NEWSನಮ್ಮಜಿಲ್ಲೆನಮ್ಮರಾಜ್ಯಸಿನಿಪಥ

ಶೇ.98 ರಷ್ಟು ಅರ್ಜಿಗಳ ವಿಲೇ ಮಾಡಿ, ಜನರಿಗೆ ಪರಿಹಾರ ನೀಡಲಾಗಿದೆ: ಸಿಎಂ ಸಿದ್ದರಾಮಯ್ಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸರ್ಕಾರವನ್ನು ಜನರ ಬಳಿಗೇ ಒಯ್ಯಬೇಕೆಂಬುದು ಸರ್ಕಾರದ ಆಶಯ. ಈ ನಿಟ್ಟಿನಲ್ಲಿ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಈ ವರೆಗೆ ಒಟ್ಟು 108 ಜನಸ್ಪಂದನ ಕಾರ್ಯಕ್ರಮಗಳನ್ನು ನಡೆಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ವಿಧಾನಸೌಧದ ಮುಂಭಾಗದಲ್ಲಿ ಆಯೋಜಿಸಿರುವ ರಾಜ್ಯಮಟ್ಟದ ಎರಡನೇ ಜನಸ್ಪಂದನ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ಕಳೆದ ವರ್ಷ ನವೆಂಬರ್‌ 27 ರಂದು ನಡೆದ ಮೊದಲ ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ವೀಕರಿಸಲಾದ ಅರ್ಜಿಗಳ ಪೈಕಿ ಶೇ. 98 ರಷ್ಟು ಅರ್ಜಿಗಳನ್ನು ವಿಲೇವಾರಿ ಮಾಡಿ, ಜನರಿಗೆ ಪರಿಹಾರಗಳನ್ನು ಒದಗಿಸಲಾಗಿದೆ ಎಂದು ಹೇಳಿದರು.

ಇನ್ನು ತಾಲೂ ಜಿಲ್ಲಾ ಮಟ್ಟದಲ್ಲಿಯೂ ಜನಸ್ಪಂದನ ಕಾರ್ಯಕ್ರಮ ನಡೆಸಲಾಗುತ್ತಿದ್ದು, ಇಲ್ಲಿ ಬಗೆಹರಿಯದ ಸಮಸ್ಯೆಗಳನ್ನು ರಾಜ್ಯಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ ಜನರು ಸಲ್ಲಿಸಬಹುದಾಗಿದೆ. ಕಾನೂನುಬದ್ಧವಾದ ಸಮಸ್ಯೆಗಳಿಗೆ ನಮ್ಮ ಸರ್ಕಾರ ಪರಿಹಾರ ಒದಗಿಸಲಿದೆ ಎಂದರು.

ಸಮಸ್ಯೆ ಬಗೆಹರಿಸಲು ಕಾನೂನು ತೊಡಕು ಇದ್ದಲ್ಲಿ, ಈ ಕುರಿತು ಅರ್ಜಿದಾರರಿಗೆ ಕಾರಣ ಸಹಿತ ಹಿಂಬರಹ ನೀಡಲಾಗುವುದು. ಜನಸ್ಪಂದನದಲ್ಲಿ ಸ್ವೀಕರಿಸಲಾದ ಅರ್ಜಿಗಳಿಗೆ ಮೂರು ತಿಂಗಳೊಳಗೆ ವಿಲೇವಾರಿ ಮಾಡಬೇಕು, ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದೇನೆ ಎಂದು ಹೇಳಿದರು.

ಆಡಳಿತ ವ್ಯವಸ್ಥೆ ಚುರುಕುಗೊಳ್ಳಬೇಕು, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎನ್ನುವ ಆಶಯದೊಂದಿಗೆ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸರ್ಕಾರ ರೂಪಿಸುವ ಜನೋಪಯೋಗಿ ಕಾರ್ಯಕ್ರಮಗಳು ನೇರವಾಗಿ ಫಲಾನುಭವಿಗಳಿಗೆ ತಲುಪಬೇಕು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಎಂಟು ತಿಂಗಳೊಳಗಾಗಿ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದೇವೆ ಎಂದರು.

ಗ್ಯಾರಂಟಿ ಯೋಜನೆಯಿಂದ ಕರ್ನಾಟಕ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಟೀಕಿಸಿದ್ದರು. ಯೋಜನೆ ಜಾರಿಗೊಳಿಸಿದಾಗ ವಿರೋಧ ಪಕ್ಷಗಳ ನಾಯಕರು ಈಗ ಯೋಜನೆ ಜಾರಿಗೊಳಿಸಿ ಆಮೇಲೆ ನಿಲ್ಲಿಸುತ್ತಾರೆ ಎಂದಿದ್ದರು. ಆದರೆ ಇಂತಹ ಅಪಪ್ರಚಾರಗಳಿಗೆ ಕಿವಿಗೊಡಬಾರದು. ಗ್ಯಾರಂಟಿ ಯೋಜನೆಗಳು ಬಡವರ ಕಾರ್ಯಕ್ರಮ, ಅಸಮಾನತೆ ನಿವಾರಿಸುವ ಕಾರ್ಯಕ್ರಮ ಎಂದು ತಿಳಿಸಿದರು.

