NEWSಉದ್ಯೋಗನಮ್ಮರಾಜ್ಯ

ಕರ್ನಾಟಕ ಸರ್ಕಾರದ ನೇಮಕಾತಿಯಲ್ಲಿ ಎಲ್ಲ ವರ್ಗದ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ:  ಸಂಪುಟ  ತೀರ್ಮಾನ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ಸಿವಿಲ್ ಸೇವಾ ಹುದ್ದೆಗಳ ನೇಮಕಾತಿಯಲ್ಲಿ ಎಲ್ಲ ವರ್ಗದ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಮಾಡುವ ಬಗ್ಗೆ ಸರ್ಕಾರ ಮಹತ್ವದ ನಿರ್ಣಯವನ್ನು ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡಿದೆ.

ಹೌದು! 2027ರ ಡಿಸೆಂಬರ್ 31 ರವರೆಗೆ ಸರ್ಕಾರ ಹೊರಡಿಸಿರುವ ಎಲ್ಲ ಅಧಿಸೂಚನೆಗಳಿಗೆ ಅನ್ವಯವಾಗುವಂತೆ ಎಲ್ಲ ವರ್ಗದ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಮಾಡಲು ಇಂದು ನಡೆದ ಸಚಿವ ಸಂಪುಟದಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಈ ಸಚಿವ ಸಂಪುಟ ಸಭೆಯ ನಿರ್ಧಾರದಿಂದ ಸಾಮಾನ್ಯ ವರ್ಗಕ್ಕೆ ಈಗ ಇರುವ 35 ವರ್ಷದ ವಯೋಮಿತಿ ಬದಲಿಗೆ ಅದು 40 ವರ್ಷಕ್ಕೆ ಅನ್ವಯ ಆಗುವಂತೆ ವಿಸ್ತರಣೆಯಾಗಿದೆ. ಇನ್ನು ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ ಈಗ ಇರುವ 38 ವರ್ಷ ವಯೋಮಿತಿ 43 ವರ್ಷಗಳಿಗೆ ಅನ್ವಯವಾಗುವಂತೆ ವಿಸ್ತರಣೆ ಆಗಿದೆ.

ಗೋ ಬ್ಯಾಕ್ ಗವರ್ನರ್ ನಿರ್ಣಯ ಮಾಡಲು ಚರ್ಚೆ: ಇಂದು ನಡೆದ ಜಂಟಿ ಅಧಿವೇಶನದಲ್ಲಿ ಸರ್ಕಾರ ಭಾಷಣ ಓದದೇ ತೆರಳಿದ ರಾಜ್ಯಪಾಲರ ನಡೆಗೆ ಸಚಿವ ಸಂಪುಟ ಸಭೆಯಲ್ಲಿ ಅಸಮಾಧಾನ ಹೊರಹಾಕಲಾಗಿದೆ. ಗೋ ಬ್ಯಾಕ್ ಗವರ್ನರ್ ನಿರ್ಣಯ ಮಾಡಲು ಚರ್ಚೆ ನಡೆಸಲಾಗಿದೆ. ರಾಜ್ಯಪಾಲರನ್ನ ವಾಪಸ್ ಕರೆಸಿಕೊಳ್ಳುವಂತೆ ನಿರ್ಣಯ ತೆಗೆದುಕೊಳ್ಳುವ ಬಗ್ಗೆ ಗಂಭೀರ ಚರ್ಚೆ ನಡೆದಿದೆ.

ರಾಜ್ಯಪಾಲರನ್ನು ವಾಪಸ್ ಕರೆಸಿಕೊಳ್ಳುವಂತೆ ರಾಷ್ಟ್ರಪತಿಗಳಿಗೆ ಪತ್ರ ಬರೆಯುವ ಸಂಬಂಧ ಚರ್ಚೆ ನಡೆಸಲಾಗಿದೆ. ಗವರ್ನರ್ ಗೋ ಬ್ಯಾಕ್ ಅಭಿಯಾನ ನಡೆಸುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ಇಂದಿನ ಘಟನೆಯನ್ನು ರಾಜ್ಯ ಸರ್ಕಾರ ಬಹಳ ಗಂಭೀರವಾಗಿ ಪರಿಗಣಿಸಿದೆ.

