ಬೆಂಗಳೂರು: ಕರ್ನಾಟಕದಲ್ಲಿ ಇಂದು ಕೊರೊನಾ ರೌದ್ರಾವತಾರ ಮುಂದುವರಿಸಿದ್ದ ಇಂದು ದಾಖಲೆಯ 7,330ಪ್ರಕರಣ ಪತ್ತೆಯಾಗಿದ್ದು 93 ಮಂದಿ ಬಲಿಯಾಗಿದ್ದಾರೆ.
ರಾಜ್ಯದಲ್ಲಿ 7,330 ಕೊರೊನಾ ಸೋಂಕು ಪತ್ತೆಯಾಗಿದ್ದು ಒಟ್ಟಾರೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 2,71,876ಕ್ಕೆ ಏರಿಕೆಯಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 4,631ಕ್ಕೆ (ಅನ್ಯ ಕಾರಣಕ್ಕೆ 16ಸೇರಿ) ಏರಿಕೆಯಾಗಿದೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ರಾಜ್ಯದಲ್ಲಿ ಚೇತರಿಕೆ ಪ್ರಮಾಣವು ಹೆಚ್ಚಾಗಿದ್ದು ಇಂದು 7626 ಮಂದಿ ಗುಣಮುಖರಾಗಿದ್ದಾರೆ. ಒಟ್ಟಾರೆ 2,71,876 ಕೊರೊನಾ ಸೋಂಕಿತರಲ್ಲಿ 1,84,568 ಮಂದಿ ಗುಣಮುಖರಾಗಿದ್ದು ಇನ್ನು 82,677 ಮಂದಿ ನಿಗದಿತ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಭಾರತ ಸೇರಿದಂತೆ ವಿಶ್ವದ ಎಲ್ಲಾ ದೇಶಗಳ ಕೊರೊನಾ ಅಂಕಿ ಅಂಶಗಳನ್ನು ತಿಳಿಯಲು ಇಲ್ಲಿ ಕ್ಲಿಕ್ಕಿಸಿ https://www.worldometers.info/coronavirus/#countries
ಬೆಂಗಳೂರಿನಲ್ಲಿ ಇಂದು 2,979 ಮಂದಿ ಕೊರೊನಾಗೆ ಒಳಗಾಗಿದ್ದು, ಸೋಂಕಿತರ ಸಂಖ್ಯೆ 1,05,749ಕ್ಕೆ ಏರಿಕೆಯಾಗಿದೆ. ಇಂದು 28 ಮಂದಿ ಮೃತಪಟ್ಟಿದ್ದು ಒಟ್ಟಾರೆ ಸಾವಿನ ಸಂಖ್ಯೆ 1,663ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಈವರೆಗೆ 69,861ಮಂದಿ ಗುಣಮುಖರಾಗಿದ್ದು, 34,224 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಬುಲೆಟಿನ್ ನಲ್ಲಿ ತಿಳಿಸಿದೆ.
ಇಂದಿನ 22/08/2020 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.@CMofKarnataka @BSYBJP @DVSadanandGowda @SureshAngadi_ @MoHFW_INDIA @UNDP_India @WHOSEARO @UNICEFIndia @sriramulubjp @drashwathcn @BSBommai https://t.co/neUDyQ02wH pic.twitter.com/7KsjECE4Ps
— K'taka Health Dept (@DHFWKA) August 22, 2020