NEWSನಮ್ಮರಾಜ್ಯರಾಜಕೀಯ

ಶೀಘ್ರದಲ್ಲೇ ಮೆಟ್ರೋ ಸೇವೆ ಪುನಾರಂಭ: ಸಿಎಂ ಬಿಎಸ್‌ವೈ

ಬೆಂಗಳೂರಿನ ಆನಂದ್ ರಾವ್ ಸರ್ಕಲ್ ಮೇಲ್ಸೇತುವೆಗೆ ಸಂಗೊಳ್ಳಿ ರಾಯಣ್ಣ ಹೆಸರು ನಾಮಕರಣ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೊರೊನಾ ಸೋಂಕಿನ ನಡುವೆಯೂ ಜನಜೀವನ  ಸಹಜಸ್ಥಿತಿಗೆ ಬರುತ್ತಿದ್ದು,  ಈ ನಡುವೆ ಎಲ್ಲಾ ಮುಂಜಾಗೃತಾ ಕ್ರಮ ಕೈಗೊಳ್ಳಲಾಗಿದೆ.  ಹೀಗಾಗಿ ಮೆಟ್ರೋ ಸೇವೆಯನ್ನು ಕೂಡ ಶೀಘ್ರವೇ ಪ್ರಾರಂಭ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಬೆಂಗಳೂರಿನ ಆನಂದ್ ರಾವ್ ಸರ್ಕಲ್ ನ ಮೇಲ್ಸೇತುವೆಗೆ ಸಂಗೊಳ್ಳಿ ರಾಯಣ್ಣ ಹೆಸರು ನಾಮಕರಣ ನೆರವೇರಿಸಿದ ಬಳಿಕ ಅವರು ಮಾತನಾಡಿದರು. ಇದಕ್ಕೂ ಮುನ್ನ ಮೆಜೆಸ್ಟಿಕ್ ಬಸ್ಸು ನಿಲ್ದಾಣ ಬಳಿ ಇರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಬಳಿಕ ಕಾಲ್ನಡಿಗೆಯಲ್ಲೇ ತೆರಳಿ ಮೇಲ್ಸೇತುವೆ ಉದ್ಘಾಟನೆ ಮಾಡಿದರು.

ರಾಯಣ್ಣ ನಮ್ಮ ಯುವ ಜನತೆಗೆ ಅತ್ಯುತ್ತಮ ಸ್ಫೂರ್ತಿಯಾಗಲಿ. ಇಂತಹ ಮಹಾನ್ ವ್ಯಕ್ತಿಯ ಹೆಸರು ಮೇಲ್ಸೇತುವೆ ಇಟ್ಟಿರುವುದು ಔಚಿತ್ಯಪೂರ್ಣವಾಗಿದೆ. ಕಾರಣ ರಾಯಣ್ಣ ಬ್ರಿಟಿಷರ ವಿರುದ್ಧ ಹೋರಾಡಿದ ಕನ್ನಡದ ಕಲಿ. ಕಿತ್ತೂರು ರಾಣಿ ಚೆನ್ನಮ್ಮ ಅವರ ಬಲಗೈ ಬಂಟರಾಗಿ ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿಯ ವಿರುದ್ಧ ಕೊನೆಯ ಉಸಿರು ಇರುವವರೆಗೂ ಹೋರಾಟ ನಡೆಸಿದವರು. ಹೀಗಾಗಿ ಮೇಲ್ಸೇತುವೆಗೆ ರಾಯಣ್ಣ ಹೆಸರು ನಾಮಕರಣ ಮಾಡಿದ್ದೇವೆ ಎಂದರು.

ಬೆಂಗಳೂರು ಮೂಲಭೂತ ಸೌಕರ್ಯ ಸುಧಾರಣೆಗೆ ಅಗತ್ಯ ಕ್ರಮಗಳನ್ನು ಸರ್ಕಾರ ಕೈಗೊಳ್ಳುತ್ತಿದೆ. ಬೆಂಗಳೂರಿಗೆ ಹೆಚ್ಚಿನ ಆದ್ಯತೆ ಕೊಡುವುದು ರಾಜ್ಯ ಮತ್ತು ದೇಶದ ಆರ್ಥಿಕ ಬೆಳವಣಿಗೆಗೆ ಅಗತ್ಯವಾಗಿದೆ. ನಗರದ ವಾಹನ ದಟ್ಟಣೆ ನಿವಾರಿಸಲು ಈ ಮೇಲ್ಸೇತುವೆ ಸಹಕಾರಿಯಾಗಲಿದೆ. ಬೆಂಗಳೂರು ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದರು.

