CrimeNEWSನಮ್ಮಜಿಲ್ಲೆ

₹98.52 ಕೋಟಿ ಮೌಲ್ಯದ ಬಿಯರ್ ದಾಸ್ತಾನು ಜಪ್ತಿ : 17 ಮಂದಿ ವಿರುದ್ಧ FIR ದಾಖಲು

ವಿಜಯಪಥ ಸಮಗ್ರ ಸುದ್ದಿ

ಚಾಮರಾಜನಗರ: ಚುನಾವಣೆಯನ್ನು ಪಾರದರ್ಶಕವಾಗಿ ನಡೆಸಲು ಚುನಾವಣಾ ಅಧಿಕಾರಿಗಳು ನಿರಂತರವಾಗಿ ಶ್ರಮ ವಹಿಸುತ್ತಿದ್ದಾರೆ. ರಾಜ್ಯದ ಪ್ರಮುಖ ಸ್ಥಳಗಳಲ್ಲಿ ಹದ್ದಿನ ಕಣ್ಣಿಟ್ಟಿದ್ದು, ಅಂತೆಯೇ ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ.

ತಾಂಡ್ಯ ಕೈಗಾರಿಕಾ ಪ್ರದೇಶದಲ್ಲಿರುವ ಯುನೈಟೆಡ್ ಬ್ರಿವರೀಸ್ ಲಿಮಿಟೆಡ್ ಘಟಕದ ಮೇಲೆ ಅಬಕಾರಿ (Excise) ಜಂಟಿ ಆಯುಕ್ತರು ದಾಳಿ ನಡೆಸಿದ್ದು, ಈ ವೇಳೆ ಒಟ್ಟು 98.52 ಕೋಟಿ ರೂ. ಮೊತ್ತದ ಬಿಯರ್ ದಾಸ್ತಾನು ಜಪ್ತಿ ಮಾಡಿದ್ದಾರೆ.

ಮೈಸೂರು ಜಿಲ್ಲೆಯ ತಾಂಡ್ಯ ಕೈಗಾರಿಕಾ ಪ್ರದೇಶದಲ್ಲಿರುವ ಬಿಯರ್ ತಯಾರಿಕಾ ಘಟಕದಲ್ಲಿ ಸರ್ಕಾರಕ್ಕೆ ತೋರಿಸಿರುವ ದಾಸ್ತಾನು ಲೆಕ್ಕಕ್ಕಿಂತ ಅಧಿಕ ದಾಸ್ತಾನು ಸಂಗ್ರಹ ಪತ್ತೆಯಾಗಿದೆ. 7 ಸಾವಿರ ವಿವಿಧ ಬ್ರಾಂಡಿನ ಪೆಟ್ಟಿಗೆಗಳಲ್ಲಿ ಬಿಯರ್ ಬಾಟಲಿಗಳು ಪತ್ತೆಯಾಗಿದೆ.

ಮೈಸೂರು ವಿಭಾಗದ ಅಬಕಾರಿ ಜಂಟಿ ಆಯುಕ್ತರ ನೇತೃತ್ವದಲ್ಲಿ ಅತಿದೊಡ್ಡ ಕಾರ್ಯಾಚರಣೆ ನಡೆದಿದ್ದು, ಯುಟಿ ಟ್ಯಾಂಕ್, ಸೈಲೋಸ್ ಟ್ಯಾಂಕ್‌ಗಳಲ್ಲಿರುವ ಕಚ್ಚಾ ವಸ್ತು ಸಮೇತ ಜಪ್ತಿ ಮಾಡಲಾಗಿದೆ. ಅಲ್ಲದೆ ಈ ಸಂಬಂಧ ಕಂಪನಿ ಮಾಲೀಕರು ಸೇರಿ 17 ಮಂದಿ ವಿರುದ್ಧ FIR ದಾಖಲಿಸಲಾಗಿದೆ.

