NEWSನಮ್ಮಜಿಲ್ಲೆ

ಡಾ. ನಾಗೇಂದ್ರ ಆತ್ಮಹತ್ಯೆ: ಮೈಸೂರಿನಲ್ಲಿ 4ನೇ ದಿನಕ್ಕೆ ಕಾಲಿಟ್ಟ ವೈದ್ಯರ ಮುಷ್ಕರ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಕೆಲಸದ ಒತ್ತಡ ಹಾಗೂ ಹಿರಿಯ ಅಧಿಕಾರಿಗಳ ಕಿರುಕುಳದಿಂದ ಮನನೊಂದ  ನಂಜನಗೂಡು ತಾಲೂಕು ಆರೋಗ್ಯಾಧಿಕಾರಿ ಡಾ.ನಾಗೇಂದ್ರ ಗುರುವಾರ ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆಯಲ್ಲಿ ಕಿರುಕುಳ ನೀಡಿದ ಅಧಿಕಾರಿಯನ್ನು ಅಮಾನತು ಮಾಡುವಂತೆ ಒತ್ತಾಯಿಸಿ ಮೈಸೂರಿನಲ್ಲಿ ವೈದ್ಯರು ನಡೆಸುತ್ತಿರುವ ಪ್ರತಿಭಟನಾ ಧರಣಿ 4ನೇ ದಿನಕ್ಕೆ ಕಾಲಿಟ್ಟಿದೆ.

ಈ ನಡುವೆ ಸರ್ಕಾರ ಜಿಲ್ಲಾ ಪಂಚಾಯಿತಿ ಸಿಇಒ ಪಿ.ಕೆ. ಮಿಶ್ರ ಅವರನ್ನು ವರ್ಗಾವಣೆ ಮಾಡಿದೆ. ಆದರೆ ಅದಕ್ಕೆ ಒಪ್ಪದ ವೈದ್ಯರು ಸಿಇಒ ಅವರನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸಿ ತಮ್ಮ ಪ್ರತಿಭಟನೆ ಮುಂದುವರಿಸಿದ್ದಾರೆ. ಇದರಿಂದ ಕಳೆದ ಎರಡು ದಿನದಿಂದ ಯಾವುದೇ ಕೋವಿಡ್‌ ಟೆಸ್ಟ್‌ ಆಗಿಲ್ಲ. ಇದರಿಂದ ಒಂದೆಡೆ ಕೊರೊನಾ ಸೋಂಕಿತರ ಸಂಖ್ಯೆ ಜಿಲ್ಲೆಯಲ್ಲಿ ಎಷ್ಟಾಗುವುದು ಎಂಬ ಭಯದಲ್ಲಿ ಅಧಿಕಾರಿಗಳು ಕಂಗಾಲಾಗಿದ್ದಾರೆ.

ಆದರೆ ವೈದ್ಯರು ನಾವು ಪ್ರತಿಭಟನೆ ಕೈಬಿಡುತ್ತೇವೆ ನೀವು ಅಧಿಕಾರಿಯ ಪರ ನಿಂತು ತನಿಖೆಗೆ ಸೂಚಿಸಿದ್ದೀರಿ ತನಿಖೆ ಪೂರ್ಣಗೊಂಡ ನಂತರ ಸತ್ಯಾಸತ್ಯತೆ ತಿಳಿದು ಅಧಿಕಾರಿ ವಿರುದ್ಧ ಕ್ರಮ ಜರುಗಿಸುವುದಾಗಿ ಹೇಳುತ್ತಿದ್ದೀರಿ. ಅದೇ ರೀತಿ ಕೊರೊನಾ ವಾರಿಯರ್ಸ್‌ಗಳನ್ನು ಕೂಡಲೇ ಅಮಾನತು ಮಾಡದೇ ತನಿಖೆ ನಡೆಸಿ ಸತ್ಯಾಸತ್ಯತೆ ತಿಳಿದ ಬಳಿಕ ಅಮಾನತು ಮಾಡುತ್ತೇವೆ ಎಂದು ಲಿಖಿತ ಹೇಳಿಕೆ ನೀಡುವಂತೆ ಒತ್ತಾಯಿಸಿದ್ದಾರೆ.

ಅದಕ್ಕೆ ಸರ್ಕಾರ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ ವೈದ್ಯಕೀಯ ಶೀಕ್ಷಣ ಸಚಿವ ಡಾ.ಸುಧಾಕರ್‌ ನಿಮಗೆ ಇಷ್ಟವಿದ್ದರೆ ಕೆಲಸಮಾಡಿ ಇಲ್ಲದಿದ್ದರೆ ತೊಲಗಿ ಎಂದು ಖಾರವಾಗಿ ಹೇಳಿದ್ದಾರೆ ಎಂದು ಹೇಳಲಾಗುತ್ತಿದ್ದು, ಇದರಿಂದ ವೈದ್ಯ ಸಮೂಹ ಕೆರಳುವ ಸಾಧ್ಯತೆ ಹೆಚ್ಚಾಗಿದೆ.

1 Comment

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?