CrimeNEWSದೇಶ-ವಿದೇಶಸಿನಿಪಥ

ನಟಿ ಶಿಲ್ಪಾಶೆಟ್ಟಿ – ಉದ್ಯಮಿ ರಾಜ್‌ಕುಂದ್ರಾ ದಂಪತಿಯ 98 ಕೋಟಿ ರೂ. ಆಸ್ತಿ ಇಡಿ ವಶಕ್ಕೆ

ವಿಜಯಪಥ ಸಮಗ್ರ ಸುದ್ದಿ

ಮುಂಬೈ: ಜಾರಿ ನಿರ್ದೇಶನಾಲಯ ಬರೋಬ್ಬರಿ 98 ಕೋಟಿ ರೂ. ಮೌಲ್ಯದ ಆಸ್ತಿ ಹಾಗೂ ಶಿಲ್ಪಾ ಶೆಟ್ಟಿ ಅವರ ಫ್ಲಾಟ್‌ ಅನ್ನು ವಶಪಡಿಸಿಕೊಂಡಿದೆ. ಈ ಮೂಲಕ ಬಾಲಿವುಡ್ ನಟಿ ಶಿಲ್ಪಾಶೆಟ್ಟಿ – ಉದ್ಯಮಿ ರಾಜ್‌ ಕುಂದ್ರಾ ದಂಪತಿಗೆ ಮತ್ತೊಂದು ಸಂಕಷ್ಟ ಎದುರಾದಂತಾಗಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣ ತನಿಖೆ ನಡೆಸುತ್ತಿರುವ ED ಇಂದು ರಾಜ್‌ ಕುಂದ್ರಾ ಅವರಿಗೆ ಸಂಬಂಧ ಪಟ್ಟ 97.79 ಕೋಟಿ ರೂ. ಮೌಲ್ಯದ ಆಸ್ತಿಯನ್ನು ವಶಕ್ಕೆ ಪಡೆದಿದೆ.

ಅಲ್ಲದೆ ಇದರ ಜತೆಗೆ ಮುಂಬೈನ ಜುಹುನಲ್ಲಿರುವ ಫ್ಲಾಟ್‌ಅನ್ನು ಕೂಡ ತನ್ನ ಸುಪರ್ದಿಗೆ ಪಡೆದುಕೊಂಡಿದ್ದು, ಈ ಜುಹುನಲ್ಲಿರುವ ಫ್ಲಾಟ್ ನಟಿ ಶಿಲ್ಪಾ ಶೆಟ್ಟಿ ಅವರ ಹೆಸರಿನಲ್ಲಿದೆ.

ಉದ್ಯಮಿ ಹಾಗೂ ಬಾಲಿವುಡ್‌ ನಟ ರಾಜ್‌ ಕುಂದ್ರಾ ಅವರನ್ನು ಬಿಟ್‌ಕಾಯಿನ್ ಸೇರಿದಂತೆ ಕೋಟ್ಯಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆ ನಡೆಸಲಾಗಿತ್ತು. ರಾಜ್‌ ಕುಂದ್ರಾ ಅವರಿಗೆ ಸಂಬಂಧಪಟ್ಟ ಸ್ಥಿರ ಮತ್ತು ಚರ ಆಸ್ತಿಯ ಜತೆಗೆ ಪುಣೆಯಲ್ಲಿರುವ ಬಂಗ್ಲೆ ಮತ್ತು ಷೇರುಗಳನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

2017ರಲ್ಲೇ ಇಡಿ ಅಧಿಕಾರಿಗಳು ಬಿಟ್‌ ಕಾಯಿನ್‌ ಅಲ್ಲಿ 6,600 ಕೋಟಿ ರೂ. ಹಣ ವರ್ಗಾವಣೆ ಮಾಡಿದ ಆರೋಪದಲ್ಲಿ ತನಿಖೆ ನಡೆಸಿತ್ತು. ಈ ಪ್ರಕರಣದಲ್ಲಿ ಬಿಟ್‌ಕಾಯಿನ್‌ ಮೂಲಕ ಹಲವರಿಗೆ ಶೇಕಡಾ 10 ರಷ್ಟು ಹಣ ರಿಟರ್ನ್‌ ಮಾಡುವ ಭರವಸೆ ನೀಡಿ ಮೋಸ ಮಾಡಿದ ಆರೋಪ ಕೇಳಿ ಬಂದಿತ್ತು.

ಇನ್ನು ಇದೇ ಹಗರಣದಲ್ಲಿ ತನಿಖೆ ನಡೆಸಿದ ಜಾರಿ ನಿರ್ದೇಶನಾಲಯ ಇದೀಗ ಆಸ್ತಿಯನ್ನು ವಶಕ್ಕೆ ಪಡೆದುಕೊಂಡಿದೆ.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