ಚುನಾವಣಾಧಿಕಾರಿಗಳಿಗೆ ಏಪ್ರಿಲ್ 2ರಂದು ಅನಾಮಧೇಯ ದೂರವಾಣಿ ಕರೆಯೊಂದು ಬಂದಿತ್ತು. ಅದನ್ನು ಆಧರಿಸಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದರು. ಜಿಲ್ಲಾ ಚುನಾವಣಾಧಿಕಾರಿ ನೀಡಿದ ಮೌಖಿಕ ಆದೇಶದನ್ವಯ ಬ್ರೀವರಿಸ್ ಘಟಕದ ಮೇಲೆ ದಾಳಿ ನಡೆಸಲಾಗಿತ್ತು.

ಈ ವೇಳೆ ದಾಖಲೆ ಪರಿಶೀಲಿಸಿದಾಗ ಲೆಕ್ಕಪುಸ್ತಕದ ದಾಸ್ತಾನಿಗಿಂತ ಹೆಚ್ಚಿನ ಬಿಯರ್ ದಾಸ್ತಾನು ಕಂಡುಬಂದಿದೆ. ಈ ಹಿನ್ನೆಲೆ ಅವುಗಳನ್ನು ಜಪ್ತಿ ಮಾಡಿ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ತಿಳಿಸಿದ್ದಾರೆ.

Leave a Reply

error: Content is protected !!
LATEST
ಮಧ್ಯಮ ವರ್ಗದ ವ್ಯಕ್ತಿ ಕೇಳಿದ ಪ್ರಶ್ನೆಗೆ ಉತ್ತರಿಸಲಾಗದೆ ಮೌನಕ್ಕೆ ಶರಣಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ BBMP-ಡೆಂಗ್ಯೂ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ : ಸುರಳ್ಕರ್ ವಿಕಾಸ್ ಕಿಶೋರ್ ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ 18 ರಿಂದ 45 ವರ್ಷದವರಿಂದ ಅರ್ಜಿ ಆಹ್ವಾನ ಪ್ರತಿಷ್ಠಿತ ಶಾಲೆಗಳಿಗೆ ಸೇರ ಬಯಸುವ ಮಕ್ಕಳಿಂದ ಅರ್ಜಿ ಆಹ್ವಾನ: ಷರತ್ತು ಅನ್ವಯ ವಸತಿ ಶಾಲೆಗಳಲ್ಲಿ ಪ್ರಥಮ ಪಿಯುಸಿ ತರಗತಿ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ KSRTC: ₹8.76 ಲಕ್ಷ ನಷ್ಟವುಂಟು ಮಾಡಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸರ್ಕಾರದ ಮುಖ್ಯ ಕಾರ್ಯದರ್ಶ... BMTC ಚಾಲಕರಿಗೆ ಕೂಡಲೇ ವೇತನ ಪಾವತಿಸಿ: ಎಎಪಿಯ ಜಗದೀಶ್ ವಿ. ಸದಂ ಆಗ್ರಹ ಬಸವನಹಳ್ಳಿ: ನಿವೃತ್ತ ಸಹಾಯಕ ತೋಟಗಾರಿಕಾ ಇಲಾಖೆಯ ನಿರ್ದೇಶಕ ಚಿಕ್ಕಮಾಯಿಗೌಡರ ಪತ್ನಿ ಸಿದ್ದಮ್ಮ ನಿಧನ KSRTC ನೌಕರರ 2024ರ ವೇತನ ಪರಿಷ್ಕರಣೆ, 38 ತಿಂಗಳ ಹಿಂಬಾಕಿ ಬಿಡುಗಡೆಗೆ ಜೂನ್‌ 6ರಬಳಿಕ ನಿರ್ಧಾರ: ರಾಮಲಿಂಗಾರೆಡ್ಡಿ ಚಿಕ್ಕಮಗಳೂರಲ್ಲಿ ಧಾರಾಕಾರ ಮಳೆ- ಬೆಂಗಳೂರಿಗೂ ಆಗಮಿಸಲಿದ್ದಾನೆ ವರುಣ