NEWSನಮ್ಮಜಿಲ್ಲೆನಮ್ಮರಾಜ್ಯ

ಕರ್ನಾಟಕ ವಿದ್ಯುತ್ ಕಾರ್ಖಾನೆ ಸಂಸ್ಥೆ ನೌಕರರಿಗೂ 7ನೇ ವೇತನ: 2024ರ ಆ.1ರಿಂದಲೇ ಪೂರ್ವಾನ್ವಯ- ಸರ್ಕಾರದ ಆದೇಶ

ವಿಜಯಪಥ ಸಮಗ್ರ ಸುದ್ದಿ
  •  KAVIKA  ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸುಗಳನ್ವಯ  ಜಾರಿಗೆ ಬರುವಂತೆ  ಆರ್ಥಿಕ ಇಲಾಖೆಯಿಂದಲೂ ಒಪ್ಪಿಗೆ

ಬೆಂಗಳೂರು: ಕರ್ನಾಟಕ ವಿದ್ಯುತ್ ಕಾರ್ಖಾನೆ ಸಂಸ್ಥೆಯ (ಕವಿಕ) ಅಧಿಕಾರಿ/ ಉದ್ಯೋಗಿಗಳಿಗೂ 7ನೇ ವೇತನ ಆಯೋಗದ ಶಿಫಾರಸುಗಳನ್ನು ಅನುಷ್ಠಾನಗೊಳಿಸಿ ಇಂಧನ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಶಾಂತರಾಮ ಗುರುವಾರ ಆದೇಶ ಹೊರಡಿಸಿದ್ದಾರೆ.

ಈ ಸಂಬಂಧ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು ಕವಿಕ ವ್ಯವಸ್ಥಾಪ ನಿರ್ದೇಶಕರಿಗೆ ಈ ಅಧಿಕಾರಿ/ ಉದ್ಯೋಗಿಗಳಿಗೂ 7ನೇ ವೇತನ ಆಯೋಗದ ಶಿಫಾರಸುಗಳನ್ನು 2024ರ ಆಗಸ್ಟ್‌ 1ರಿಂದ ಪೂರ್ವಾನ್ವಯವಾಗುವಂತೆ ಅನುಷ್ಠಾನಗೊಳಿಸಲು ತಿಳಿಸಿದ್ದಾರೆ.

ಈ ವಿಷಯಕ್ಕೆ ಸಂಬಂಧಿಸಿದಂತೆ, ಉಲೇಖಿತ ಪತ್ರದನ್ವಯ ಸರ್ಕಾರಕ್ಕೆ ಸಲ್ಲಿಸಿರುವ ಪ್ರಸ್ತಾವನೆಯನ್ನು ಪರಿಶೀಲಿಸಲಾಯಿತು. ಈ ವಿಷಯದಲ್ಲಿ ಆರ್ಥಿಕ ಇಲಾಖೆ 19.01.2026ರ ಹಿಂಬರಹದಲ್ಲಿ ಕರ್ನಾಟಕ ವಿದ್ಯುತ್ ಕಾರ್ಖಾನೆ ಸಂಸ್ಥೆಯ (KAVIKA) ಕಾಯಂ ಅಧಿಕಾರಿ/ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸುಗಳನ್ವಯ 01.08.2034 ರಿಂದಲೇ ಪೂರ್ವಾನ್ವಯವಾಗಿ ಜಾರಿಗೆ ಬರುವಂತೆ ವೇತನ ಪರಿಷ್ಕರಿಸಲು ಷರತ್ತುಗಳೊಂದಿಗೆ ಸಹಮತಿಸಿದೆ ಎಂದು ತಿಳಿಸಿದ್ದಾರೆ.

ಷರತ್ತುಗಳು ಏನು?:
1) ಈ ಸಂಬಂಧ ತಗಲುವ ವೆಚ್ಚವನ್ನು ಸಂಸ್ಥೆಯು ತನ್ನ ಆಂತರಿಕ ಸಂಪನ್ಮೂಲಗಳಿಂದ ಭರಿಸತಕ್ಕದ್ದು.
2 ಕಾಲಕಾಲಕ್ಕೆ ಅನ್ವಯವಾಗುವ ಲಾಭಾಂಶವನ್ನು ಸರ್ಕಾರಕ್ಕೆ ಪಾಲಿಸಕ್ಕದ್ದು.
3) ಅರ್ಥಿಕ ಇಲಾಖೆಯಿಂದ ಕಾಲಕಾಲಕ್ಕೆ, ಹೊರಡಿಸಲಾಗಿರುವ/ ಹೊರಡಿಸಲಾಗುವ ಮಾರ್ಗಸೂಚಿಗಳನ್ನು ಪಾಲಿಸಕ್ಕದ್ದು ಎಂಬ ಷರತ್ತುಗಳನ್ನು ಹಾಕಿದೆ.

ಇನ್ನು ಇದರಂತೆ, ಕರ್ನಾಟಕ ವಿದ್ಯುತ್ ಕಾರ್ಖಾನೆ ಸಂಸ್ಥೆಯ (KAVIKA) ಕಾಯಂ ಅಧಿಕಾರಿ/ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸುಗಳನ್ವಯ 01.08.2024 ರಿಂದಲೇ ಪೂರ್ವಾನ್ವಯವಾಗಿ ಜಾರಿಗೆ ಬರುವಂತೆ ಆರ್ಥಿಕ ಸೌಲಭ್ಯಗಳನ್ನು ವಿಸ್ತರಿಸಲು ನಿಯಮಾನುಸಾರ ಕ್ರಮವಹಿಸುವಂತೆ ವ್ಯವಸ್ಥಾಪ ನಿರ್ದೇಶಕರಿಗೆ ತಿಳಿಸಲು ನಿರ್ದೇಶಿಸಲ್ಪಟ್ಟಿದ್ದೇನೆ ಎಂದು ಸರ್ಕಾರದ ಅಧೀನ ಕಾರ್ಯದರ್ಶಿ ಶಾಂತರಾಮ ಆದೇಶದಲ್ಲಿ ತಿಳಿಸಿದ್ದಾರೆ.

Megha
the authorMegha

Leave a Reply

error: Content is protected !!