NEWSನಮ್ಮಜಿಲ್ಲೆನಮ್ಮರಾಜ್ಯ

ನಾಳೆ ಇಪಿಎಸ್ ಪಿಂಚಣಿದಾರರ 98ನೇ ಮಾಸಿಕ ಸಭೆ: BMTC-KSRTC ನಿವೃತ್ತ ನೌಕರರ ಸಂಘ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮಾರ್ಚ್ 1ರ ಭಾನುವಾರ ಬೆಳಗ್ಗೆ 8 ಗಂಟೆಗೆ ಲಾಲ್ ಬಾಗ್ ಆವರಣದಲ್ಲಿ 98ನೇ ಇಪಿಎಸ್-95 ಪಿಂಚಣಿದಾರರ ಮಾಸಿಕ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಬಿಎಂಟಿಸಿ ಹಾಗೂ ಕೆಎಸ್ಆರ್‌ಟಿಸಿ ನಿವೃತ್ತ ನೌಕರರ ಸಂಫದ ಅಧ್ಯಕ್ಷ ನಂಜುಂಡೇಗೌಡ ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಎಲ್ಲರೂ ವಿಶ್ವ ಪಾರಂಪರಿಕ ಲಾಲ್ ಬಾಗ್ ಹೋತೊಟದಲ್ಲಿ ವಾಯು ವಿಹಾರ ನಡೆಸಿ, ತಮ್ಮ ಹಳೆಯ ಸ್ನೇಹಿತರ ಭೇಟಿ, ವಿಚಾರ ವಿನಿಮಯ ಜತೆಗೆ ನಮ್ಮೆಲ್ಲ ಬೇಡಿಕೆಗಳ ಅಂಶಗಳ ಬಗ್ಗೆ ಚರ್ಚಿಸೋಣ. ಹೀಗಾಗಿ ಎಲ್ಲ ನಿವೃತ್ತ ನೌಕರರು ಭಾಗವಹಿಸಬೇಕೆಂದು ಕೋರಿದ್ದಾರೆ.

ಇನ್ನು ಕಳೆದ ಏಳೆಂಟು ವರ್ಷಗಳಿಂದ ಬಿಎಂಟಿಸಿ ಹಾಗೂ ಕೆಎಸ್‌ಆರ್‌ಟಿಸಿ ನಿವೃತ್ತ ನೌಕರರ ಸಂಘಟನೆಯು ನಡೆಸಿದ ಮಾಸಿಕ ಹಾಗೂ ಪ್ರತಿಭಟನಾ ಸಭೆಗಳು ಸಾವಿರಾರು ಇಪಿಎಸ್ ನಿವೃತ್ತರಲ್ಲಿ ಅರಿವು ಹಾಗೂ ಜಾಗೃತಿ ಮೂಡಿಸಿದ್ದು, ಈ ಹೋರಾಟದಲ್ಲಿ ಸದಸ್ಯರು ಹೊಂದಿರುವ ದೃಢ ನಿರ್ಧಾರ ಹಾಗೂ ನಮಗೆ ನೀಡುತ್ತಿರುವ ಸಹಕಾರವೇ ಈ ಹೋರಾಟಕ್ಕೆ ಸ್ಪೂರ್ತಿ, ಪ್ರೆರಣೆಯಾಗಿದೆ ಎಂದರೆ ತಪ್ಪಾಗಲಾರದು.

ಫೆಬ್ರವರಿ 27ರ ಶುಕ್ರವಾರ ನಗರದ ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ಆವರಣದಲ್ಲಿ ಜರುಗಿದ ಇಪಿಎಸ್ ಪಿಂಚಣಿದಾರರ ಸಭೆಗೆ ನೂರಾರು ಪ್ರತಿಭಟನಾಕಾರರು ವಿವಿಧ ಭಾಗಗಳಿಂದ ಆಗಮಿಸಿ ಕಚೇರಿ ಆವರಣದಲ್ಲಿ ಪಥ ಸಂಚಲನ ಮಾಡುವ ಮೂಲಕ ಕೂಗಿದ ಧಿಕ್ಕಾರದ ಘೋಷಣೆ ಮುಗಿಲು ಮುಟ್ಟಿತು. ಈ ಬಾರಿ ನಿವೃತ್ತರ ಆಕ್ರೋಶದ ಕಟ್ಟೆ ಹೊಡೆದಿತ್ತು. ಯಾವುದಕ್ಕೂ ಒಂದು ಮಿತಿ ಇದೆ. ಇದನ್ನು ಕೇಂದ್ರ ಸರ್ಕಾರ ಅರ್ಥ ಮಾಡಿಕೊಂಡು ಕೂಡಲೇ ನಮ್ಮ ಬೇಡಿಕೆಗಳನ್ನು ಈಡೇರಿಸಬೇಕೆಂದು ಅಗ್ರಹಿಸಿದರು.