ನಾವು ಸಂವಿಧಾನದಲ್ಲಿ, ಬಸವಾದಿ ಶರಣರಲ್ಲಿ ನಂಬಿಕೆ ಇಟ್ಟುಕೊಂಡಿರುವವರು. ಸಮಾಜದಲ್ಲಿ ಭ್ರಾತೃತ್ವ ಬೆಳೆಯಬೇಕು, ಸಮಾನತೆ ಮೂಡಬೇಕು. ಆಗ ಮಾತ್ರ ಸಮಾಜದಲ್ಲಿ ಶಾಂತಿ, ನೆಮ್ಮದಿ ಕಾಪಾಡಲು ಸಾಧ್ಯ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇದ್ದರೆ ಬಂಡವಾಳ ಹೂಡಿಕೆ ಸಾಧ್ಯವಾಗುತ್ತದೆ. ರಾಜ್ಯದಲ್ಲಿ ಸಾಮಾಜಿಕ ಆರ್ಥಿಕ-ಬದಲಾವಣೆ ತರಲು ಜನಸ್ಪಂದನ ಅಗತ್ಯ ಎಂದು ಹೇಳಿದರು.

Leave a Reply

error: Content is protected !!
LATEST
KSRTC: ₹8.76 ಲಕ್ಷ ನಷ್ಟವುಂಟು ಮಾಡಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸರ್ಕಾರದ ಮುಖ್ಯ ಕಾರ್ಯದರ್ಶ... BMTC ಚಾಲಕರಿಗೆ ಕೂಡಲೇ ವೇತನ ಪಾವತಿಸಿ: ಎಎಪಿಯ ಜಗದೀಶ್ ವಿ. ಸದಂ ಆಗ್ರಹ ಬಸವನಹಳ್ಳಿ: ನಿವೃತ್ತ ಸಹಾಯಕ ತೋಟಗಾರಿಕಾ ಇಲಾಖೆಯ ನಿರ್ದೇಶಕ ಚಿಕ್ಕಮಾಯಿಗೌಡರ ಪತ್ನಿ ಸಿದ್ದಮ್ಮ ನಿಧನ KSRTC ನೌಕರರ 2024ರ ವೇತನ ಪರಿಷ್ಕರಣೆ, 38 ತಿಂಗಳ ಹಿಂಬಾಕಿ ಬಿಡುಗಡೆಗೆ ಜೂನ್‌ 6ರಬಳಿಕ ನಿರ್ಧಾರ: ರಾಮಲಿಂಗಾರೆಡ್ಡಿ ಚಿಕ್ಕಮಗಳೂರಲ್ಲಿ ಧಾರಾಕಾರ ಮಳೆ- ಬೆಂಗಳೂರಿಗೂ ಆಗಮಿಸಲಿದ್ದಾನೆ ವರುಣ BMTC: ವೇತನಕ್ಕೆ ಆಗ್ರಹಿಸಿ ಬಿಎಂಟಿಸಿ ಎಲೆಕ್ಟ್ರಿಕ್‌ ಬಸ್‌ ಚಾಲಕರ ದಿಢೀರ್‌ ಪ್ರತಿಭಟನೆ ನಮ್ಮಲ್ಲಿ ಒಳಜಗಳ ಗಿಳಜಗಳ ಯಾವುದೂ ಇಲ್ಲ : ಸಿಎಂ ಸಿದ್ದರಾಮಯ್ಯ ಲೋಕಸಮರ 2024: 7ನೇ ಹಂತದ ಚುನಾವಣೆ - ವಾರಣಾಸಿಯಿಂದ 3ನೇ ಬಾರಿಗೆ ಪರೀಕ್ಷೆಗಿಳಿದ ಪ್ರಧಾನಿ ಮೋದಿ KSRTC: ಕರ್ತವ್ಯದ ವೇಳೆಯೇ ಬ್ರೈನ್‌ಸ್ಟ್ರೋಕ್‌ - ಸಾರಿಗೆ ನೌಕರನಿಗೆ ಬೇಕಿದೆ ಆರ್ಥಿಕ ನೆರವು ನಾಲ್ಕನೇ ಹಂತದ ಲೋಕಸಭಾ ಚುನಾವಣೆ: 10 ರಾಜ್ಯಗಳ 96 ಕ್ಷೇತ್ರಗಳಲ್ಲಿ ಒಟ್ಟಾರೆ ಶೇ. 62.84ರಷ್ಟು ಮತದಾನ