ಇದೇ ವೇಳೆ, ರಾಜ್ಯದ 22 ಹಿಂದುಳಿದ ಹಾಗೂ ದಲಿತ ಮಠಗಳಿಗೆ ಜಾಗ ಮಂಜೂರು ಮಾಡಲು ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ. ಬೆಂಗಳೂರು ನಗರ ಜಿಲ್ಲೆ, ಉತ್ತರ ತಾಲೂಕಿನ ದಾಸನಪುರ ಹೋಬಳಿಯಲ್ಲಿ ಜಾಗ ಮಂಜೂರಿಗೆ ಒಪ್ಪಿಗೆ ನೀಡಲಾಗಿದೆ. ರಾವುತ್ತನಹಳ್ಳಿ ಗ್ರಾಮದ ಸರ್ವೇ 57 ಮತ್ತು 58 ರಲ್ಲಿರುವ ಸರ್ಕಾರಿ ಜಮೀನು ದಲಿತ ಹಾಗೂ ಹಿಂದೂಳಿದ ವರ್ಗಗಳ 22 ಮಠಗಳಿಗೆ ಮಂಜೂರು ಮಾಡಲು ಸಮ್ಮತಿ ಸೂಚಿಸಿದೆ.

Megha
the authorMegha

Leave a Reply

error: Content is protected !!
Latest news
ಮಾತುಕತೆ ಯಶಸ್ವಿ: ಆರ್‌ಟಿಸಿ ಮುಷ್ಕರ ಅಂತ್ಯ-ಇಂದಿನಿಂದ ಬಸ್ ಸೇವೆ ಪುನಾರಂಭ ಏ.27ರಂದು ಪಿಎಫ್ ಕಚೇರಿ ಮುಂದೆ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ : ನಂಜುಂಡೇಗೌಡ BMS ಸಂಘಟನೆಯ ಹೋರಾಟ: ನೌಕರರ ಧ್ವನಿಗೆ ಸ್ಪಂದಿಸಿದ ಸರ್ಕಾರ- ಸೂಕ್ತ ವ್ಯವಸ್ಥೆ ಮಾಡದೆ ಬಿಟ್ಟಿ ಸಲಹೆ ಕೊಟ್ಟ ಎಂಡಿ ಅಕ್ರಮ... NWKRTC: ಬ್ಯಾಡಗಿ ಬಸ್‌ ನಿಲ್ದಾಣದಲ್ಲಿ ಎರಡು ಬಸ್‌ಗಳ ಮಧ್ಯೆ ಸಿಲುಕಿದ ಕಾಲೇಜು ವಿದ್ಯಾರ್ಥಿ- ಚಿಂತಾಜನಕ ಸ್ಥಿತಿ ಸಾರಿಗೆ ನೌಕರರ ಮುಷ್ಕರ: ಆತ್ಮಹತ್ಯೆಗೆ ಯತ್ನಿಸಿದ ನರಸಂಪೇಟೆ ಡಿಪೋ ಚಾಲಕ ಶಂಕರ್ ಗೌಡ್ ಚಿಕಿತ್ಸೆ ಫಲಿಸದೆ ಮೃತ ಬೇಡಿಕೆ ಈಡೇರಿಸದ ಸರ್ಕಾರ: ಸಾರಿಗೆ ನೌಕರ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನ- ಸಾವು ಬದುಕಿನ ನಡುವೆ ಹೋರಾಟ KSRTC ನೌಕರರ ಏಪ್ರಿಲ್‌ ತಿಂಗಳ ವೇತನ ಏ.30ರಂದೆ ಪಾವತಿಸಲು ಎಂಡಿ ಆದೇಶ ಎಸ್‌ಎಸ್ಎಲ್‌ಸಿ ಪರೀಕ್ಷೆಗೆ ಹಾಜರಾದರೂ ಹಾಜರಾಗಿಲ್ಲ ಅಂತ ಅಂಧ ವಿದ್ಯಾರ್ಥಿನಿಯ ಫೇಲ್ ಮಾಡಿದ ಮಂಡಳಿ ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ - ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ 11ನೇ ಸ್ಥಾನ SSLC ಪರೀಕ್ಷಾ ಫಲಿತಾಂಶ ಅಧಿಕೃತ ಪ್ರಕಟ: ಶೇ.94.1 ತೇರ್ಗಡೆ ಹುಡುಗಿಯರೇ ಈ ಬಾರಿಯೂ ಮೇಲುಗೈ