ಈಊ ನಡುವೆ ಮಾರ್ಚ್ 2ರಂದು ದೆಹಲಿಯಲ್ಲಿ 239ನೇ ಸಿಬಿಟಿ ಸಭೆ ಇದ್ದು, ಇದಾದ ನಂತರ ಮಾ.9ರಿಂದ 2ನೇ ಹಂತದ ಬಜೆಟ್ ಪಾರ್ಲಿಮೆಂಟ್ ಅಧಿವೇಶನ ಪ್ರಾರಂಭವಾಗಲಿದ್ದು, ಈ ಅಧಿವೇಶನದಲ್ಲಿ ಇಪಿಎಸ್ ನಿವೃತ್ತರ ಬೇಡಿಕೆಗಳನ್ನು ಕೇಂದ್ರ ಸರ್ಕಾರ ಈಡೇರಿಸಿ ಕೊಡಲೇಬೇಕು. ತಪ್ಪಿದಲ್ಲಿ ಹೋರಾಟ ತೀವ್ರಗೊಳ್ಳಲಿದೆ, ಎಂಬ ಎಚ್ಚರಿಕೆಯ ಸಂದೇಶವನ್ನು ಕೇಂದ್ರ ಸರ್ಕಾರಕ್ಕೆ ಈ ಮಾಸಿಕ ಸಭೆಯಲ್ಲಿ ನೀಡಲಾಗುವುದು ಎಂದು ಹೇಳಿದ್ದಾರೆ.

ದೇಶದ 78 ಲಕ್ಷ ಇಪಿಎಸ್ ನಿವೃತ್ತರ ಬದುಕು ಇಂದಿಗೂ ಅತಂತ್ರ ಸ್ಥಿತಿಯಲ್ಲಿದ್ದು, ಇದಕ್ಕೆ ಯಾರು ಕಾರಣ ಎಂದು ಹೇಳಬೇಕಾಗಿಲ್ಲ. ಇಪಿಎಫ್ಒ ಅಧಿಕಾರಿಗಳ ಧೋರಣೆ, ಅಸಹಕಾರ, ಕೇಂದ್ರ ಸರ್ಕಾರದ ನಿರ್ಲಜ್ಜ ನಡೆ, ಇಪಿಎಸ್ ನಿವೃತ್ತರನ್ನು ಈ ಸ್ಥಿತಿಗೆ ತಂದು ನಿಲ್ಲಿಸಿದೆ. ಏನೇ ಆಗಲಿ ನಾವೆಲ್ಲರೂ ಒಂದೇ, ಒಗ್ಗಟ್ಟಾಗಿ ನಮ್ಮ ಗುರಿ ಮುಟ್ಟಲು ಪ್ರಯತ್ನಿಸೋಣ ಎಂದು ಕರೆ ನೀಡಿದ್ದಾರೆ.

ಈ 98ನೇ ಮಾಸಿಕ ಸಭೆಗೆ ಸಂಘದ ಎಲ್ಲ ಪದಾಧಿಕಾರಿಗಳು, ಚಿಕ್ಕಬಳ್ಳಾಪುರ ಕೆಎಸ್‌ಆರ್‌ಟಿಸಿ ಕ್ಷೇಮಾಭಿವೃದ್ಧಿ ಟ್ರಸ್ಟಿನ ಪದಾಧಿಕಾರಿಗಳು, ಸದಸ್ಯರು,2020 ರ ನಂತರ ಸಂಸ್ಥೆಯ ಸೇವೆಯಿಂದ ನಿವೃತ್ತರಾದ ನೌಕರರ ಬಾಕಿ ವೇತನ ಹಾಗೂ ಸಂಸ್ಥೆಯ ಸೇವೆಯಿಂದ ಇತ್ತೀಚಿಗೆ ನಿವೃತ್ತರಾದ ನೌಕರರಿಗೆ ಕೈಗಾರಿಕಾ ಒಪ್ಪಂದದ ಪ್ರಕಾರ ಫಿಕ್ಸ್ಯೇಷನ್ ಆಗಬೇಕಾಗಿದ್ದು, ನೌಕರರ ಈ ಎಲ್ಲ ಕುಂದು ಕೊರತೆಗಳ ಬಗ್ಗೆ ಚರ್ಚಿಸಲಾಗುವುದು. ಹಲವಾರು ಕಾರ್ಮಿಕ ಮುಖಂಡರು ಹಾಗೂ ಇತರೆ ಕಾರ್ಖಾನೆ ಹಾಗೂ ಕಂಪನಿಗಳ ನಿವೃತ್ತರು, ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಈ ವೇಳೆ ಮುಖಂಡರು ಇತ್ತೀಚಿನ ಎಲ್ಲ ಬೆಳವಣಿಗೆಗಳು ಹಾಗೂ ನಮ್ಮ ಮುಂದಿನ ಹೋರಾಟದ ರೂಪುರೇಷೆಗಳ ಬಗ್ಗೆ ಮಾತನಾಡಲಿದ್ದಾರೆ. ಹೀಗಾಗಿ ತಾವೆಲ್ಲರೂ ಭಾನುವಾರ ಬೆಳಗ್ಗೆ 8 ಗಂಟೆಗೆ ಆಗಮಿಸಬೇಕು ಎಂದು ಕಾರ್ಯಕಾರಿ ಸಮಿತಿ ಪರವಾಗಿ ನಂಜುಂಡೇಗೌಡ ವಿನಂತಿಸಿ ಕೊಂಡಿದ್ದಾರೆ.

Megha
the authorMegha

1 Comment

  • The gatherings at Lalbagh and the awareness campaigns over the years have really brought attention to the concerns of pensioners. It’s important for them to continue pushing for their rights.

Leave a Reply

error: Content is protected !!