ಮೈಸೂರು: ಜಿಲ್ಲೆಯಲ್ಲಿ ಇಂದು ಕೊರೊನಾ ಮಹಾಮಾರಿ ತನ್ನ ಆರ್ಭಟವನ್ನು ಸ್ವಲ್ಪಮಟ್ಟಿಗೆ ತಗ್ಗಿಸಿದ್ದು 1,331 ಪ್ರಕರಣಗಳಷ್ಟೇ ಪತ್ತೆಯಾಗಿದ್ದು 16 ಮಂದಿ ಮೃತಪಟ್ಟಿದ್ದಾರೆ.
ಒಟ್ಟಾರೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 13,929ಕ್ಕೆ ಏರಿಕೆಯಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 361ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿನಿಂದ 469 ಮಂದಿ ಮುಕ್ತಗೊಂಡು ಮನೆಗೆ ಮರಳಿದ್ದಾರೆ. ಇದರೊಂದಿಗೆ ಈವರೆಗೆ 10,011 ಮಂದಿ ಗುಣಮುಖರಾಗಿದ್ದಾರೆ. ಇನ್ನು 3,557 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಬುಲೆಟಿನ್ ನಲ್ಲಿ ತಿಳಿಸಿದೆ.