು ಕರೆ ನೀಡಿದ್ದಾರೆ.
ನಮ್ಮ ಸಂಘದ ಎಲ್ಲಾ ಪದಾಧಿಕಾರಿಗಳು, ಚಿಕ್ಕಬಳ್ಳಾಪುರ ಕೆಎಸ್‌ಆರ್‌ಟಿಸಿ ಕ್ಷೇಮಾಭಿವೃದ್ಧಿ ಟ್ರಸ್ಟಿನ ಪದಾಧಿಕಾರಿಗಳು, ಸದಸ್ಯರು, ಹಾಗೂ ಇತರೆ ಕಾರ್ಖಾನೆ ಹಾಗೂ ಕಂಪನಿಗಳ ನಿವೃತ್ತರು, ಮಾಸಿಕ ಸಭೆಯಲ್ಲಿ ಭಾಗವಹಿಸಲಿದ್ದು, ಮುಖಂಡರು ಇತ್ತೀಚಿನ ಎಲ್ಲ ಬೆಳವಣಿಗೆಗಳು ಹಾಗೂ ಫ್ರೀಡಂ ಪಾರ್ಕ್ ನಲ್ಲಿ ಕೈಗೊಳ್ಳುವ ಹೋರಾಟದ ರೂಪರೇಷೆಯ ಬಗ್ಗೆ ಸಭೆಯಲ್ಲಿ ಪ್ರಸ್ತಾಪಿಸಲಿದ್ದಾರೆ.
ಲಾಲ್ ಬಾಗ್ ಗೂ ಇಪಿಎಸ್ ಪಿಂಚಣಿದಾರರಿಗೂ ಅವಿನವಭಾವ ಸಂಬಂಧ. ಏನೇ ಆಗಲಿ ದಶಕದಿಂದ ನಡೆದ ನಮ್ಮ ಹೋರಾಟ ವ್ಯರ್ಥವಾಗಲು ಬಿಡಬಾರದು
ಹೀಗಾಗಿ ತಾವೆಲ್ಲರೂ ವಿಶ್ವ ಪಾರಂಪರಿಕ ಲಾಲ್ ಬಾಗ್ ಹೂದೋಟದಲ್ಲಿ ವಾಯು ವಿಹಾರ ನಡೆಸಿ, ತಮ್ಮ ಹಳೆಯ ಸ್ನೇಹಿತರ ಭೇಟಿ, ವಿಚಾರ ವಿನಿಮಯ ಹಾಗೂ ಈ ಎಲ್ಲ ಅಂಶಗಳ ಬಗ್ಗೆ ಚರ್ಚಿಸೋಣ. ಎಲ್ಲ ನಿವೃತ್ತ ನೌಕರರು ಆ.5ರ ಭಾನುವಾರ ದಂದು ಬೆಳಗ್ಗೆ 8ಗಂಟೆಗೆ ಬನ್ನಿ ಎಂದು ಕಾರ್ಯಕಾರಿ ಸಮಿತಿ ಪರವಾಗಿ ವಿನಂತಿಸಿ ಕೊಂಡಿದ್ದಾರೆ.

Related