ಬೆಳೆಗಾವಿ ಪ್ರತಿಮೆ ಗಲಾಟೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ, ನಿನ್ನೆ ಸ್ವಾಮೀಜಿಗಳು ತಮ್ಮನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ. ಉಸ್ತುವಾರಿ ಸಚಿವರಿಗೆ ಸಮಸ್ಯೆ ಬಗೆಹರಿಸಲು ಸೂಚನೆ ನೀಡಿದ್ದೇನೆ. ಇಂದು ಸಚಿವರು ಸಭೆ ನಡೆಸಿ ಗೊಂದಲ ಪರಿಹಾರ ಮಾಡುತ್ತಾರೆ ಎಂದು ಯಡಿಯೂರಪ್ಪ ಹೇಳಿದರು.

ಗಾಂಧಿನಗರ ಶಾಸಕ ದಿನೇಶ್ ಗುಂಡೂರಾವ್ ಮಾತನಾಡಿ, ಗಾಂಧಿನಗರ ಕ್ಷೇತ್ರದಲ್ಲಿ ರಾಯಣ್ಣ ಸ್ಮರಣೆ ‌ಮಾಡುವ ಸ್ಮಾರಕಗಳು ಬಂದಿರುವುದು ಸಂತಸದ ವಿಚಾರ. ಬೆಳಗಾವಿ ಬಿಟ್ಟರೆ ಗಾಂಧಿನಗರ ಕ್ಷೇತ್ರದಲ್ಲಿ ಅತೀ ಹೆಚ್ಚು ಸ್ಮಾರಕಗಳು ಇವೆ. ಮೇಲುಸೇತುವೆಗೆ ಒಂದು ವರ್ಷದ ಹಿಂದೆಯೇ ಹೆಸರು ಇಡಲಾಗಿದ್ದು, ಇಂದು ಅಧಿಕೃತ ಉದ್ಘಾಟನೆ ಆಗಿದೆ ಎಂದರು.
ಇದಕ್ಕೂ ಮೊದಲು ಸಚಿವ ಈಶ್ವರಪ್ಪ ಮಾತನಾಡಿ, ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿಚಾರದಲ್ಲಿ ಕಾಗಿನೆಲೆ ಶ್ರೀಗಳು ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದ್ದಾರೆ. ಪ್ರತಿಮೆ ನಿರ್ಮಾಣಕ್ಕೆ ಸರ್ಕಾರ ಸಿದ್ಧವಿದೆ. ಆದಷ್ಟು ಬೇಗ ಈ ವಿವಾದ ಬಗೆಹರಿಸುತ್ತೇವೆ. ತಾವು ಕೂಡ ಬೆಳಗಾವಿಗೆ ತೆರಳುತ್ತೇನೆ ಎಂದರು.

ಟಿಪ್ಪು ಸುಲ್ತಾನ್ ವಿಚಾರದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಈಶ್ವರಪ್ಪ, ಅದು ಮುಗಿದ ವಿಚಾರ. ಈ ನೆಲದಲ್ಲಿ ಅನೇಕರು ಹುಟ್ಟಿದ್ದಾರೆ. ಅನೇಕರು ಸತ್ತಿದ್ದಾರೆ. ವಿಶ್ವನಾಥ್ ಈಗಷ್ಟೇ ಬಿಜೆಪಿಗೆ ಬಂದಿದ್ದಾರೆ. ಅವರು ಈ ಹೇಳಿಕೆ ನೀಡುವ ಅವಶ್ಯಕತೆ ಇರಲಿಲ್ಲ. ತಾವು ವಿಶ್ವನಾಥ್ ರವರ ಜೊತೆ ಮಾತನಾಡುತ್ತೇನೆ ಎಂದರು.

ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವಥ್ ನಾರಾಯಣ, ಸಚಿವ ಭೈರತಿ ಬಸವರಾಜ್, ಸ್ಥಳೀಯ ಶಾಸಕ ದಿನೇಶ್ ಗುಂಡೂರಾವ್, ಮೇಯರ್ ಗೌತಮ್ ಕುಮಾರ್ ಸೇರಿ ಹಲವರು ಉಪಸ್ಥಿತರಿದ್ದರು.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?